ನಿಮ್ಮ ಸುದ್ದಿ ವಿಜಯಪುರ
ಆಲಮಟ್ಟಿಯ ಲಾಲ್ ಬಹದ್ದೂರ ಶಾಸ್ತ್ರೀ ಸಾಗರದ ಕೃಷ್ಣೆಯ ಜಲಧಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಗಂಗಾ ಪೂಜೆ ಸಲ್ಲಿಸಿ, ಬಾಗಿನ ಅರ್ಪಿಸಿದರು.
ಕಾರ್ಯಕ್ರಮದಲ್ಲಿ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಬಾಗಲಕೋಟೆ,ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ, ಸಂಸದ ರಮೇಶ ಜಿಗಜಿಣಗಿ, ಶಾಸಕರಾದ ಎ.ಎಸ್.ಪಾಟೀಲ ನಡಹಳ್ಳಿ, ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ, ಮಾಜಿ ಶಾಸಕರಾದ ಶಿವಾನಂದ ಪಾಟೀಲ, ಶ್ರಿಕಾಂತ ಕುಲಕರ್ಣಿ, ಎಸ್.ಕೆ.ಬೆಳ್ಳುಬ್ಬಿ, ಅಪ್ಪು ಪಟ್ಟಣಶೆಟ್ಟಿ ಸೇರಿದಂತೆ ಅವಳಿ ಜಿಲ್ಲೆಯ ಇತರೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.