This is the title of the web page
This is the title of the web page

Live Stream

July 2024
S M T W T F S
 123456
78910111213
14151617181920
21222324252627
28293031  

| Latest Version 9.4.1 |

State News

2014ಕ್ಕೂ ಮೊದಲು ಒಂದು ರೈಲು ಬಂದಿಲ್ಲ. ನಾನು 11 ಟ್ರೈನ್ ತಂದಿದ್ದೇನೆ. ಶೀಘ್ರದಲ್ಲೇ 12ನೇ ರೈಲು ಬರಲಿದೆ: ಸಂಸದ ಪ್ರತಾಪ್ ಸಿಂಹ

2014ಕ್ಕೂ ಮೊದಲು ಒಂದು ರೈಲು ಬಂದಿಲ್ಲ. ನಾನು 11 ಟ್ರೈನ್ ತಂದಿದ್ದೇನೆ. ಶೀಘ್ರದಲ್ಲೇ 12ನೇ ರೈಲು ಬರಲಿದೆ: ಸಂಸದ ಪ್ರತಾಪ್ ಸಿಂಹ

ಮೈಸೂರು: 2014ಕ್ಕೂ ಮೊದಲು ಒಂದು ರೈಲು ಬಂದಿಲ್ಲ. ನಾನು 11 ಟ್ರೈನ್ ತಂದಿದ್ದೇನೆ. ಶೀಘ್ರದಲ್ಲೇ 12ನೇ ರೈಲು ಬರಲಿದ್ದು, ಮೈಸೂರು-ರಾಮೇಶ್ವರಂ ರೈಲು ಬರಲಿದೆ ಎಂದು ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ ಭರವಸೆ ನೀಡಿದರು.

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಬಿಎಸ್​ ಯಡಿಯೂರಪ್ಪ ಸಾಕಷ್ಟು ಅನುದಾನ ನೀಡಿದ್ದು, ಮುಂದೆ ಬೆಂಗಳೂರು-ಮೈಸೂರಿಗೆ ಮೆಟ್ರೋ ಬರಲಿದೆ ಮೈಸೂರಿನ ಬಿಜೆಪಿ ಕಚೇರಿಯಲ್ಲಿ ಮೈಸೂರು ಕೊಡಗು ಲೋಕಸಭಾ ಚುನಾವಣಾ ಕಾರ್ಯಾಲಯ ಉದ್ಘಾಟನೆ ಮಾಡಿದ ಸಂಸದ ಪ್ರತಾಪ್ ಸಿಂಹ, ಈ ವೇಳೆ ಮುಂದೆ ಬೆಂಗಳೂರು ಮೈಸೂರು ಮೆಟ್ರೋ ಬರಲಿದೆ ಎಂದು ತಿಳಿಸಿದರು.

ಚುನಾವಣೆಗೆ ಹೋಗಬೇಕಾದರೆ ಏನು ಮಾಡುತ್ತೇವೆ? ಅಧಿಕಾರದಲ್ಲಿ ಇದ್ದಾಗ ಏನು ಮಾಡಿದ್ದೇವೆ. 10 ವರ್ಷದಲ್ಲಿ ನಾನು ಕೆಲಸ ಮಾಡಿದ ರಿಪೋರ್ಟ್ ಕಾರ್ಡ್ ನೀಡಿದ್ದು, ಪ್ರಧಾನಿ ಮೋದಿ ಕೊಟ್ಟಿದ್ದೇನು? ಪ್ರತಾಪ್ ಸಿಂಹ ತಂದಿದ್ದೇನು? ಅನ್ನೋ ಬುಕ್‌ಲೆಟ್ ಇದರಲ್ಲಿ ಕೇಂದ್ರದ ಡಿಪಾಲ್ಟ್ ಯೋಜನೆ ಪಟ್ಟಿ ಇಲ್ಲಿ ಮಾಡಿಲ್ಲ. 2014ರ ಹಿಂದೆ ಒಂದು ಟ್ರೈನ್ ಬಂದಿಲ್ಲ. ನಾನು 11 ಟ್ರೈನ್ ತಂದಿದ್ದೇನೆ. 12ನೇ ರೈಲು ಸದ್ಯದಲ್ಲೇ ಬರಲಿದೆ ಎಂದು ತಿಳಿಸಿದರು.