This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

Local NewsState News

ಲಿಂಗತ್ವ ಅಲ್ಪಸಂಖ್ಯಾತರು ಸಂಘಟಿತರಾಗಿ : ನ್ಯಾ.ದ್ಯಾವಪ್ಪ

ಲಿಂಗತ್ವ ಅಲ್ಪಸಂಖ್ಯಾತರು ಸಂಘಟಿತರಾಗಿ : ನ್ಯಾ.ದ್ಯಾವಪ್ಪ

ಬಾಗಲಕೋಟೆ

ಜಿಲ್ಲೆಯ ಲಿಂಗತ್ವ ಅಲ್ಪಸಂಖ್ಯಾತರು ಸಂಘಟಿತರಾಗುವ ಮೂಲಕ ತಾಲೂಕು ಮಟ್ಟದಲ್ಲಿ ಕೂಡ ಸಮಿತಿ ರಚಿಸುವ ಕೆಲಸವಾಗಬೇಕು ಎಂದು ಹಿರಿಯ ದಿವಾಣಿ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದ್ಯಾವಪ್ಪ ಎಸ್.ಬಿ. ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಲಿಂಗತ್ವ ಅಲ್ಪಸಂಖ್ಯಾತರ ಮತ್ತು ದಮನಿತ ಮಹಿಳೆಯರ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಲಿಂಗತ್ವ ಅಲ್ಪಸಂಖ್ಯಾತರ ಸಮಸ್ಯೆಗಳೇನು ಎಂಬುದು ಅವರಿಗೆ ಮಾತ್ರ ತಿಳಿದಿರುತ್ತವೆ. ಒಬ್ಬರು ಅಥವಾ ಇಬ್ಬರು ಸಮಸ್ಯೆಗಳನ್ನು ಹೇಳಿಕೊಂಡಾಗ ಸಮಸ್ಯೆಗಳಿಗೆ ಸ್ಪಂದನೆ ಸಿಗುವುದು ಕಡಿಮೆ. ಸಂಘಟಿತರಾದಲ್ಲಿ ಗಟ್ಟಿ ದ್ವನಿ ಸಿಗುತ್ತದೆ. ಲಿಂಗತ್ವ ಅಲ್ಪಸಂಖ್ಯಾತರು ಕೂಡ ಇತರರಂತೆ ಘನತೆಯ ಜೀವನ ನಡೆಸುತ್ತಿರುತ್ತಾರೆ ಎಂಬುದನ್ನು ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದರು.

