This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

Local NewsState News

ರಾಷ್ಟ್ರೀಯ ಮತದಾರರ ದಿನ ಕಾರ್ಯಕ್ರಮ ಸಿದ್ದತೆಗೆ ಸೂಚನೆ

ರಾಷ್ಟ್ರೀಯ ಮತದಾರರ ದಿನ ಕಾರ್ಯಕ್ರಮ ಸಿದ್ದತೆಗೆ ಸೂಚನೆ

ಬಾಗಲಕೋಟೆ:

ಯುವಜನರಲ್ಲಿ ಮತದಾನದ ಮಹತ್ವ ಸಾರುವ ಉದ್ದೇಶದಿಂದ ಜನವರಿ 25 ರಂದು ಆಚರಿಸಲ್ಪಡುವ ರಾಷ್ಟ್ರೀಯ ಮತದಾರರ ದಿನ ಕಾರ್ಯಕ್ರಮಕ್ಕೆ ಅಗತ್ಯ ಸಿದ್ದತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಮಂಗಳವಾರ ನಡೆದ ರಾಷ್ಟ್ರೀಯ ಮತದಾರರ ದಿನ ಆಚರಿಸುವ ಕುರಿತ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಚುನಾವಣಾ ಆಯೋಗದ ನಿರ್ದೇಶನದಂತೆ ದೇಶದ ಜನತೆಯಲ್ಲಿ ಅದರಲ್ಲೂ ಯುವಜನರಲ್ಲಿ ಚುನಾವಣೆ ಕುರಿತು ಅರಿವು ಮೂಡಿಸುವ ಆಶಯದೊಂದಿಗೆ ಪ್ರತಿ ವರ್ಷ ಜನವರಿ 25 ರಂದು ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ ಎಂದರು.

ಈ ಕಾರ್ಯಕ್ರಮವನ್ನು ತಾಲೂಕಾ, ಮತಗಟ್ಟೆ ಮಟ್ಟದಲ್ಲಿ ಹಾಗೂ ಕಾಲೇಜುಗಳಲ್ಲಿ ವ್ಯಾಪಕವಾಗಿ, ಪರಿಣಾಮಕಾರಿಯಾಗಿ ಹಬ್ಬದ ವಾತಾವರಣ ಮೂಡುವ ರೀತಿಯಲ್ಲಿ ಕಾರ್ಯಕ್ರಮ ಆಯೋಜನೆಗೆ ಕ್ರಮಕೈಗೊಳ್ಳಬೇಕು.

ಸಂವಿಧಾನ ರಚನೆಯಾಗಿ 75 ವರ್ಷಾಚರಣೆ ಹಿನ್ನಲೆಯಲ್ಲಿ ಸ್ವೀಪ್‍ಅಡಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲು ಸೂಚಿಸಿದರು. ನಗರ ಸ್ಥಳೀಯ ಹಾಗೂ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಸ್ವಚ್ಚವಾಹಿನಿಯಲ್ಲಿ ಕಡ್ಡಾಯ ಮತದಾನದ ಮಹತ್ವವನ್ನು ಧ್ವನಿವರ್ಧಕಗಳ ಮೂಲಕ ಸಾರಬೇಕು ಎಂದರು.

ಜಿಲ್ಲೆಯಲ್ಲಿ ಕಳೆದ ಚುನಾವಣೆಯಲ್ಲಿ ಶೇ.20ಕ್ಕಿಂತ ಕಡಿಮೆ ಮತದಾನದ ಮತಗಟ್ಟೆಗಳ ಪಟ್ಟಿ ತಮ್ಮಲ್ಲಿದ್ದು, ಆ ವ್ಯಾಪ್ತಿಯಲ್ಲಿ ವಿಶೇಷ ಮತದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಬ್ಯಾನರ್, ಪ್ಲೇಕ್ಸ್ ಅಳವಡಿಸುವ ಜೊತೆಗೆ ಗೋಡೆ ಬರಹದ ಮೂಲಕ ಮತದಾನದ ಮಹತ್ವವದ ಅರಿವು ಮೂಡಿಸಲು ಸೂಚಿಸಿದರು.

