ಬಾಗಲಕೋಟೆ
ಕಲೆ, ವಾಣಿಜ್ಯ ಅಥವಾ ವಿಜ್ಞಾನ ಯಾವುದೇ ಕ್ಷೇತದಲ್ಲಾದರೂ ಸಾಧನೆ ಮಾಡಬಹುದು. ಅದಕ್ಕಾಗಿ ನಮ್ಮ ವ್ಯಕ್ತಿತ್ವ ಪರಿಶುದ್ಧವಾಗಿ ಇರಬೇಕೆಂದು ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಡಾಪುನಿತ್ ಹೇಳಿದರು.
ನಗರದ ವಿದ್ಯಾಗಿರಿಯ ಜ್ಯೋತಿ ಕಾಲೋನಿಯಲ್ಲಿನ ಸಮೃದ್ಧಿ ಗುರುಕುಲ ಶಾಲೆಯಲ್ಲಿ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ, ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಕ್ಯಾಂಪಸ್, ಜಿಲ್ಲಾ ನೈಸರ್ಗಿಕ ಸಂಪನ್ಮೂಲ ದತ್ತಾಂಶ ನಿರ್ವಹಣ ಯೋಜನೆ, ಜಿಲ್ಲಾ ಪಂಚಾಯತ್ ನ್ಯಾಷನಲ್ ಕೌನ್ಸಿಲ್ ಫಾರ್ ಸೈನ್ಸ್ ಅಂಡ್ ಟೆಕ್ನಾಲಜಿ ಕಮ್ಯುನಿಕೇಷನ್, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ರಾಷ್ಟಿçÃಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯ ನೋಡಲ್ ಅಕಾರಿ ಚಂದ್ರಶೇಖರ್, ವಿಜ್ಞಾನದ ಪ್ರತಿಜ್ಞಾವಿ, ವೈಜ್ಞಾನಿಕ ಮತ್ತು ವೈಚಾರಿಕ ಮನೋಭಾವನೆ ಬೆಳೆಸಿಕೊಳ್ಳಲು ಸಂವಿಧಾನದ ಪ್ರತಿಜ್ಞಾವಿ ಬೋಧಿಸಿದರು.
ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಂಡ ಪ್ರಭಂದ ಸ್ಪರ್ಧೆಯಲ್ಲಿ ವಿಜೇತ ಪಕ್ಕಳಿಗೆ ಜಿಪಂ ಉಪ ಕಾರ್ಯದರ್ಶಿ ಅಮರೇಶ ನಾಯಕ್ ಬಹುಮಾನ ವಿತರಿಸಿ ಮಾತನಾಡಿ, ಸ್ಪರ್ಧೆಯಲ್ಲಿ ಸೋಲು ಗೆಲವು ಸಾಮಾನ್ಯ, ಸ್ಪರ್ಧೆಯಲ್ಲಿ ಭಾಗವಹಿಸುವ ಧೈರ್ಯ ಬೆಳೆಸಿಕೊಳ್ಳುವುದು ಮುಖ್ಯ ಎಂದರು.
ಜಿಪಂ ಯೋಜನಾ ನಿರ್ದೇಶಕ ಎನ್.ವೈ.ಬಸರಿಗಿಡದ, ಸಮೃದ್ಧಿ ಗುರುಕುಲ ಶಾಲೆಯ ಕಾರ್ಯನಿರ್ವಾಹಕ ಕಾರ್ಯದರ್ಶಿ ಬಿ.ಎನ್.ಪಾಟೀಲ್, ಪ್ರಾಚಾರ್ಯ ಬಿ.ಎಸ್.ಕಲಗುಡಿ, ಡಿಡಿಪಿಐ ಕಚೇರಿಯ ವಿಜ್ಞಾನ ಪರಿಕ್ಷಕ ಬಾಳಿಕಾಯಿ, ಶಿಕ್ಷಣ ಸಂಯೋಜಕ ಪಿ.ಬಿ.ಪಾಟೀಲ್ ಇತರರಿದ್ದರು.