This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

Politics News

ಮಂಡ್ಯದ ಕೆರೆ ಗೋಡಿನಲ್ಲಿ ಹನುಮ ಧ್ವಜ ಹಾರಿಸುವವರೆಗೂ ಬಿಜೆಪಿ ಹೋರಾಟ ನಡೆಸಲಿದೆ: ವಿಪಕ್ಷ ನಾಯಕ ಆರ್. ಅಶೋಕ್

ಮಂಡ್ಯದ ಕೆರೆ ಗೋಡಿನಲ್ಲಿ ಹನುಮ ಧ್ವಜ ಹಾರಿಸುವವರೆಗೂ ಬಿಜೆಪಿ ಹೋರಾಟ ನಡೆಸಲಿದೆ: ವಿಪಕ್ಷ ನಾಯಕ ಆರ್. ಅಶೋಕ್

ಬೆಂಗಳೂರು: ಮಂಡ್ಯದ ಕೆರೆ ಗೋಡಿನಲ್ಲಿ ಹನುಮ ಧ್ವಜ ಹಾರಿಸುವವರೆಗೂ ಬಿಜೆಪಿ ಹೋರಾಟ ನಡೆಸಲಿದ್ದು, ಕಾಂಗ್ರೆಸ್ ಸರ್ಕಾರ ಇನ್ನಷ್ಟು ಕೆದಕಿದರೆ ಇದು ದೇಶ ವ್ಯಾಪಿ ಹೋರಾಟವಾಗಲಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರಿಗೆ ನೆಹರೂ ಕಾಲದಿಂದಲೂ ರಾಮನ ಮೇಲೆ ದ್ವೇಷ ಇದ್ದು, ಹನುಮನ ಬಗ್ಗೆ ದ್ವೇಷ ಶುರುವಾಗಿದೆ. ಕೆರೆಗೋಡಿನಲ್ಲಿ 20 – 30 ವರ್ಷಗಳಿಂದ ಹನುಮ ಧ್ವಜ ಹಾರಿಸಲಾಗುತ್ತಿದ್ದು, ಯಾವುದೇ ಮಸೀದಿಯ ಬಳಿ ಧ್ವಜ ಹಾರಿಸಿಲ್ಲ. ಪ್ರತಿ ಮನೆಯವರಿಂದ ದೇಣಿಗೆ ಸಂಗ್ರಹಿಸಿ 6 ಲಕ್ಷ ರೂ. ಖರ್ಚು ಮಾಡಿ 108 ಅಡಿ ಸ್ತಂಭ ನಿರ್ಮಿಸಲಾಗಿದೆ ಎಂದರು.

ನ್ಯಾಯಾಲಯದಲ್ಲಾದರೂ ತೀರ್ಮಾನ ಆಗಬೇಕಿತ್ತು. ಅದನ್ನು ಬಿಟ್ಟು ಲೋಕಸಭಾ ಚುನಾವಣಾ ಲಾಭಕ್ಕಾಗಿ ಹೀಗೆ ಮಾಡಲಾಗುತ್ತಿದೆ ಎಂದು ಹೇಳುವುದು ಸರಿಯಲ್ಲ. ಇಲ್ಲಿ ಧ್ವಜ ಹಾರಿಸುವುದು ಮಂಡ್ಯ ಜಿಲ್ಲೆಯ ಜನರಿಗೂ ಗೊತ್ತಿರಲಿಲ್ಲ ಎಂದ ಮೇಲೆ ಇದರಿಂದ ಬಿಜೆಪಿಗೆ ಯಾವ ರಾಜಕೀಯ ಲಾಭ ಬರುತ್ತದೆ ಎಂದು ಆರ್. ಅಶೋಕ್ ಪ್ರಶ್ನಿಸಿದರು

ಇಡೀ ವರ್ಷ ಅಲ್ಲಿ ಹನುಮ ಧ್ವಜ ಹಾರಿಸಲಾಗುತ್ತದೆ. ಸ್ವಾತಂತ್ರ್ಯ ದಿನಾಚರಣೆ, ಗಣರಾಜ್ಯೋತ್ಸವ ದಿನದಂದು ರಾಷ್ಟ್ರ ಧ್ವಜ ಹಾರಿಸಲಾಗುತ್ತದೆ. ಹನುಮನ ನಾಡಿನಲ್ಲಿ ಹನುಮ ಧ್ವಜ ಹಾರಿಸಲು ಸರ್ಕಾರ ಬಿಡುತ್ತಿಲ್ಲ . ಹೋರಾಟ ಇಡೀ ಮಂಡ್ಯ ಜಿಲ್ಲೆಯ ಮನೆಗಳನ್ನು ತಲುಪಲಿದೆ. ಇದು ಅಕ್ರಮವಾಗಿದ್ದರೆ ನೋಟಿಸ್ ಜಾರಿ ಮಾಡಬೇಕಿತ್ತು. ಎಂದು ಆಕ್ರೋಶ ವ್ಯಕ್ತಪಡಿಸಿದರು
.

";