This is the title of the web page
This is the title of the web page

Live Stream

July 2024
S M T W T F S
 123456
78910111213
14151617181920
21222324252627
28293031  

| Latest Version 9.4.1 |

Education News

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಅಗತ್ಯ ಇರುವ ಹುದ್ದೆಯ ಭರ್ತಿಗೆ ಅರ್ಜಿ ಆಹ್ವಾನ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಅಗತ್ಯ ಇರುವ ಹುದ್ದೆಯ ಭರ್ತಿಗೆ ಅರ್ಜಿ ಆಹ್ವಾನ

RDPR Karnataka Recruitment 2023 : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಅಗತ್ಯ ಇರುವ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಖಾಲಿ ಇರುವ 01 ಹುದ್ದೆಯ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಬಿಇ/ಬಿ.ಟೆಕ್/ಎಂಸಿಎ/ಎಂಎಸ್ಸಿ (ಕಂಪ್ಯೂಟರ್ ಸೈನ್ಸ್/ ಇನ್ಫಾರ್ಮೆಷನ್ ಸೈನ್ಸ್)/ ಎಂಬಿಎ ಶೈಕ್ಷಣಿಕ ಅರ್ಹತೆ ಹೊಂದಿರಬೇಕು ಜೊತೆಗೆ ಕನಿಷ್ಠ 3 ವರ್ಷ ಕೆಲಸದ ಅನುಭವ ಇರಬೇಕು.

ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 50,000 ವೇತನ ನೀಡಲಾಗುತ್ತದೆ.

ವಯೋಮಾನ : ಅಭ್ಯರ್ಥಿಗಳಿಗೆ ಪ್ರಕಟಣೆ ಹೊರಡಿಸಿದ ದಿನಾಂಕಕ್ಕೆ 45 ವರ್ಷಗಳು ಮೀರಿರಬಾರದು.

ಆಯ್ಕೆ ವಿಧಾನ : ಅರ್ಹ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

ಹುದ್ದೆಯ ವಿಧ : ಈ ಹುದ್ದೆ ಸಂಪೂರ್ಣವಾಗಿ ತಾತ್ಕಾಲಿಕ ಹುದ್ದೆಯಾಗಿದ್ದು, ಒಂದು ವರ್ಷದ ಅವಧಿಗೆ ಹೊರಗುತ್ತಿಗೆಯ ಆಧಾರದ ಮೇಲೆ ನೇಮಿಸಿಕೊಳ್ಳಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ) ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ : ನಿರ್ದೇಶಕರು, ಇ-ಆಡಳಿತ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, 2ನೇ ಮಹಡಿ, 3ನೇ ಹಂತ, ಬಹುಮಹಡಿಗಳ ಕಟ್ಟಡ, ಬೆಂಗಳೂರು – 560 001

ನಿಗದಿತ ಅರ್ಜಿ ಶುಲ್ಕದ ವಿವರ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಆಗಸ್ಟ್ 03, 2023
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಆಗಸ್ಟ್ 14, 2023