This is the title of the web page
This is the title of the web page

Live Stream

July 2024
S M T W T F S
 123456
78910111213
14151617181920
21222324252627
28293031  

| Latest Version 9.4.1 |

Education News

RDPR ಇಲಾಖೆಯಲ್ಲಿ ಖಾಲಿ ಇರುವ PDO, ಗ್ರಾ.ಪಂ ಕಾರ್ಯದರ್ಶಿ & SDAA ಹುದ್ದೆಗಳಿಗೆ ಅಧಿಸೂಚನೆ: KPSC PDO & SDAA Recruitment 202

RDPR ಇಲಾಖೆಯಲ್ಲಿ ಖಾಲಿ ಇರುವ PDO, ಗ್ರಾ.ಪಂ ಕಾರ್ಯದರ್ಶಿ & SDAA ಹುದ್ದೆಗಳಿಗೆ ಅಧಿಸೂಚನೆ: KPSC PDO & SDAA Recruitment 202

ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಪಂಚಾಯತ್ ಅಭಿವೃದ್ಧಿ ಅಧಿಕಾರಿ (PDO), ಗ್ರಾಮ ಪಂಚಾಯತ್ ಕಾರ್ಯದರ್ಶಿ ಗ್ರೇಡ್ 1, ಗ್ರಾಮ ಪಂಚಾಯತ್ ಕಾರ್ಯದರ್ಶಿ ಗ್ರೇಡ್ 2 & ದ್ವಿತೀಯ ದರ್ಜೆ ಲೆಕ್ಕ ಸಹಾಯಕ (SDAA) ಹುದ್ದೆಗಳ ಶೀಘ್ರದಲ್ಲಿಯೇ ಅಧಿಸೂಚನೆ ಹೊರಡಿಸಲಾಗುತ್ತದೆ. 2019 ರ RDPR ನೇಮಕಾತಿ ವಿಶೇಷ ನಿಯಮಗಳನ್ನು ಹಿಂಪಡೆಯಲಾಗಿದ್ದು, ಕರ್ನಾಟಕ ಲೋಕಸೇವಾ ಆಯೋಗದಿಂದ ಹಳೆಯ ನಿಯಮಗಳ ಪ್ರಕಾರವೇ ನೇಮಕಾತಿ ಮಾಡಿಕೊಳ್ಳಲು ರಾಜ್ಯ ಸರ್ಕಾರದಿಂದ ಆದೇಶ ಹೊರಬಿದ್ದಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಗ್ರಾಮೀಣಾಭಿವೃದ್ಧಿ & ಪಂಚಾಯತ್ ಇಲಾಖೆಗಳಲ್ಲಿ ಖಾಲಿ ಇರುವ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಗ್ರೂಪ್ ಸಿ), ಗ್ರಾಮ ಪಂಚಾಯತ್ ಕಾರ್ಯದರ್ಶಿ ಗ್ರೇಡ್ 1, ಗ್ರಾಮ ಪಂಚಾಯತ್ ಕಾರ್ಯದರ್ಶಿ ಗ್ರೇಡ್ 2 & ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಚರ್ಚಿಸಲಾಗಿದೆ.

ಕೇಂದ್ರ ಸರ್ಕಾರದ 27 ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಗ್ರೂಪ್ ಬಿ JHO ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಪಂಚಾಯತ್ ಅಭಿವೃದ್ಧಿ ಅಧಿಕಾರಿ (PDO): 660
GP ಕಾರ್ಯದರ್ಶಿ ಗ್ರೇಡ್ 1 : 604
GP ಕಾರ್ಯದರ್ಶಿ ಗ್ರೇಡ್ 2: 719
ದ್ವಿತೀಯ ದರ್ಜೆ ಸಹಾಯಕ: 345
ಒಟ್ಟು ಹುದ್ದೆಗಳು: 2348
.

ಶೈಕ್ಷಣಿಕ ಅರ್ಹತೆಗಳು/ Educational Qualification:

ಪಂಚಾಯತ್ ಅಭಿವೃದ್ಧಿ ಅಧಿಕಾರಿ:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಮುಗಿಸಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

 

ಗ್ರಾಮ ಪಂಚಾಯತ್ ಕಾರ್ಯದರ್ಶಿ ಗ್ರೇಡ್ 1 & 2, SDAA:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ಬೋರ್ಡ್ ನಿಂದ ಪಿಯುಸಿ ವಿದ್ಯಾರ್ಹತೆ ಮುಗಿಸಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

 

ಅರ್ಜಿ ಶುಲ್ಕ/ Application Fees:

ಸಾಮಾನ್ಯ ಅರ್ಹತಾ ಅಭ್ಯರ್ಥಿಗಳಿಗೆ : ರೂ. 600/-

ಪ್ರವರ್ಗ 2ಎ, 2ಬಿ, 3ಎ & 3ಬಿ ಅಭ್ಯರ್ಥಿಗಳಿಗೆ ರೂ. 300/-

ಮಾಜಿ ಸೈನಿಕ ಅಭ್ಯರ್ಥಿಗಳಿಗೆ: ರೂ. 50/-

ಪ.ಜಾ/ ಪಪಂ/ ಪ್ರವರ್ಗ 1/ ಅಂಗವಿಕಲ: ಅರ್ಜಿ ಶುಲ್ಕ ಇರುವುದಿಲ್ಲ

 

ವಯೋಮಿತಿ/ Age Limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & ಗರಿಷ್ಟ 35 ವರ್ಷ ಮೀರಿರಬಾರದು.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಮಾಜಿ ಸೈನಿಕರಿಗೆ: 05 ವರ್ಷ

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತದೆ.

 

ಅರ್ಜಿ ಸಲ್ಲಿಸುವ ವಿಧಾನ

ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ನಿಗದಿಪಡಿಸಿದ ದಿನಾಂಕಗಳಂದು ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಪ್ರಾಧಿಕಾರದ ವೆಬ್ ಸೈಟ್ www.kpsc.kar.nic.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಆಯೋಗದ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಆನ್ಲೈನ್ ಅರ್ಜಿ ಆರಂಭದ ದಿನಾಂಕ: ಶೀಘ್ರದಲ್ಲೆ

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: ಶೀಘ್ರದಲ್ಲಿ.