LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪುಟಿನ್ ಭೇಟಿ: ಭಾರತದ ಜೊತೆ ಅಣು ಸಹಕಾರ ಒಪ್ಪಂದಕ್ಕೆ ರಷ್ಯಾ ಸಂಪುಟ ಅಸ್ತು

ಮಾಸ್ಕೊ: ನಾಗರಿಕ ಅಣುಶಕ್ತಿ ಕ್ಷೇತ್ರದಲ್ಲಿ ಭಾರತದ ಜೊತೆ ಸಹಕಾರವನ್ನು ಮತ್ತಷ್ಟು ವೃದ್ಧಿಸುವುದಕ್ಕೆ ಸಂಬಂಧಿಸಿದ ಜ್ಞಾಪನಾ ಪತ್ರಕ್ಕೆ (ಎಂಒಯು) ರಷ್ಯಾ ಸಂಪುಟ ಬುಧವಾರ ಅನುಮೋದನೆ ನೀಡಿದೆ.

ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್‌ ಅವರು ಡಿಸೆಂಬರ್ 4 ಮತ್ತು 5ರಂದು ಕೈಗೊಂಡಿರುವ ಭಾರತ ಪ್ರವಾಸ ವೇಳೆ ಈ ಕುರಿತ ಒಪ್ಪಂದಕ್ಕೆ ಉಭಯ ದೇಶಗಳು ಅಂಕಿತ ಹಾಕಲಿವೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ರಷ್ಯಾದ ಅಣು ನಿಗಮ ರೊಸಾಟಮ್, ತಮಿಳುನಾಡಿನ ಕೂಡಂಕುಳಂನಲ್ಲಿರುವ ಅಣುಶಕ್ತಿ ಸ್ಥಾವರದಲ್ಲಿ ಹಲವು ರಿಯಾಕ್ಟರ್‌ಗಳನ್ನು ನಿರ್ಮಿಸುತ್ತಿದೆ. ಈಗ, ಭಾರತದೊಂದಿಗಿನ ಅಣುಶಕ್ತಿ ಒಪ್ಪಂದಕ್ಕೆ ರಷ್ಯಾ ಸರ್ಕಾರದ ಪರವಾಗಿ ಸಹಿ ಹಾಕುವುದಕ್ಕೆ ಈ ನಿಗಮಕ್ಕೆ ಅಧಿಕಾರ ನೀಡಲಾಗಿದೆ ಎಂದೂ ಮಾಧ್ಯಮಗಳು ವರದಿ ಮಾಡಿವೆ.

'ನವದೆಹಲಿಯಲ್ಲಿ ನಡೆಯುವ ಉಭಯ ದೇಶಗಳ ನಾಯಕರ ಸಭೆಯಲ್ಲಿ ಈ ಕುರಿತ ಪ್ರಸ್ತಾವನೆಗಳನ್ನು ರೊಸಾಟಮ್ ಸಿಇಒ ಅಲೆಕ್ಸಿ ಲಿಗಾಚೆವ್ ಮಂಡಿಸುವರು' ಎಂದು ಕ್ರೆಮ್ಲಿನ್‌ ವಕ್ತಾರ ಡಿಮಿಟ್ರಿ ಪೆಸ್ಕೋವ್‌ ಹೇಳಿದ್ದಾರೆ.

Author
Nimma Suddi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಸತಿ ನಿಲಯಗಳಿಗೆ ದೀಡಿರ್ ಬೇಟಿ ನೀಡಿದ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ರಾಮತ್ನಾಬೆಂಗಳೂರು-ಹಾಸನ-ಮಂಗಳೂರು ಜೋಡಿ ರೈಲು ಹಳಿ ನಿರ್ಮಾಣ; ಸಚಿವ ಎಂ.ಬಿ. ಪಾಟೀಲ ಚರ್ಚೆ!ಸಾರ್ವಜನಿಕ ಹಣದಲ್ಲಿ ಬಾಬರಿ ಮಸೀದಿ ನಿರ್ಮಿಸಲು ಬಯಸಿದ್ದ ನೆಹರೂ ಎಂದ ರಾಜನಾಥ ಸಿಂಗ್ಪುಟಿನ್ ಭೇಟಿ: ಭಾರತದ ಜೊತೆ ಅಣು ಸಹಕಾರ ಒಪ್ಪಂದಕ್ಕೆ ರಷ್ಯಾ ಸಂಪುಟ ಅಸ್ತುಕರ್ನಾಟಕದ ಸಹಕಾರ ಸಂಘಗಳ ಅಭಿವೃದ್ಧಿಗೆ ₹4,164 ಕೋಟಿ: ರಾಜ್ಯಸಭೆಗೆ ಅಮಿತ್ ಶಾ70ಕ್ಕೂ ಹೆಚ್ಚು ಇಂಡಿಗೋ ವಿಮಾನಗಳ ಹಾರಾಟ ರದ್ದು ; ಬೆಂಗಳೂರು, ಮುಂಬೈ ಸೇರಿ ಅನೇಕ ಏರ್ಪೋರ್ಟ್'ನಲ್ಲಿ ಅವ್ಯವಸ್ಥೆದ. ಆಫ್ರಿಕಾ ವಿರುದ್ಧದ 5 ಪಂದ್ಯಗಳ T20I ಸರಣಿಗೆ ಬಲಿಷ್ಠ ಭಾರತ ತಂಡ ಪ್ರಕಟ |IND vs SAಮೊಬೈಲ್‌ಗಳಲ್ಲಿ 'ಸಂಚಾರ ಸಾಥಿ' ಆಯಪ್‌ ಕಡ್ಡಾಯ ಆದೇಶ ಹಿಂಪಡೆದ ಕೇಂದ್ರ ಸರ್ಕಾರವಾಯುಭಾರ ಕುಸಿತ, ಮುಂದಿನ 24 ಗಂಟೆಗಳಲ್ಲಿ ಧಾರಾಕಾರ ಮಳೆ! ಈ ಭಾಗಕ್ಕೆ ಹವಾಮಾನ ಇಲಾಖೆ ಎಚ್ಚರಿಕೆ!ಸಿಬಿಐ ತನಿಖೆ ಆದೇಶ ರದ್ದುಗೊಳಿಸುವಂತೆ ಸುಪ್ರೀಂ ಕೋರ್ಟ್‌ಗೆ ತಮಿಳುನಾಡು ಸರ್ಕಾರ ಮನವಿ