This is the title of the web page
This is the title of the web page

Live Stream

April 2025
S M T W T F S
 12345
6789101112
13141516171819
20212223242526
27282930  

| Latest Version 9.4.1 |

Crime NewsLocal NewsState News

ಲಂಚ ಸ್ವೀಕರಿಸುತ್ರಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು

ಲಂಚ ಸ್ವೀಕರಿಸುತ್ರಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು

ಬಾಗಲಕೋಟೆ:

ಜಿಲ್ಲೆಯ ಇಬ್ಬರು ನೌಕರರು ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತರ ಕೈಗೆ ಸಿಕ್ಕಿ ಬಿದ್ದಿದ್ದಾರೆ.

ಶಿಕ್ಷಕರ ಹೆಚ್ಚುವರಿ ವೇತನ ಪಾವತಿಗೆ ಹಣ ಬೇಡಿಕೆ ಇಟ್ಟು ಹಣ ಪಡೆಯುತ್ತಿರುವಾಗ ಬಾದಾಮಿ ಬಿಇಒ ಕಚೇರಿಯ ಅಧೀಕ್ಷಕ ವೆಂಕಟೇಶ ಇನಾಮದಾರ, ಬೀಳಗಿ ಕಂದಾಯ ಶಿರಸ್ತೆದಾರ ಮಹಾಂತೇಶ್ ಹುರಕಡ್ಲಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಮಂಗಳವಾರ ನಡೆದಿವೆ.

ಮಂಗಳವಾರ ಮಧ್ಯಾಹ್ನ ಬಾದಾಮಿ ಪಟ್ಟಣದ ಬಿಇಒ ಕಚೇರಿಯಲ್ಲಿ ಲೆಕ್ಕ ಅಧೀಕ್ಷಕ ವೆಂಕಟೇಶ ಇನಾಮದಾರ ಲೋಕಾಯುಕ್ತ ದಾಳಿ ಸಂದರ್ಭದಲ್ಲಿ ಶಿಕ್ಷಕರಿಂದ ನಗದು ಹಣ ಪಡೆಯುವ ಸಂದರ್ಭದಲ್ಲಿ ನೇರವಾಗಿ ಸಿಕ್ಕಿಬಿದ್ದಿದ್ದಾರೆ.

ಗುಳೇದಗುಡ್ಡ ನಗರದ ವೆಂಕಟೇಶ್ವರ ಪ್ರೌಢಶಾಲೆಯ ಶಿಕ್ಷಕರ ವೇತನವನ್ನು ಶೀಘ್ರ ಬಿಡುಗಡೆ ಮಾಡಬೇಕೆಂದು ಹೇಳಿದ್ದರು. ಆಗ ವೆಂಕಟೇಶ್ ಇನಾಮದಾರ ಅವರು 18 ಸಾವಿರ ರೂ ಲಂಚ ನೀಡಬೇಕೆಂದು ಬೇಡಿಕೆ ಇಟ್ಟಿದ್ದು, ಅದರಲ್ಲಿ 10,000 ಮೊದಲು ನೀಡಿದ್ದು, ಪಿರಿಯಾದಿದಾರ ಹುನಗುಂದ ತಾಲೂಕಿನ ಚಿತ್ತರಗಿ ಗ್ರಾಮದ ಸತ್ಯಪ್ಪ ಸಂಗಪ್ಪ ಕಾಮ ಇವರು ಮಂಗಳವಾರ ಮಧ್ಯಾಹ್ನ 1.30 ಗಂಟೆಗೆ 10 ಸಾವಿರ ರೂಪಾಯಿ ಲಂಚ ನೀಡುವಾಗ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ ಮಾಡಿದ್ದು ಇರುತ್ತದೆ.

ಲಂಚ ನೀಡುವ ಸಂದರ್ಭದಲ್ಲಿ ಲೋಕಾಯುಕ್ತ ಪಿ.ಎಸ್.ಐ. ಎಚ್.ಎನ್.ಬಿದರಿ ಹಾಗೂ ಸಿಬ್ಬಂದಿ ವರ್ಗದವರು ದಾಳಿ ಸಮಯದಲ್ಲಿ ಹಾಜರಿದ್ದರು. ಲೋಕಾಯುಕ್ತ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೀಳಗಿ ಕಂದಾಯ ಶಿರಸ್ತೆದಾರ ಮಹಾಂತೇಶ್ ಹುರಕಡ್ಲಿ
ಎಂಬುವರು ಪಹಣಿ (ಕಾಲಂ11)ಶರ್ತು ಕಡಿಮೆ ಮಾಡಿಕೊಡಲು 10 ಸಾವಿರ ಲಂಚ ಸ್ವೀಕರಿಸುವಾಗ
ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಮಂಜುನಾಥ ಕೃಷ್ಣಪ್ಪ ದಳವಾಯಿ ಸಾಕಿನ ಕೆರಿ ಹೆಸರಿನಲ್ಲಿರುವ ಸುನಗ ಗ್ರಾಮದ ಜಮೀನು ರಿಸ ನಂ 228 ನೆದ್ದರಲ್ಲಿ ಕ್ಷೇತ್ರ 8 ಎಕರೆ ನೆದ್ದರ ಪಹಣಿ ಕಾಲಂ 11 ರಲ್ಲಿರುವ ಶರ್ತು ಕಡಿಮೆ ಮಾಡಿಕೊಡಲು ರೂ 10,000/- ಗಳ ಲಂಚದ ತಂದು ಕೊಡಲು ಕೇಳಿ,ಸರಕಾರಿ ಕೆಲಸವನ್ನು ನ್ಯಾಯಯುತವಾಗಿ ನಿರ್ವಹಿಸದೆ ಲಂಚದ ಹಣಕ್ಕೆ ಬೇಡಿಕೆ ಇಟ್ಟು,ರೂ 10,000 ಹಣ ಪಡೆಯುವ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ಲೋಕಾಯುಕ್ತ ಎಸ್ ಪಿ ಅನಿತಾ ಹದ್ದನ್ನವರ ಅವರ ಮಾರ್ಗದರ್ಶನದಲ್ಲಿ ಬಾಗಲಕೋಟೆ ಲೋಕಾಯುಕ್ತ ಡಿವೈಎಸ್ಪಿ ಪುಷ್ಪಲತಾ. ಎನ್ ಅವರ ನೇತೃತ್ವದಲ್ಲಿ ಸಿಪಿಐಗಳಾದ ಬಸವರಾಜ.ಎಂ.ಅವಟಿ, ಬಸಗೌಡ.ಜೇ.ಪಾಟೀಲ ಹಾಗೂ ಸಿಬ್ಬಂದಿಗಳಾದ ಬಸವರಾಜ ದೇಸಾಯಿ,ನಾಗಪ್ಪ ಪೂಜಾರಿ, ಹಣಮಂತ ಮಾಸರಡ್ಡಿ,ಭೀಮನಗೌಡ ಪಾಟೀಲ,ಶಂಕರ ಬಟ್ಟಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Nimma Suddi
";