LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜೋಡಿಯ ಭರ್ಜರಿ ವಿಶ್ವ ದಾಖಲೆ

ಭಾರತ-ಸೌತ್ ಆಫ್ರಿಕಾ ನಡುವಣ ಏಕದಿನ ಸರಣಿ ಶುರುವಾಗಿದೆ. ರಾಂಚಿಯ ಜೆಎಸ್​ಸಿಎ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಸರಣಿಯ ಮೊದಲ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾ ದಿಗ್ಗಜರಾದ ರೋಹಿತ್ ಶರ್ಮಾ (Rohit Sharma) ಹಾಗೂ ವಿರಾಟ್ ಕೊಹ್ಲಿ (Virat Kohli) ಹೊಸ ಇತಿಹಾಸ ಸೃಷ್ಟಿಸಿದ್ದಾರೆ.

ಹೌದು, ಸೌತ್ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಕಣಕ್ಕಿಳಿಯುವುದರೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ಪಂದ್ಯಗಳನ್ನಾಡಿದ ಜೋಡಿ ಎಂಬ ವಿಶ್ವ ದಾಖಲೆ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಯ ಹೆಸರಿಗೆ ಸೇರ್ಪಡೆಯಾಗಿದೆ.

ಇದಕ್ಕೂ ಮುನ್ನ ಈ ಭರ್ಜರಿ ದಾಖಲೆ  ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹಾಗೂ ದಿ ವಾಲ್ ಖ್ಯಾತಿಯ ರಾಹುಲ್ ದ್ರಾವಿಡ್ ಹೆಸರಿನಲ್ಲಿತ್ತು. ಸಚಿನ್-ರಾಹುಲ್ ಜೋಡಿಯು ಜೊತೆಯಾಗಿ 391 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ್ದಾರೆ. ಈ ಮೂಲಕ ಇಂಟರ್​ನ್ಯಾಷನಲ್​ ಕ್ರಿಕೆಟ್​ನಲ್ಲಿ ಜೊತೆಯಾಗಿ ಅತೀ ಹೆಚ್ಚು ಪಂದ್ಯಗಳನ್ನಾಡಿದ ವಿಶ್ವ ದಾಖಲೆ ನಿರ್ಮಿಸಿದ್ದರು.

ಇದೀಗ ಸೌತ್ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಜೊತೆಯಾಗಿ ಕಣಕ್ಕಿಳಿಯುವ ಮೂಲಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ (392), ಸಚಿನ್ ತೆಂಡೂಲ್ಕರ್ ಹಾಗೂ ರಾಹುಲ್ ದ್ರಾವಿಡ್ (391) ಹೆಸರಿನಲ್ಲಿದ್ದ ವಿಶ್ವ ದಾಖಲೆಯನ್ನು ಮುರಿದಿದ್ದಾರೆ. ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಇದೀಗ 392 ಪಂದ್ಯಗಳೊಂದಿಗೆ ಅಗ್ರಸ್ಥಾನಕ್ಕೇರಿರುವ ರೋಹಿತ್-ಕೊಹ್ಲಿ ಜೋಡಿಯು ಮುಂಬರುವ ಸರಣಿಗಳ ಮೂಲಕ ಇಂಟರ್​ನ್ಯಾಷನಲ್ ಕ್ರಿಕೆಟ್​ನಲ್ಲಿ ಜೊತೆಯಾಗಿ 400 ಪಂದ್ಯಗಳನ್ನಾಡಿದ ವಿಶೇಷ ದಾಖಲೆ ಬರೆಯುವ ಅವಕಾಶ ಹೊಂದಿದ್ದಾರೆ. ಹೀಗಾಗಿ ಶೀಘ್ರದಲ್ಲೇ ರೋ-ಕೊ ಜೋಡಿಯಿಂದ ಮತ್ತೊಂದು ಭರ್ಜರಿ ವಿಶ್ವ ದಾಖಲೆಯನ್ನು ನಿರೀಕ್ಷಿಸಬಹುದು.

 

Author
Nimma Suddi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಸತಿ ನಿಲಯಗಳಿಗೆ ದೀಡಿರ್ ಬೇಟಿ ನೀಡಿದ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ರಾಮತ್ನಾಬೆಂಗಳೂರು-ಹಾಸನ-ಮಂಗಳೂರು ಜೋಡಿ ರೈಲು ಹಳಿ ನಿರ್ಮಾಣ; ಸಚಿವ ಎಂ.ಬಿ. ಪಾಟೀಲ ಚರ್ಚೆ!ಸಾರ್ವಜನಿಕ ಹಣದಲ್ಲಿ ಬಾಬರಿ ಮಸೀದಿ ನಿರ್ಮಿಸಲು ಬಯಸಿದ್ದ ನೆಹರೂ ಎಂದ ರಾಜನಾಥ ಸಿಂಗ್ಪುಟಿನ್ ಭೇಟಿ: ಭಾರತದ ಜೊತೆ ಅಣು ಸಹಕಾರ ಒಪ್ಪಂದಕ್ಕೆ ರಷ್ಯಾ ಸಂಪುಟ ಅಸ್ತುಕರ್ನಾಟಕದ ಸಹಕಾರ ಸಂಘಗಳ ಅಭಿವೃದ್ಧಿಗೆ ₹4,164 ಕೋಟಿ: ರಾಜ್ಯಸಭೆಗೆ ಅಮಿತ್ ಶಾ70ಕ್ಕೂ ಹೆಚ್ಚು ಇಂಡಿಗೋ ವಿಮಾನಗಳ ಹಾರಾಟ ರದ್ದು ; ಬೆಂಗಳೂರು, ಮುಂಬೈ ಸೇರಿ ಅನೇಕ ಏರ್ಪೋರ್ಟ್'ನಲ್ಲಿ ಅವ್ಯವಸ್ಥೆದ. ಆಫ್ರಿಕಾ ವಿರುದ್ಧದ 5 ಪಂದ್ಯಗಳ T20I ಸರಣಿಗೆ ಬಲಿಷ್ಠ ಭಾರತ ತಂಡ ಪ್ರಕಟ |IND vs SAಮೊಬೈಲ್‌ಗಳಲ್ಲಿ 'ಸಂಚಾರ ಸಾಥಿ' ಆಯಪ್‌ ಕಡ್ಡಾಯ ಆದೇಶ ಹಿಂಪಡೆದ ಕೇಂದ್ರ ಸರ್ಕಾರವಾಯುಭಾರ ಕುಸಿತ, ಮುಂದಿನ 24 ಗಂಟೆಗಳಲ್ಲಿ ಧಾರಾಕಾರ ಮಳೆ! ಈ ಭಾಗಕ್ಕೆ ಹವಾಮಾನ ಇಲಾಖೆ ಎಚ್ಚರಿಕೆ!ಸಿಬಿಐ ತನಿಖೆ ಆದೇಶ ರದ್ದುಗೊಳಿಸುವಂತೆ ಸುಪ್ರೀಂ ಕೋರ್ಟ್‌ಗೆ ತಮಿಳುನಾಡು ಸರ್ಕಾರ ಮನವಿ