ಬೆಂಗಳೂರು: ಬಿಜೆಪಿಗೆ ಪಾಕಿಸ್ತಾನ ಶತ್ರು ರಾಷ್ಟ್ರ ಇರಬಹುದು. ಆದರೆ, ನಮಗಲ್ಲ ಎಂದು ಕಾಂಗ್ರೆಸ್ ಎಂಎಲ್ಸಿ ಬಿಕೆ ಹರಿಪ್ರಸಾದ್ ತಿಳಿಸಿದರು.
ಇವರದ್ದೇ ಪಕ್ಷದವರಾದ ಮಾಜಿ ಪ್ರಧಾನಿ ದಿವಂಗತ ಇಂದಿರಾಗಾಂಧಿ ಅವರು ಪಾಕಿಸ್ತಾನದ ವಿರುದ್ಧ ಯುದ್ಧ ಮಾಡಿದ್ದು, ಮತ್ತೆ, ಪಾಕ್ ವಿರುದ್ಧ ಯುದ್ಧ ಮಾಡಿದ ಇಂದಿರಾಗಾಂಧಿ ಪಕ್ಷದವರು ನಾವು ಎಂದು ಶಾಸಕ ಎಸ್ಎನ್ ನಾರಾಯಣಸ್ವಾಮಿ ಅವರು ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ವಿಚಾರವಾಗಿ ಸದನದಲ್ಲಿ ನಡೆದ ಚರ್ಚೆ ವೇಳೆ ಎದೆ ತಟ್ಟಿಕೊಂಡು ಹೇಳಿದರು.
ಗೃಹ ಸಚಿವ ಪರಮೇಶ್ವರ್ ಕೂಡ ಪಾಕ್ ಯುದ್ಧದ ಬಗ್ಗೆ ಪ್ರಸ್ತಾಪಿಸಿದ್ದು, ವಿಧಾನ ಪರಿಷತ್ ಕಪಾಲದಲ್ಲಿ ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದ ಮೇಲಿನ ಚರ್ಚೆಯ ವೇಳೆ ಮಾತನಾಡಿದ ಬಿಕೆ ಹರಿಪ್ರಸಾದ್ ಅವರು ಈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್‌ಗೆ ಪಾಕಿಸ್ತಾನ ಶತ್ರು ರಾಷ್ಟ್ರವಲ್ಲ ಎಂದು ವಿಶ್ಲೇಸಿದರು.
ಸೋಮವಾರ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ ನಾಸೀರ್ ಹುಸೇನ್ ವಿಜಯಶಾಲಿ ಎಂದು ಘೋಷಿಸಿದ ನಂತರ ವಿಧಾನಸೌಧದಲ್ಲಿ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಒಬ್ಬ ಪಾಕಿಸ್ತಾನದ ಪರ ಘೋಷಣೆಗಳನ್ನು ಕೂಗಿದ್ದ. ಈ ಸಂಬಂಧ ಆರೋಪಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಬಿಜೆಪಿ ಬುಧವಾರ ಉಭಯ ಸದನಗಳಲ್ಲಿ ಗದ್ದಲ ಸೃಷ್ಟಿಸಿತು.
ಪರಿಷತ್ತಿನಲ್ಲಿ ನಡೆದ ಚರ್ಚೆಯ ವೇಳೆ ಹರಿಪ್ರಸಾದ್ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಶತ್ರು ದೇಶ ಎಂದರೆ ನಿಮ್ಮ (ಬಿಜೆಪಿ) ಪ್ರಕಾರ ಅದು ಪಾಕಿಸ್ತಾನ. ಆದರೆ, ನಮಗೆ ಅದು ಶತ್ರು ದೇಶವಲ್ಲ, ನೆರೆಯ ದೇಶ ಮಾತ್ರ ಎಂದಿದ್ದಾರೆ. ಈ ಹೇಳಿಕೆ ಹೊರಬೀಳುತ್ತಿದ್ದಂತೆ ಹಲವಾರು ಬಿಜೆಪಿ ಸದಸ್ಯರು ವಾಗ್ದಾಳಿ ನಡೆಸಿದ್ದಾರೆ.