ಬಾಗಲಕೋಟೆ
ಬಾಗಲಕೋಟೆ ಜಿಲ್ಲೆಯ ತೇರದಾಳದಲ್ಲಿ ನಡೆಯುವ ಜಿಲ್ಲಾಧಿಕಾರಿ ಜನತಾದರ್ಶನ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಸರ್ಕಾರಿ ಬಸ್ ಮೂಲಕ ಬಸ್ ಟಿಕೇಟ್ ದರ ನೀಡಿ ಬಸ್ ನಲ್ಲಿ ಹೋಗಿದ್ದಾರೆ.
ಮಹಿಳಾ ಅಧಿಕಾರಗಳು ಶಕ್ತಿ ಯೋಜನೆಯಡಿ ತಮ್ಮ ಆಧಾರ್ ಕಾರ್ಡ್ ತೋರಿಸಿ ಶೂನ್ಯ ದರ ಟಿಕೇಟ್ ಪಡೆದಿದ್ದಾರೆ.
ಅನಾವಶ್ಯಕ ಖರ್ಚುಗಳನ್ನು ಕಡಿಮೆ ಮಾಡುವ ಉದ್ದೇಶದಿಂದ ಹಾಗೂ ಪರಿಸರ ಮಾಲಿನ್ಯ ಕಡಿಮೆ ಮಾಡುವ ಸಲುವಾಗಿ ಎಲ್ಲಾ ಅಧಿಕಾರಿಗಳು ತಮ್ಮ ಸರಕಾರಿ ವಾಹನವನ್ನು ಉಪಯೋಗಿಸದೇ, ಕಡ್ಡಾಯವಾಗಿ ಜಿಲ್ಲಾಧಿಕಾರಿಗಳೊಂದಿಗೆ ಸರ್ಕಾರಿ ಬಸ್ ಮೂಲಕವೇ ಪ್ರಯಾಣಿಸುತ್ತಿದ್ದಾರೆ.