ಬಾಗಲಕೋಟೆ
ಹಿಂದಿನ ಚುನಾವಣೆಗಿಂತ ಮುಂಬರುವ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಯೋಜನೆ ರೂಪಿಸುವಂತೆ ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್.ವಸ್ತ್ರದ ಹೇಳಿದರು.
ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಶನಿವಾರ ಮುಖ್ಯ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾ ಸ್ವೀಪ್ ಅಧಿಕಾರಿಗಳೊಂದಿಗೆ ರಾಷ್ಟ್ರೀಯ ಮತದಾರರ ದಿನಾಚರಣೆ, ಮತದಾರ ಪಟ್ಟಿ ವಿಶೇಷ ಪರಿಷ್ಕರಣೆ ಮತ್ತು ಇತರೆ ಸ್ವೀಪ್ ಚಟುವಟಿಕೆಗಳ ಕುರಿತು ಜರುಗಿದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮತದಾನದ ಬಗ್ಗೆ ಜನರಲ್ಲಿ ಅರಿವು ಮೂಡಿಬೇಕು. ಚುನಾವಣಾ ಸಾಕ್ಷರಥಾ ಕ್ಲಬ್‍ಗಳ ಜವಾಬ್ದಾರಿ ಹೆಚ್ಚಿಗೆ ಇದೆ. ಮುಂಬರುವ ಅಂತರರಾಷ್ಟ್ರೀಯ ಮತದಾನ ದಿನಾಚರಣೆ ಅಂತವಾಗಿ ವಿವಿಧ ವಿಷಯಗಳ ಮೇಲೆ ಸ್ಪರ್ಧೆಗಳನ್ನು ಏರ್ಪಡಿಸಲಾಗುತ್ತಿದೆ. ಡಿಸೆಂಬರ 15 ರೊಳಗಾಗಿ ಅವುಗಳೆಲ್ಲವೂ ಪೂರ್ಣಗೊಳ್ಳಬೇಕು. ಯುವಕರು, ಮಹಿಳೆಯರು ಹಾಗೂ ವಿಕಲಚೇತನರು ಹೆಚ್ಚಿನ ಪ್ರಮಾಣದಲ್ಲಿ ಮತದಾನ ಮಾಡುವಂತಾಗಬೇಕು. ಈ ನಿಟ್ಟಿನಲ್ಲಿ ಸ್ವೀಪ್ ಚಟುವಟಿಕೆಗಳನ್ನು ರೂಪಿಸಲು ತಿಳಿಸಿದರು.
ಜಿಲ್ಲೆಯಲ್ಲಿರುವ ಪ್ರತಿಯೊಂದು ಮತಗಟ್ಟೆಗಳು ಸುಸ್ಥಿತಿಯಲ್ಲಿ ಇರಬೇಕು. ಶೌಚಾಲಯ, ರ್ಯಾಂಪ್ ಸೇರಿದಂತೆ ಇತರೆ ಮೂಲಭೂತ ಸೌಲಭ್ಯಗಳು ಹೊಂದಿರಬೇಕು. ರ್ಯಾಂಪ್ ವೈಜ್ಞಾನಿಕ ರೀತಿಯಲ್ಲಿ ಇರಬೇಕು. ಶಾಲೆಗಳಲ್ಲಿ ರ್ಯಾಂಪ್ ಇಲ್ಲದಿದ್ದರೆ ಅಂತ ಶಾಲೆಗಳಿಗೆ ನೋಟಿಸ್ ನೀಡಲು ತಿಳಿಸಿದರು. ಮತದಾರರ ಪಟ್ಟಿಯಲ್ಲಿ ಕುಟುಂಬದ ಸದಸ್ಯರು ಒಂದೆ ಕಡೆ ಬರುವಂತೆ ನೋಡಿಕೊಳ್ಳಬೇಕು. ಮನೆ ಮನೆ ಸರ್ವೆ ಕಾರ್ಯ ಸರಿಯಾಗಿ ಆಗಿಲ್ಲ. ಸರ್ವೆದಲ್ಲಿ ಬಿಟ್ಟು ಹೋದವರು, ಸರ್ವೆ ಸಮಯದಲ್ಲಿ ಮನೆ ಬೀಗಿ ಹಾಕಿದ್ದರೆ ಪುನಃ ಸರ್ವೆ ನಡೆಸಿ ಇಲ್ಲವೇ ಮತಗಟ್ಟೆ ಅಧಿಕಾರಿ ಹಾಗೂ ಚುನಾವಣಾ ಸಾಕ್ಷರಥಾ ಕ್ಲಬ್ ಸೇರಿ ಪ್ರಭಾರ ಪೇರಿ ನಡೆಸಲು ತಿಳಿಸಿದರು.