ಜನತಂತ್ರ ವ್ಯವಸ್ಥೆ ಬಲಪಡಿಸಲು ಜನರು ಸಕ್ರಿಯವಾಗಿ ಕಾರ್ಯಕ್ರಮದಲ್ಲಿ ತೊಡಗಬೇಕಿದೆ. ಪ್ರತಿ ಅರ್ಹ ಮತದಾರರ ಹೆಸರು ಮತದಾರರ ಪಟ್ಟಿಯಲ್ಲಿ ಇರಬೇಕು ಎಂಬುದು ಚುನಾವಣಾ ಆಯೋಗದ ನಿರ್ದೇಶನವಾಗಿದೆ ಎಂದರು.

ಹೊಸದಾಗಿ ನೊಂದಣಿಯಾದ ಯುವ ಮತದಾರರಿಗೆ ಕಾರ್ಯಕ್ರಮದಂದು ಎಪಿಪ್ ಕಾರ್ಡ ವಿತರಿಸಬೇಕು. ತಾಲೂಕಾ ಮಟ್ಟದಲ್ಲಿ ಪೂರ್ವಭಾವಿ ಸಭೆ ನಡೆಸಿ ರಾಷ್ಟ್ರೀಯ ಮತದಾರರ ದಿನವನ್ನು ಯಶಸ್ವಿಯಾಗಿ ಆಚರಿಸಲು ಅಗತ್ಯ ಇರುವ ಎಲ್ಲ ರೂಪರೇಷೆಗಳನ್ನು ಸಿದ್ದಪಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿಗಳು ನಿರ್ದೇಶನ ಮಾಡಿದರು.

ಜಿಲ್ಲಾ ಮಟ್ಟದಲ್ಲಿ ಕಾರ್ಯಕ್ರಮದ ಪೂರ್ವದಲ್ಲಿ ಸೈಕಲ್ ರ್ಯಾಲಿ ಹಮ್ಮಿಕೊಳ್ಳಲು ತೀರ್ಮಾನಿಸಲಾಯಿತು. ಅಲ್ಲದೇ ಜಿಲ್ಲಾಡಳಿತ ಭವನದಲ್ಲಿ ಯುವ ಮತದಾರರ ಸೇಲ್ಪಿ ಸ್ಟ್ಯಾಂಡ್ ಹಾಕಲು ತಿಳಿಸಲಾಯಿತು.

ಜಿ.ಪಂ ಸಿಇಓ ಶಶೀಧರ್ ಕುರೇರ ಮಾತನಾಡಿ ಶಾಲಾ-ಕಾಲೇಜುಗಳಲ್ಲಿ ರಚಿಸಲಾದ ಇಎಲ್‍ಸಿ ಕ್ಲಬ್‍ಗಳನ್ನು ಬಳಸಿಕೊಂಡು ಶಾಲಾ ಮಕ್ಕಳಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸಿ ತಮ್ಮ ಮನೆಯ ಅರ್ಹ ಮತದಾರರಿಗೆ ತಿಳುವಳಿಕೆ ನೀಡುವ ಕಾರ್ಯವಾಗಬೇಕು

ಶಾಲಾ ಪ್ರಾರ್ಥನಾ ಸಮಯದಲ್ಲಿ ಕಡ್ಡಾಯವಾಗಿ ಮತದಾನದ ಮಹತ್ವವದ ಅರಿವು ಮೂಡಿಸುವ ಕಾರ್ಯವಾಗಬೇಕು ಎಂದರು.

ಸಭೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಿ.ಕೆ.ನಂದನೂರ, ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಸವಿತಾ ಕಾಳೆ, ಜಿ.ಪಂ ಸಹಾಯಕ ಯೋಜನಾಧಿಕಾರಿ ಭೀಮಪ್ಪ ತಳವಾರ, ತಹಶೀಲ್ದಾರ ಅಮರೇಶ ಪಮ್ಮಾರ, ನಗರಸಭೆ ಪೌರಾಯುಕ್ತ ರಮೇಶ ಜಾದವ, ಚುನಾವಣಾ ವಿಭಾಗದ ಶಿರಸ್ತೆದಾರರಾದ ಜಿ.ವಿ.ರಜಪೂರ, ಮಹೇಶ ಪಾಂಡವ ಸೇರಿದಂತೆ ಇತರರು ಉಪಸ್ಥಿತರಿದ್ದರು.

";