ಬಾಗಲಕೋಟೆ:
ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಡೆಸಿದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಜಿಲ್ಲೆಗೆ ಸಂಬಂಧಿಸಿದ 23 ಅರ್ಜಿಗಳು ಸ್ವೀಕೃತಗೊಂಡಿದ್ದು, ಅದರಲ್ಲಿ ಒಂದು ಅರ್ಜಿಯನ್ನು ಇತ್ಯರ್ಥಪಡಿಸಲಾಯಿತು.
ಮುಖ್ಯಮಂತ್ರಿಗಳ ಜನತಾ ದರ್ಶನ ಕಾರ್ಯಕ್ರಮದಲ್ಲಿ ಬಾಗಲಕೋಟೆಯಿಂದ ವಿಡಿಯೋ ವಚ್ರ್ಯೂಚಲ್ ಮೂಲಕ ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಬಾಗಿಯಾಗಿ ಬೆಳಿಗ್ಗೆಯಿಂದ ಸಂಜೆಯವರೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ಸ್ವೀಕೃತವಾಗಿ ಅರ್ಜಿಗಳನ್ನು ಆಲಿಸಿದರು.
ಜನತಾ ದರ್ಶನ ಕಾರ್ಯಕ್ರಮದಲ್ಲಿ ಜಿಲ್ಲೆಗೆ ಸಂಬಂಧಿಸಿದ ಒಟ್ಟು 23 ಅಹವಾಲುಗಳು ಸ್ವೀಕೃತವಾಗಿದ್ದವು. ಅದರಲ್ಲಿ 9 ಕುಂದು ಕೊರತೆಗೆ ಸಂಬಂಧಿಸಿದ್ದವು. ಬಾದಾಮಿ ನಗರ ವ್ಯಾಪ್ತಿಯಲ್ಲಿ ಆಸ್ತಿ ಹೊಂದಿದ ಉತ್ತರ ಕನ್ನಡ ಜಿಲ್ಲೆಯ ಸುಜಾತಾ ಪಲಂಕಾರ ಎಂಬುವವರು ನಿವೇಶನದ ಉತಾರಗಳನ್ನು ಪೂರೈಸುವ ಕುರಿತು ಅರ್ಜಿ ಸಲ್ಲಿಸಿದ್ದರು. ತಕ್ಷಣವೇ ಅರ್ಜಿಯನ್ನು ಇತ್ಯರ್ಥಪಡಿಸಲಾಯಿತು.
ಬಾಗಲಕೋಟೆ ನಗರದಿಂದ ಸ್ಪೂರ್ತಿ ಹೊಸಳ್ಳಿ ಅವರಿಂದ ವಾರ್ಡ ನಂ.10ರ ಒತ್ತುವರಿ ಕುರಿತು, ಶರಣಪ್ಪ ಅವರು ಖುಲ್ಲಾ ಜಾಗವನ್ನು ನಿವೇಶನ ಮಾಡುವ ಕುರಿತು, ಇಲಕಲ್ಲಿನ ಚಂದ್ರಕಲಾ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಿದ್ದು, ಯಾವುದೇ ರೀತಿಯ ಹಣ ಜಮೆಯಾಗದ ಕುರಿತು ಹಾಗೂ ರಬಕವಿ-ಬನಹಟ್ಟಿಯ ಬಸವರಾಜ ಅವರಿಂದ ಭೂಸ್ವಾಧಿನಕ್ಕೆ ಸಂಬಂಧಿಸಿದ ಅರ್ಜಿಗಳು ಸೇರದಂತೆ 23 ಅರ್ಜಿಗಳು ಸ್ವೀಕೃತಗೊಂಡಿದ್ದವು. ಸದರಿ ಅರ್ಜಿಗಳನ್ನು ತುರ್ತಾಗಿ ಇತ್ಯರ್ಥಪಡಿಸಾಗುವುದೆಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಜನತಾ ದರ್ಶನದ ವಿಡಿಯೋ ವಚ್ರ್ಯೂಚಲ್ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕ ರಮೇಶ ಎಚ್, ಪಶು ಇಲಾಖೆಯ ಉಪನಿರ್ದೇಶಕ ಎಸ್.ಎಚ್.ಕರಡಿಗುಡ್ಡ, ಗ್ರಾಮೀಣ ಕುಡಿಯುವ ನೀರು ಯೋಜನೆಯ ಅಧಿಕಾರಿ ಪುರಾಣಿಕ, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಶಿವಾನಂದ ಪಟ್ಟಣಶೆಟ್ಟಿ, ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಸವಿತಾ ಕಾಳೆ ಸೇರಿದಂತೆ ಇತರೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಛಾಯಾಚಿತ್ರ ಲಗತ್ತಿಸಿದೆ. 1 ಮತ್ತು 2