This is the title of the web page
This is the title of the web page

Live Stream

November 2024
S M T W T F S
 12
3456789
10111213141516
17181920212223
24252627282930

| Latest Version 9.4.1 |

State News

ಕುಡಿಯುವ ನೀರಿಗಾಗಿ ಜನತೆ ಸಮಸ್ಯೆಗೊಳಗಾಗಿದ್ದಾರೆ: ಎಚ್‌.ಡಿ.ದೇವೇಗೌಡ

ಕುಡಿಯುವ ನೀರಿಗಾಗಿ ಜನತೆ ಸಮಸ್ಯೆಗೊಳಗಾಗಿದ್ದಾರೆ: ಎಚ್‌.ಡಿ.ದೇವೇಗೌಡDeve Gowda

ಬೆಂಗಳೂರು: ಬರಪರಿಹಾರ ನೀಡದಿರುವ ಕೇಂದ್ರ ಸರ್ಕಾರದ ನಡೆಯನ್ನು ಖಂಡಿಸಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‌ಗೆ ಹೋಗಿರುವುದು ರಾಜಕೀಯ ಪ್ರೇರಿತವಾದುದು ಎಂದು ಎಚ್‌.ಡಿ.ದೇವೇಗೌಡ ಟೀಕಿಸಿದರು

ಸುದ್ದಿಗಾರರ ಜತೆ ಮಾತನಾಡಿದ ಅವರು, ಇದೇ ಮೊದಲ ಬಾರಿಗೆ ರಾಜ್ಯ ಸರ್ಕಾರವು ಬರ ಪರಿಹಾರ ವಿಚಾರದಲ್ಲಿ ಸುಪ್ರೀಂಕೋರ್ಟ್‌ ಮೊರೆ ಹೋಗಿದ್ದು, ಈ ಹಿಂದೆಯೂ ಹಲವು ಬಾರಿ ಕೇಂದ್ರ ಸರ್ಕಾರ ಬರ ಪರಿಹಾರ ನೀಡಿಲ್ಲ. ರಾಜ್ಯ ಸರ್ಕಾರವೇ ಸೂಕ್ತ ಕ್ರಮ ಕೈಗೊಂಡಿರುವ ನಿದರ್ಶನಗಳಿವೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗೊತ್ತಿಲ್ಲವೇ? ಇದು ರಾಜಕೀಯ ಪ್ರೇರಿತ ಎಂದು ಹೇಳಿದರು.

ಈ ನಡುವೆ, ಇದೇ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ, ಬರ ಪರಿಹಾರ ವಿಚಾರದಲ್ಲಿ ಸರ್ಕಾರ ನ್ಯಾಯಾಲಯಕ್ಕೆ ಹೋಗಿರುವುದು ಒಂದು ಸ್ಟಂಟ್‌ ಅಷ್ಟೇ .ಬರದಿಂದ ಜನ ವಲಸೆ ಹೋಗುತ್ತಿದ್ದಾರೆ: ಕಾವೇರಿ ಕೊಳ್ಳದ 9 ಜಿಲ್ಲೆಯ 22 ತಾಲೂಕು ಮತ್ತು ಬೆಂಗಳೂರು ನಗರ ಸೇರಿ ಅನೇಕ ಕಡೆ ಕುಡಿಯುವ ನೀರಿನ ಸಮಸ್ಯೆ ತುಂಬಾ ಭೀಕರವಾಗಿದ್ದು, ಕಳೆದ ಐದು ದಿನಗಳಿಂದ ಕೆಲವರು ಮನೆಗಳಿಗೆ ಬೀಗ ಹಾಕಿ ವಲಸೆ ಹೋಗಿದ್ದಾರೆ ಎಂದು ತಿಳಿಸಿದರು.

ಕುಡಿಯಲು ನೀರಿಲ್ಲ, ಈ ಭೀಕರ ಸಮಸ್ಯೆಗೆ ಪರಿಹಾರ ಒದಗಿಸಲು ರಾಜ್ಯ ಸರ್ಕಾರದಿಂದ ಸಾಧ್ಯವಾಗಿಲ್ಲ. ಹೀಗಾಗಿ ಜನರು ತಮ್ಮ ಮನೆಗಳಿಗೆ ಬೀಗ ಹಾಕಿ ಬೇರೆ ಊರುಗಳಿಗೆ ಹೋಗುತ್ತಿದ್ದಾರೆ ಎಂದರು.

ಪ್ರಧಾನಿ ಅನುಮತಿ ಕೊಡಿಸಬೇಕು: ಇದು ಕಾಂಗ್ರೆಸ್, ಬಿಜೆಪಿ, ಡಿಎಂಕೆ ಅಥವಾ ಯಾವುದೇ ಪಕ್ಷದ ಯೋಜನೆಯಲ್ಲ, ಬದಲಿಗೆ ಜನಪರವಾದ ಯೋಜನೆಯಾಗಿದೆ. ಕುಡಿಯುವ ನೀರಿಗಾಗಿ ಜನತೆ ಸಮಸ್ಯೆಗೊಳಗಾಗಿದ್ದಾರೆ. ಕಾವೇರಿ ಕೊಳ್ಳದ ಒಂಬತ್ತು ಜಿಲ್ಲೆಗಳಲ್ಲಿ ಜಲ ಸಂಕಷ್ಟ ಎದುರಾಗಿದೆ. ಮೇಕೆದಾಟು ಯೋಜನೆಯಿಂದ ಐದು ಸಾವಿರ ಎಕರೆ ಮುಳುಗಡೆಯಾಗುವುದಿಲ್ಲ. ಈ ಅಂಶವನ್ನು ಪರಿಸರ ನಿಪುಣರು ಅರ್ಥ ಮಾಡಿಕೊಳ್ಳಬೇಕು ಎಂದು ಸೂಚಿಸಿದರು.

Nimma Suddi
";