This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

State News

ಬೆಂಗಳೂರಿನಲ್ಲಿ ಜನರಿಗೆ ಕುಡಿಯುವ ನೀರಿಗೆ ಸಮಸ್ಯೆ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು: ಸಿ.ಎಂ ಸಿದ್ದರಾಮಯ್ಯ

ಬೆಂಗಳೂರಿನಲ್ಲಿ ಜನರಿಗೆ ಕುಡಿಯುವ ನೀರಿಗೆ ಸಮಸ್ಯೆ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು: ಸಿ.ಎಂ ಸಿದ್ದರಾಮಯ್ಯ

ಬೆಂಗಳೂರು: ಬೆಂಗಳೂರಿನಲ್ಲಿ ಜನರಿಗೆ ಕುಡಿಯುವ ನೀರಿಗೆ ಸಮಸ್ಯೆ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರಿಂದ ದೂರು ಬಂದಲ್ಲಿ ಅದಕ್ಕೆ ಬಿಬಿಎಂಪಿ ಹಾಗೂ BWSSB ನೇರ ಹೊಣೆ ಎಂದು ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ ನೀಡಿದರು.

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸೋಮವಾರ ನಡೆದ ಅಧಿಕಾರಿಗಳ ಜೊತೆಗಿನ ಸಭೆಯಲ್ಲಿ ಮಾತನಾಡಿದ ಅವರು, ಕಾವೇರಿ, ಕಬಿನಿಯಲ್ಲಿ ಕುಡಿಯುವ ನೀರಿಗೆ ಅಗತ್ಯ ಇರುವಷ್ಟು ನೀರನ್ನು ಸಂಗ್ರಹಿಸಿದ್ದೇವೆ. ಜೂನ್ ಅಂತ್ಯದವರೆಗೂ ಸಾಕಾಗುವಷ್ಟು ನೀರನ್ನು ಸಂಗ್ರಹಿಸಿದ್ದೇವೆ. KRS ನಲ್ಲಿ 11.02, ಕಬಿನಿಯಲ್ಲಿ 9.02 ಟಿಎಂಸಿ ನೀರು ಸಂಗ್ರಹವಿದೆ ಎಂದರು.

14000 ಸರ್ಕಾರಿ ಬೋರ್ ವೆಲ್ ಗಳಲ್ಲಿ 6900 ಬತ್ತಿವೆ. ಹೀಗಾಗಿ ಸಮಸ್ಯೆ ಆಗಿದೆ. 110 ಹಳ್ಳಿಗಳಲ್ಲಿ 55 ಹಳ್ಳಿಗಳಿಗೆ ಸಮಸ್ಯೆ ಆಗಿದೆ. ಜೂನ್ ಅಂತ್ಯಕ್ಕೆ ಕಾವೇರಿ 5 ನೇ ಹಂತದ ಕಾಮಗಾರಿ ಮುಕ್ತಾಯವಾಗಿ 775 MLD ಹೆಚ್ಚುವರಿ ನೀರು ಸಿಗತ್ತೆ. ಇದು 110 ಹಳ್ಳಿಗಳಿಗೆ ಸರಬರಾಜು ಆಗ್ತದೆ ಎಂದು ಮಾಹಿತಿ ನೀಡಿದರು.

313 ಸ್ಥಳಗಳಲ್ಲಿ ಹೊಸದಾಗಿ ಬೋರ್ ವೆಲ್ ಕೊರೆಸುತ್ತಿದ್ದೇವೆ. 1200 ನಿಷ್ಕ್ರಿಯ ಬೋರ್ ಗಳಿಗೆ ಮರುಜೀವ ನೀಡಲಾಗುವುದು. ಕೊಳೆಗೇರಿ, ಎತ್ತರದ ಪ್ರದೇಶದಲ್ಲಿ ಹಾಗೂ ಬೋರ್ ವೆಲ್ ಮೇಲೆ ಅಬಲಂಬಿತ ಪ್ರದೇಶಗಳಲ್ಲಿ KMF ಸೇರಿ ಎಲ್ಲಾ ಖಾಸಗಿ ಟ್ಯಾಂಕರ್ ಗಳನ್ನು ಬಳಸಲು ಹೇಳಿದ್ದೇನೆ. ಕಂಟ್ರೋಲ್ ರೂಮ್ ಗಳ ಸಂಖ್ಯೆ ಹೆಚ್ವಿಸಿ ದೂರು‌ಬಂದ ತಕ್ಷಣ ಆ ಪ್ರದೇಶಗಳಿಗೆ ನೀರು ಸರಬರಾಜು ಮಾಡಲು ಸೂಚಿಸಲಾಗಿದೆ ಎಂದು ವಿವರಿಸಿದರು.

";