This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

State News

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಆನ್‌ಲೈನ್ ಕಾರ್ಯಾಗಾರ

ನಿಮ್ಮ ಸುದ್ದಿ ಬಾಗಲಕೋಟೆ

ನಗರದ ಪ್ರಾರ್ಥನಾ ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯದಿಂದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗಾಗಿ ಉಚಿತವಾಗಿ ಆನ್‌ಲೈನ್ ವಿಷಯವಾರು ಕಾರ್ಯಾಗಾರ ಜೂ.೨೧ರಿಂದ ಆರಂಭವಾಗಲಿವೆ.

ಪ್ರತಿದಿನ ಬೆಳಗ್ಗೆ ೮ ರಿಂದ ೯ರ ವರೆಗೆ ನಡೆಯುವ ಈ ಕಾರ್ಯಾಗಾರದಲ್ಲಿ ಈ ವರ್ಷದ ಎಸ್ಸೆಸ್ಸೆಲ್ಸಿಯ ವಾರ್ಷಿಕ ಪರೀಕ್ಷೆ ಮಾದರಿಯಲ್ಲಾದ ಬದಲಾವಣೆಯನ್ನು ಗಮನದಲ್ಲಿಟ್ಟುಕೊಂಡು ವಿದ್ಯಾರ್ಥಿಗಳಿಗೆ ಸೂಕ್ತ ಮಾಹಿತಿ ನೀಡಲಾಗುವುದು. ಜತೆಗೆ ಪ್ರತಿ ವಿಷಯದ ಬಗ್ಗೆ ಪ್ರಶ್ನೆಪತ್ರಿಕೆ ಮತ್ತು ಸಂಭಾವ್ಯ ಪ್ರಶ್ನೆಗಳ ಬಗ್ಗೆ ನುರಿತ ಹಾಗೂ ಅನುಭವಿ ಸಂಪನ್ಮೂಲ ವ್ಯಕ್ತಿಗಳಿಂದ ಮಾಹಿತಿ ನೀಡಲಾಗುವುದು.

ಜೂ.೨೧ರಂದು ಗಣಿತ, ೨೨ರಂದು ಇಂಗ್ಲೀಷ್, ೨೩ರಂದು ವಿಜ್ಞಾನ, ೨೪ರಂದು ಕನ್ನಡ, ೨೫ರಂದು ಸಮಾಜವಿಜ್ಞಾನ ಹಾಗೂ ೨೬ರಂದು ಹಿಂದಿ ವಿಷಯ ಕುರಿತು ಕಾರ್ಯಾಗಾರ ನಡೆಯಲಿದೆ. ಮಾಹಿತಿಗೆ ಮೊ.೭೯೭೫೨೧೭೦೨೦, ೯೮೮೦೭೬೮೮೩೭ಗೆ ಸಂಪರ್ಕಿಸಬಹುದು ಎಂದು ಪ್ರಾಚಾರ್ಯರು ತಿಳಿಸಿದ್ದಾರೆ.

";