This is the title of the web page
This is the title of the web page

Live Stream

July 2025
S M T W T F S
 12345
6789101112
13141516171819
20212223242526
2728293031  

| Latest Version 9.4.1 |

Education NewsState News

ಕೋವಿಡ್ ನಿಂದ ಒಂದು ಸಾವು

26 ಜನ ಗುಣಮುಖ, 46 ಹೊಸ, 1 ಮೃತ ಪ್ರಕರಣ ದೃಢ

ನಿಮ್ಮ ಸುದ್ದಿ ಬಾಗಲಕೋಟೆ

ಜಿಲ್ಲೆಯಲ್ಲಿ ಕೋವಿಡ್‍ನಿಂದ 26 ಜನ ಗುಣಮುಖರಾಗಿದ್ದು, ಹೊಸದಾಗಿ 46 ಕೊರೊನಾ ಪ್ರಕರಣಗಳು ಹಾಗೂ ಒಂದು ಮೃತ ಪ್ರಕರಣ ರವಿವಾರ ದೃಡಪಟ್ಟಿವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 14173 ಕೋವಿಡ್ ಪ್ರಕರಣಗಳು ದೃಡಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 13841 ಜನ ಕೋವಿಡ್‍ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ಬೀಳಗಿ ಹುನಗುಂದ 13, ಜಮಖಂಡಿ 10, ಬಾಗಲಕೋಟೆ 9, ಬೀಳಗಿ 5, ಬಾದಾಮಿ 4, ಮುಧೋಳ 3 ಹಾಗೂ ಬೇರೆ ಜಿಲ್ಲೆಯ ಇಬ್ಬರಲ್ಲಿ ಸೋಂಕು ದೃಡಪಟ್ಟಿವೆ.
ಕೋವಿಡ್ ಲ್ಯಾಬ್‍ನಲ್ಲಿ ಪರೀಕ್ಷಿಸಲಾಗುತ್ತಿದ್ದ 1635 ಸ್ಯಾಂಪಲ್‍ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ.

ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 488575 ಸ್ಯಾಂಪಲ್‍ಗಳನ್ನು ಪರೀಕ್ಷೀಸಲಾಗಿದ್ದು, ಈ ಪೈಕಿ 472203 ನೆಗಟಿವ್ ಪ್ರಕರಣ, ಹಾಗೂ 137 ಮೃತ ಪ್ರಕರಣ ವರದಿಯಾಗಿರುತ್ತದೆ. ಇನ್ನು 195 ಮಾತ್ರ ಸಕ್ರಿಯ ಪ್ರಕರಣಗಳು ಇವೆ. ಇಲ್ಲಿವರೆಗೆ ಒಟ್ಟು 462 ಸ್ಯಾಂಪಲ್‍ಗಳು ಮಾತ್ರ ರಿಜೆಕ್ಟ ಆಗಿರುತ್ತವೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಕೋವಿಡ್‍ನಿಂದ ಓರ್ವ ಮೃತ
——————-
ನವನಗರ ಸೆಕ್ಟರ್ ನಂ.1ರ ನಿವಾಸಿ 71 ವರ್ಷ ವೃದ್ದ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ. ಮೃತ ವ್ಯಕ್ತಿ ಎಪ್ರೀಲ್ 6 ರಂದು ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ತೀರ್ವ ಉಸಿರಾಟದ ತೊಂದರೆ, ಮಧುಮೇಹ, ಸಕ್ಕರೆ ಖಾಯಿಲೆಯಿಂದ ಬಳಲುತ್ತಿದ್ದರು. ಎಪ್ರೀಲ್ 11 ರಂದು ಮೃತಪಟ್ಟಿದ್ದು, ಮೃತರನ್ನು ಕೋವಿಡ್ ನಿಯಮಾವಳಿಯಂತೆ ಅಂತ್ಯಕ್ರಿಯೆ ನೆರವೇರಿಸಲಾಗಿದೆ.

Nimma Suddi
";