ಬಾಗಲಕೋಟೆ
ಜಿಲ್ಲೆಯ ಹುನಗುಂದ ತಾಲೂಕಿನ ಅಮೀನಗಡ ಪಟ್ಟಣದಲ್ಲಿ ಅತಿಕ್ರಮಣಗೊಂಡ ಜಾಗೆಗಳ ಪರಿಶೀಲನೆ ನಡೆಸಿ ತೆರವುಗೊಸಲು ಕ್ರಮ ಕೈಗೊಳ್ಳುವಂತೆ ಪಟ್ಪಣ ಪಂಚಾಯಿತಿ ಮುಖ್ಯಾಧಿಕಾರಿ ಗುರುರಾಜ ಚೌಕಿಮಠ ಆದೇಶಿಸಿದ್ದಾರೆ.
ಜ.೧೫ರಂದು ನಡೆದ ಸಾಮಾನ್ಯ ಸಭೆಯಲ್ಲಿ ಪಂಚಾಯತಿ ವ್ಯಾಪ್ತಿಯಲ್ಲಿನ ಅತಿಕ್ರಮಣ ಜಾಗೆಗಳನ್ನು ಪರಿಶೀಲಿಸಿ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳುವಂತೆ ಶಾಸಕ ವೀರಣ್ಣ ಚರಂತಿಮಠ ಅವರ ಸೂಚನೆ ಮೇರೆಗೆ ಈ ಆದೇಶ ಹೊರಡಿಸಿದ್ದಾರೆ.
ಪಟ್ಟಣ ಪಂಚಾಯಿತಿಯ ಕಿರಿಯ ಅಭಿಯಂತರ ಎನ್.ಎನ್.ಖಾಜಿ, ಕಿರಿಯ ಆರೋಗ್ಯ ನಿರೀಕ್ಷಕ ಸಂತೋಷ ವ್ಯಾಪಾರಿಮಠ ಅವರಿಗೆ ೧೬ ವಾರ್ಡ್ ಗಳಲ್ಲಿ ಸಮೀಕ್ಷೆ ಮಾಡಿ ಪಂಚಾಯತ ಜಾಗೆಯನ್ನು ಅತಿಕ್ರಮಣವಾದ ಸ್ಥಳಗಳನ್ನು ಕಾನೂನು ರೀತಿ ನೋಟಿಸ್ ನೀಡಿ ಅಧೀನ ಸಿಬ್ಬಂದಿಯೊಂದಿಗೆ ಅತಿಕ್ರಮಣ ತೆರವುಗೊಳಿಸಬೇಕು. ವಿಳಂಬವಾದಲ್ಲಿ ಈ ಕಾರ್ಯಕ್ಕೆ ನಿಯೋಜಿಸಿದ ಸಿಬ್ಬಂದಿಯನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಆದೇಶದಲ್ಲಿ ತಿಳಿಸಿದ್ದಾರೆ.