ಪ್ರೌಡ ಶಾಲೆಯ ಹಂತದಲ್ಲಿಯೇ ದೈಹಿಕ ರಚನೆಯಲ್ಲಿ ಬದಲಾಗುವ ಲಕ್ಷಣಗಳು ಕಂಡುಬರುವದರಿಂದ ಶಾಲಾ ಹಂತದಲ್ಲಿ ಜಾಗೃತಿ ಮೂಡಿಸಬೇಕು. ಇದರಿಂದ ಇತರೆ ಮಕ್ಕಳು ಅಪಹಾಸ್ಯ ಮಾಡುವುದು ತಪ್ಪುವುದಲ್ಲದೇ ಅವರು ತಮ್ಮ ಮುಂದಿನ ಭವಿಷ್ಯದಲ್ಲಿ ಲಿಂಗತ್ವ ಅಲ್ಪಸಂಖ್ಯಾತರರನ್ನು ಸಹಜವಾಗಿ ಸ್ವೀಕರಿಸಲು ಸಹಕಾರಿಯಾಗುತ್ತದೆ. ಶಕ್ತಿ ಯೋಜನೆಯಡಿ ಬಸ್‌ಗಳಲ್ಲಿ ಓಡಾಡುವ ಸಂದರ್ಭದಲ್ಲಿ ಲಿಂಗತ್ವ ಅಲ್ಪಸಂಖ್ಯಾತರಿಗೆ ತೊಂದರೆಯಾಗುತ್ತಿರುವುದು ಗಮನಕ್ಕೆ ಬಂದಿದ್ದು, ಅವರಿಗೂ ಉಚಿತ ಪ್ರಯಾಣಕ್ಕೆ ಅವಕಾಶವಿದೆ ಎಂಬ ಸಂದೇಶವಿರುವ ಬಿತ್ತಿ ಪತ್ರಗಳನ್ನು ಬಸ್‌ಗಳಲ್ಲಿ ಮತ್ತು ನಿಲ್ದಾಣದಲ್ಲಿ ಅಂಟಿಸುವ ವ್ಯವಸ್ಥೆಯಾಗಬೇಕು ಎಂದರು.
ಜಿಲ್ಲಾಧಿಕಾರಿ ಜಾನಕಿ ಕೆ. ಎಮ್. ಅವರು ಮಾತನಾಡಿ ಜಿಲ್ಲಾಧಿಕಾರಿಗಳಿಂದ ಲಿಂಗತ್ವ ಅಲ್ಪಸಂಖ್ಯಾತರಿಗೆ ಐಡಿ ಕಾರ್ಡ ಮತ್ತು ಪ್ರಮಾಣ ಪತ್ರ ನೀಡಲಾಗುತ್ತಿದ್ದು, ಇಲ್ಲಿಯವರೆಗೆ ೫೪ ಫಲಾನುಭವಿಗಳು ಮಾತ್ರ ಗುರುತಿನ ಚೀಟಿ ಮತ್ತು ಪ್ರಮಾಣ ಪತ್ರ ಪಡೆದಿರುತ್ತಾರೆ. ಇನ್ನೂ ಹೆಚ್ಚಿನ ಸಂಖ್ಯೆಯ ಫಲಾನುಭವಿಗಳು ಗುರುತಿನ ಚೀಟಿ, ಪ್ರಮಾಣ ಪತ್ರ ಪಡೆದು ಸರಕಾರಿ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಅಕ್ಕಮಹಾದೇವಿ ಕೆ. ಹೆಚ್. ಅವರು ಸಭೆಗೆ ಮಾಹಿತಿ ನೀಡಿ ಜಿಲ್ಲೆಯಲ್ಲಿ ಲಿಂಗತ್ವ ಅಲ್ಪ ಸಂಖ್ಯಾತರ ಸಂಖ್ಯೆ ೨೦೨೫ ಇದ್ದು, ಇವರೆಲ್ಲರೂ ಬಾಗಲಕೋಟೆಯಲ್ಲಿರುವ ಮೀಲನ ಸಂಸ್ಥೆಯಲ್ಲಿ ನೋಂದಣಿಯಾಗಿರುತ್ತಾರೆ. ಸಂಜೀವಿನಿ ಯೋಜನೆಯಡಿ ಸಮುದಾಯ ಬಂಡವಾಳ ನಿಧಿಯಲ್ಲಿ ಲಿಂಗತ್ವ ಅಲ್ಪ ಸಂಖ್ಯಾತರ ೩ ಸ್ವ ಸಹಾಯ ಸಂಘಗಳಿಗೆ ರೂ. ೧.೫೦ ಲಕ್ಷ ಸಾಲವನ್ನು ನೀಡಲಾಗಿದೆ ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಎನ್.ವಾಯ್.ಬಸರಿಗಿಡದ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಜಯಶ್ರೀ ಎಮ್ಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕಿ ಅಕ್ಕಮಹಾದೇವಿ ಕೆ.ಎಚ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮೀಲನ ಸಂಸ್ಥೆಯ ಪದಾಧಿಕಾರಿಗಳು ಇದ್ದರು.

*ಜಿಲ್ಲೆಯಲ್ಲಿ ವಾಡಿಕೆಗಿಂತ ಕಡಿಮೆ ಮಳೆ*
ಬಾಗಲಕೋಟೆ :ಮುಂಗಾರು ಆರಂಭದಿಂದ ಇಲ್ಲಿಯ (ಜೂನ ದಿಂದ ಆಗಷ್ಟ) ವರೆಗೆ ವಾಡಿಕೆಯ ಮಳೆಗೆ ಹೋಲಿಸಿದರೆ ಜಿಲ್ಲೆಯಲ್ಲಿ ಶೇ.೫೮ ರಷ್ಟು ಪ್ರತಿಶತ ಮಳೆಯ ಕೊರತೆ ಉಂಟಾಗಿದೆ.

ಭಾರತ ಹವಾಮಾನ ಮೂನ್ಸೂಚನಾ ವರದಿ ಪ್ರಕಾರ ಸೆಪ್ಟೆಂಬರ ತಿಂಗಳಲ್ಲಿ ಜಿಲ್ಲೆಯನ್ನು ಒಳಗೊಂಡಂತೆ ಉತ್ತರ ಕರ್ನಾಟಕ ಬಹುತೇಕ ಜಿಲ್ಲೆಗಳು ವಾಡಿಕೆ ಮಳೆಗಿಂತ ಕಮ್ಮಿ ಮಳೆ ಪಡೆಯವ ಸಾಧ್ಯತೆ ಹೆಚ್ಚಾಗಿರುತ್ತದೆ. ಜಿಲ್ಲೆಯಲ್ಲಿ ಈಗಾಗಲೇ ಬಿತ್ತಿದ ಬೆಳೆಗಳು ಬೆಳವಣಿಗೆಯಿಂದ ಹಿಡಿದು ಕಾಳು ಕಟ್ಟುವ ಹಂತದಲ್ಲಿದ್ದು, ಕಳೆದ ಹಲವು ದಿನಗಳಿಂದ ತಾಪಮಾನ ಹೆಚ್ಚಾಗುತ್ತಿರುವುದರಿಂದ, ಮಣ್ಣಿನ ತೇವಾಂಶ ಆವಿಯಾಗುವುದನ್ನು ತಪ್ಪಿಸಲು, ಮಣ್ಣಿನ ಮೇಲೆ ಕೃಷಿ ತ್ಯಾಜ್ಯಗಳ ಹೊದಿಕೆಯನ್ನು ಹರಡಿ ತೇವಾಂಶ ಸಂರಕ್ಷಣೆ ಮಾಡಿಕೊಳ್ಳಬೇಕು. ನೀರಾವರಿಯ ಸೌಲಭ್ಯವಿರುವ ರೈತರು ಬೆಳೆಗಳಿಗೆ ನೀರಾವರಿ ಒದಗಿಸಬೇಕು ಹಾಗೂ ಒಣಬೇಸಾಯವಿದ್ದಲ್ಲಿ ಎಡೆಕುಂಟೆಯಿಂದ ತೆಳುವಾದ ಅಂತರ ಬೇಸಾಯ ತೆಗೆದುಕೊಳ್ಳಬೇಕು.

