This is the title of the web page
This is the title of the web page

Live Stream

December 2024
S M T W T F S
1234567
891011121314
15161718192021
22232425262728
293031  

| Latest Version 9.4.1 |

Politics News

ಮುಧೋಳಕ್ಕೆ ಹೊಸ ಅಗ್ನಿಶಾಮಕ ಠಾಣೆ ಮಂಜೂರಿ:3 ಕೋಟಿ ಅನುದಾನ ಘೋಷಣೆ

ನಿಮ್ಮ ಸುದ್ದಿ ಬಾಗಲಕೋಟೆ

ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಯ ತೀವ್ರ ಅಭಿವೃದ್ಧಿ ಯೋಜನೆ – 2 (K.Safe 2) ಯೋಜನೆಯ ಅನುಷ್ಠಾನಕ್ಕೆ ರಾಜ್ಯದ ಗೃಹ ಇಲಾಖೆ ಆಡಳಿತಾತ್ಮಕ ಅನುಮೋದನೆ ನೀಡಿದ್ದು, ಅದರಂತೆ ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದಲ್ಲಿ ಹೊಸದಾಗಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ 3 ಕೋಟಿ ರೂಪಾಯಿಗಳ ಅನುದಾನ ನೀಡಲಾಗಿದೆ.

ವಿಪತ್ತು ಮತ್ತು ತುರ್ತು ಪರಿಸ್ಥಿತಿ ನಿರ್ವಹಣೆಗಾಗಿ ಮತ್ತು ಸಾರ್ವಜನಿಕರ ಸುರಕ್ಷತೆಯ ಹಿತದೃಷ್ಟಿಯಿಂದ ಈ ಅಗ್ನಿಶಾಮಕ ಠಾಣೆ ನಿರ್ಮಾಣ ಮಾಡಲಾಗುತ್ತಿದ್ದು ಅನುದಾನ ನೀಡಿದ ಗೃಹ ಇಲಾಖೆಯ ಸಚಿವರು ಮತ್ತು ಮುಖ್ಯಮಂತ್ರಿಗಳನ್ನು ಜಲಸಂಪನ್ಮೂಲ ಸಚಿವರಾದ ಶ್ರೀ ಗೋವಿಂದ ಕಾರಜೋಳ ಅವರು ಅಭಿನಂದಿಸಿದ್ದಾರೆ.

ಈ ಅನುದಾನದನ್ವಯ ಅಗ್ನಿಶಾಮಕ ಠಾಣಾ ಕಟ್ಟಡವನ್ನು ನಿರ್ಮಾಣ ಮಾಡಲಾಗುವುದು ಮತ್ತು ಅಗ್ನಿಶಾಮಕ ಮತ್ತು ರಕ್ಷಣಾ ವಾಹನಗಳನ್ನು ಮತ್ತು ಜನಸಾಮಾನ್ಯರ ಸುರಕ್ಷತೆಗೆ ಬೇಕಾದ ಉಪಕರಣಗಳನ್ನು ಖರೀದಿಸಲಾಗುವುದು ಎಂದು ಸಚಿವ ಕಾರಜೋಳ ತಿಳಿಸಿದ್ದಾರೆ.

Nimma Suddi
";