ಬಾಗಲಕೋಟೆ
ಮುಂಬರುವ ಲೋಕಸಭಾ ಸಾರ್ವತ್ರಿಕ ಚುನಾವಣೆ-೨೦೨೪ ಹಿನ್ನೆಲೆಯಲ್ಲಿ ಮಾದರಿ ನೀರಿ ಸಂಹಿತೆ ಕುರಿತು ಫೆ.೧೦ ರಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಿರುವ ತರಬೇತಿಗೆ ಯಾವುದೇ ಪೂರ್ವಾನುಮತಿ ಪಡೆಯದೇ ಗೈರು ಹಾಜರಾಗಿರುವ ಓರ್ವ ಸೆಕ್ಟರ ಅಧಿಕಾರಿ ಹಾಗೂ ೭ ಜನ ಎಫ್‌ಎಸ್‌ಟಿ ತಂಡದ ಅಧಿಕಾರಿಗಳಿಗೆ ಹಾಗೂ
ಫೆ.೧೦ ರಂದು ಅಪರ ಮುಖ್ಯ ಚುನಾವಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಮಾದರಿ ನೀತಿ ಸಂಹಿತೆ ಹಾಗೂ ಚುನಾವಣಾ ಖರ್ಚು ವೆಚ್ಚಗಳ ಕುರಿತು ನೇರ ವಿಡಿಯೋ ಸಂವಾದದ ಮೂಲಕ ಆಯೋಜಿಸಿದ ತರಬೇತಿಗೆ ಅನುಮತಿ ಪಡೆಯದೇ ಗೈರು ಹಾಜರಾದ ೪ ಅಕೌಂಟಿಂಗ್ ತಂಡದ ಅಧಿಕಾರಿಗಳಿಗೆ ಹಾಗೂ ೩ ಜನ ವಿಧಾನಸಭಾ ಮಟ್ಟದ ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿಗಳಿಗೆ ಚುನಾವಣೆಯಂತಹ ಮಹತ್ತರ ವಿಷಯದಲ್ಲಿ ಬೇಜವಾಬ್ದಾರಿತನ ತೋರಿದಕ್ಕಾಗಿ ಪ್ರಜಾ ಪ್ರತಿನಿಧಿ ಕಾಯ್ದೆ-೧೯೫೧ ಕಲಂ ೧೩೪ರಡಿ ಕಾರಣ ಕೇಳಿ ನೋಟಿಸ್ ನೀಡಲಾಗಿದೆ.
ಮುಂದಿನ ದಿನಗಳಲ್ಲಿ ಚುನಾವಣೆಗೆ ಸಂಬಂಧಿಸಿದ ಕೆಲಸಗಳಿಗೆ ಬೇಜವಾಬ್ದಾರಿತನ, ನಿರ್ಲಕ್ಷತನ, ಅನಧಿಕೃತ ಗೈರು ಹಾಜರಾದಲ್ಲಿ ಯಾವುದೇ ನೋಟಿಸ್ ನೀಡದೇ ನಿಯಮಾನುಸಾರ ಶಿಸ್ತುಕ್ರಮ ಕೈಗೊಳ್ಳಲಾಗುವುದೆಂದು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.