ಜಿ.ಪಂ ಸಿಇಓ ಹಾಗೂ ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿ ಆಗಿರುವ ಶಶಿಧರ ಕುರೇರ ಮಾತನಾಡಿ 473 ಶಾಲೆಗಳು, 142 ಪದವಿ ಪೂರ್ವ ಕಾಲೇಜು ಹಾಗೂ 69 ಪದವಿ ಕಾಲೇಜುಗಳಲ್ಲಿ ಮತದಾನದ ಅವರಿವು ಮೂಡಿಸುವ ವಿವಿಧ ಚಟುವಟಿಕೆಗಳನ್ನು ನಡೆಸಲಾಗಿದೆ. ಬರುವ 2024ರಲ್ಲಿ ಮತದಾರರ ನೋಂದಣಿಗೆ ವಿವಿಧ ಕಾಲೇಜುಗಳಿಗೆ ಭೇಟಿ ನೀಡಿ ಅರಿವು ಮೂಡಿಸುವ ಕಾರ್ಯಕ್ರಮ ಹಾಕಿಕೊಳ್ಳಲಾಗುತ್ತಿದೆ. ಅಲ್ಲದೇ ಮತಗಟ್ಟೆಗಳ ದುರಸ್ಥಿಗಳಿಗೆ ನರೇಗಾದಡಿ ಕ್ರೀಯಾ ಯೋಜನೆ ರೂಪಿಸಲಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮತದಾನ ಪ್ರಮಾಣದಲ್ಲಿ ಶೇ.1 ರಷ್ಟು ಹೆಚ್ಚಳವಾಗಿರುವುದಾಗಿ ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ, ಜಿ.ಪಂ ಯೋಜನಾಧಿಕಾರಿ ಎನ್.ವಾಯ್.ಬಸರಿಗಿಡದ, ಸಹಾಯಕ ಯೋಜನಾಧಿಕಾರಿ ಭೀಮಪ್ಪ ತಳವಾರ ಸೇರಿದಂತೆ ಸ್ವೀಪ್ ನೋಡಲ್ ಅಧಿಕಾರಿಗಳು ಉಪಸ್ಥಿತರಿದ್ದರು
*ಕಾರ್ಮಿಕ ಸಚಿವರ ಜಿಲ್ಲಾ ಪ್ರವಾಸ*
ಬಾಗಲಕೋಟೆ:ಕಾರ್ಮಿಕ ಇಲಾಖೆ ಸಚಿವರಾದ ಸಂತೋಷ ಲಾಡ್ ಅವರು ಅಕ್ಟೋಬರ 3 ರಂದು ಬಾಗಲಕೋಟೆ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಅಂದು ಮಧ್ಯಾಹ್ನ 3 ಗಂಟೆಗೆ ಶಾಸಕರು, ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ಸಭೆ ನಡೆಸುವರು. ಸಂಜೆ 4 ರಿಂದ 5 ವರೆಗೆ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಂಜೆ 5 ರಿಂದ 6 ವರೆಗೆ ಕಾರ್ಮಿಕ ಸಂಘಟನೆಗಳ ಸಭೆ, 6 ರಿಂದ 7 ವರೆಗೆ ಮಾಲಿಕ ವರ್ಗದ ಸಂಘಟನೆಗಳ, ಆಡಳಿತ ವರ್ಗದವರ ಸಭೆ ನಡೆಸಿ, ರಾತ್ರಿ 7 ಗಂಟೆಗೆ ಬೆಳಗಾವಿಗೆ ಪ್ರಯಾಣ ಬೆಳೆಸಲಿದ್ದಾರೆಂದು ಪ್ರಕಟಣೆ ತಿಳಿಸಿದೆ.