ಬೆಂಗಳೂರು : ನಾಯಕತ್ವ ಬದಲಾವಣೆ ಕಿಚ್ಚು ಜೋರಾಗಿದೆ. ಕುರ್ಚಿ ಫೈಟ್ ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದಂತೆ ಕಾಣ್ತಿದ್ದು, ಸಂಸದ ರಾಹುಲ್ ಗಾಂಧಿಗೆ ರಿಪೋರ್ಟ್ ಕಾರ್ಡ್ ನೀಡಲು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ದೆಹಲಿಗೆ ತೆರಳಿದ್ದಾರೆ. 2ನೇ ಸುತ್ತಿನ ಮಾತುಕತೆ ನಡೆಯಲಿದ್ದು, ಅಧಿಕಾರದ ಹಗ್ಗ-ಜಗ್ಗಾಟಕ್ಕೆ ನವೆಂಬರ್ 29ರಂದು ಫುಲ್ ಸ್ಟಾಪ್ ಬೀಳುವ ಸಾಧ್ಯತೆ ಇದೆ. ದೆಹಲಿಗೆ ತೆರಳಿದ ಮಲ್ಲಿಕಾರ್ಜುನ ಖರ್ಗೆ ಅಧಿಕಾರ ಹಂಚಿಕೆ ಬಗ್ಗೆ ಬಿಗ್ ಅಪ್ಡೇಟ್ ನೀಡಿದ್ದಾರೆ.
ಮಹತ್ವದ ಅಪ್ಡೇಟ್ ನೀಡಿದ ಖರ್ಗೆ
ರಾಹುಲ್ ಗಾಂಧಿ ಸೇರಿದಂತೆ ಹೈಕಮಾಂಡ್ ನಾಯಕ ಭೇಟಿಗೆಂದು ಮಲ್ಲಿಕಾರ್ಜುನ ಖರ್ಗೆ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅಧಿಕಾರ ಹಂಚಿಕೆ ಸಂಬಂಧ ಬಿಗ್ ಅಪ್ಡೇಟ್ ನೀಡಿದ್ದಾರೆ.
ಸಿಎಂ-ಡಿಸಿಎಂ ಇಬ್ಬರನ್ನ ಕರೆಸಿ ಚರ್ಚೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಮೂರ್ನಾಲ್ಕು ಪ್ರಮುಖ ನಾಯಕರನ್ನು ದೆಹಲಿಗೆ ಕರೆಸಿಯೇ ಮಾತುಕತೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಎಲ್ಲವನ್ನ ಸೆಟಲ್ ಮಾಡ್ತೀವಿ-ಖರ್ಗೆ
ನಾನು ದೆಹಲಿ ಹೋದ ಮೇಲೆ ಮೂರ್ನಾಲ್ಕು ಜನರನ್ನು ಕರೆಸುತ್ತೇವೆ. ಎಲ್ಲರೂ ಒಟ್ಟಿಗೆ ಕೂತು ಚರ್ಚೆ ನಡೆಸುತ್ತೇವೆ. ಮುಂದಿನ ಎರಡು ವರ್ಷ ಯಾವ ರೀತಿ ನಡೆಯಬೇಕು ಅಂತ ತೀರ್ಮಾನ ಮಾಡ್ತೀನಿ. ಎಲ್ಲವನ್ನು ಸೆಟಲ್ ಮಾಡ್ತೀವಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಇತ್ತ ಸಿಎಂ ನಿವಾಸದಲ್ಲಿ ಮೀಟಿಂಗ್
ಕ್ಯಾಬಿನೆಟ್ ಸಭೆಗೂ ಮುನ್ನವೇ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಅಹಿಂದ ನಾಯಕರು ಭೇಟಿ ನೀಡಿದ್ದಾರೆ. ಸಚಿವರಾದ ಜಿ ಪರಮೇಶ್ವರ್, ಸತೀಶ್ ಜಾರಕಿಹೊಳಿ , ಮಹಾದೇವಪ್ಪ ಹಾಗೂ ಕೆಎನ್ ರಾಜಣ್ಣ ಸಿಎಂ ಜೊತೆ ದಿಢೀರ್ ಸಭೆ ನಡೆಸಿದ್ದಾರೆ.