ಹೆಚ್ಚಿನ ಮಾಹಿತಿಗಾಗಿ ಬಸವರಾಜ ನಾಗಲೀಕರ, ವಿಷಯ ತಂಜ್ಞರು (ಹವಾಮಾನಶಾಸ್ತ್ರ ವಿಭಾಗ) ಜಿಲ್ಲಾ ಕೃಷಿ ವಿಜ್ಞಾನ ಕೇಂದ್ರಕ್ಕೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

*ಸಾವಯುವ ಕೃಷಿ ತರಬೇತಿಗೆ ಅರ್ಜಿ*
———————————–
ಬಾಗಲಕೋಟೆ : ಭಾರತೀಯ ಕೃಷಿ ಕೌಶಲ್ಯಾಭಿವೃದ್ಧಿ ಮಂಡಳಿ ಅಡಿಯಲ್ಲಿ ಧಾರವಾಡ ಕೃಷಿ ವಿಶ್ವವಿದ್ಯಾಲಯ ಮತ್ತು ಜಿಲ್ಲಾ ಕೃಷಿ ವಿಶ್ವವಿದ್ಯಾಲಯದಲ್ಲಿ ಸಾವಯುವ ಕೃಷಿಯ ಬಗ್ಗೆ ೨೫ ದಿನಗಳ ತರಬೇತಿ ಕಾರ್ಯಕ್ರಮವನ್ನು ನವ್ಹೆಂಬರನಲ್ಲಿ ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯ ಆಸಕ್ತ ರೈತರು ಸೆಪ್ಟೆಂಬರ ೩೦ರೊಳಗಾಗಿ ನೋಂದಣಿ ಮಾಡಿಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೃಷಿ ವಿಜ್ಞಾನ ಕೇಂದ್ರದ ಬಸವರಾಜ ನಾಗಲಿಕರ, ಮೋ ಸಂಖ್ಯೆ ೭೩೪೯೦೭೩೧೪೪ ಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

*ಜಿಲ್ಲಾ ಸೈನಿಕ ಮಡಳಿ ರಚನೆ*
———————————–
ಬಾಗಲಕೋಟೆ : ಬಾಗಲಕೋಟೆ ಹಾಗೂ ಕೊಪ್ಪಳ ಜಿಲ್ಲೆಯಾದ್ಯಂತ ವಾಸಿಸುತ್ತಿರುವ ಯುದ್ದ, ಯುದ್ದದಂತಹ ಕಾರ್ಯಾಚರಣೆಯಲ್ಲಿ ಮಡಿದ ಯೋಧರ ಅವಲಂಬಿತರು, ಗಾಯಗೊಂಡ ಯೊಧರು, ಮಾಜಿ ಸೈನಿಕರು ಹಾಗೂ ಅವರ ಅವಲಂಬಿತರುಗಳ ಪುನರ್ವಸತಿ ಮತ್ತು ಕುಂದುಕೊರೆಗಳನ್ನು ಆಲಿಸಿ ಪರಿಹಾರ ಕೈಗೊಳ್ಳುವುದಕ್ಕಾಗಿ ಜಿಲ್ಲಾ ಸೈನಿಕ ಮಂಡಳಿ ರಚನೆ ಮಾಡಲಾಗುತ್ತಿದ್ದು, ಈ ಮಂಡಳಿಯಲ್ಲಿ ಸರ್ಕಾರೇತರ ಸದಸ್ಯರುಗಳನ್ನು (ಸಾರ್ವಜನಿಕ ವಲಯದ) ನೇಮಿಸಲಾಗುತ್ತಿದೆ. ಆಸಕ್ತ ಸದಸ್ಯರುಗಳು ತಮ್ಮ ವೈಯಕ್ತಿಕ ವಿವರಗಳನ್ನು ಸೆ.೦೫ ರೊಳಗಾಗಿ, ಜಿಲ್ಲಾ ಉಪನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಗೆ ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

";