This is the title of the web page
This is the title of the web page

Live Stream

December 2024
S M T W T F S
1234567
891011121314
15161718192021
22232425262728
293031  

| Latest Version 9.4.1 |

State News

ಕನ್ನಡಿಗರ ಹಿತ ಕಾಯುವುದು ನಮ್ಮ ಕೆಲಸ: ಸಿಎಂ ಸಿದ್ದರಾಮಯ್ಯ

ಕನ್ನಡಿಗರ ಹಿತ ಕಾಯುವುದು ನಮ್ಮ ಕೆಲಸ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡಿಗರ ಹಿತ ಕಾಯುವುದು ನಮ್ಮ ಕೆಲಸವಾಗಿದ್ದು, ಜನಸ್ಪಂದನ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಜನರ ಸಮಸ್ಯೆಗೆ ಸ್ಥಳದಲ್ಲಿ ಪರಿಹಾರ ಕೊಡಲು ಪ್ರಯತ್ನ ನಡೆಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.

ಜನಸ್ಪಂದನದಲ್ಲಿ ಮಾತನಾಡಿ ಟವರು, ರಾಜ್ಯಮಟ್ಟದ ಎರಡನೇ ಜನಸ್ಪಂದನ ಕಾರ್ಯಕ್ರಮ ಇದಾಗಿದೆ. ಮೊದಲನೇ ಜನಸ್ಪಂದನ ನವೆಂಬರ್ ತಿಂಗಳಲ್ಲಿ ನಡೆದಿತ್ತು. ಸುಮಾರು 5000 ಅರ್ಜಿ ಬಂದಿದ್ದವು. ಈ ಪೈಕಿ 98% ವಿಲೇವಾರಿ ಆಗಿದ್ದು, ಸಮಸ್ಯೆಗಳಿಗೆ ಪರಿಹಾರ ಕೊಡುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ. ಅದು ಕೂಡಾ ಕೆಲವೇ ದಿನಗಳಲ್ಲಿ ಇತ್ಯರ್ಥ ಆಗುತ್ತದೆ ಎಂದರು.

ಹತ್ತು ಸಾವಿರಕ್ಕೂ ಹೆಚ್ಚು ಜನರು ಸಮಸ್ಯೆಗಳನ್ನು ಹೊತ್ತು ಇಲ್ಲಿಗೆ ಬಂದಿದ್ದೀರಿ. ನೀವು ಇರುವ ಜಾಗಕ್ಕೆ ಬಂದು ಅರ್ಜಿ ಸ್ಪೀಕಾರ ಮಾಡುತ್ತೇನೆ ಎಂದು ತಿಳಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ, 108 ಜನಸ್ಪಂದನ ಕಾರ್ಯಕ್ರಮ ಮಾಡಲಾಗಿದೆ. ಸರ್ಕಾರವನ್ನು ಜನರ ಬಳಿಗೆ ಕೊಂಡೊಯ್ಯುದು ನಮ್ಮ ಉದ್ದೇಶವಾಗಿದೆ. ಆಡಳಿತ ಜನರ ಬಳಿಗೆ ಹೋಗಬೇಕು ಎಂಬುದು ಸರ್ಕಾರದ ಉದ್ದೇಶ ಎಂದು ಹೇಳಿದರು.

Nimma Suddi
";