ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆಯಾಗಿರುವ ಡಾ.ಸುಧಾ ಮೂರ್ತಿ ಅವರು ರಾಜ್ಯಸಭೆಗೆ ನಾಮನಿರ್ದೇಶ ಮಾಡಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.
ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಣೆ ಮಾಡಿದ್ದು, ಟ್ವೀಟ್ ಮೂಲಕ ಸುಧಾ ಮೂರ್ತಿ ಅವರನ್ನು ಅಭಿನಂದಿಸಿದ್ದಾರೆ.ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ ಪ್ರಧಾನಿ ಮೋದಿ, ಭಾರತದ ರಾಷ್ಟ್ರಪತಿಯವರು ಸುಧಾಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿರುವುದು ನನಗೆ ಸಂತೋಷ ತಂದಿದೆ. ಸಮಾಜಸೇವೆ, ಲೋಕೋಪಕಾರ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಸುಧಾ ಮೂರ್ತಿ ಅವರ ಕೊಡುಗೆ ಅಪಾರ ಮತ್ತು ಸ್ಪೂರ್ತಿದಾಯಕವಾಗಿದೆ ಎಂದರು.
ರಾಜ್ಯಸಭೆಯಲ್ಲಿ ಅವರ ಉಪಸ್ಥಿತಿಯು ನಮ್ಮ ‘ನಾರಿ ಶಕ್ತಿ’ಗೆ ಪ್ರಬಲವಾದ ಸಾಕ್ಷಿಯಾಗಿದೆ, ಇದು ನಮ್ಮ ರಾಷ್ಟ್ರದ ಭವಿಷ್ಯವನ್ನು ರೂಪಿಸುವಲ್ಲಿ ಮಹಿಳೆಯರ ಶಕ್ತಿ ಮತ್ತು ಸಾಮರ್ಥ್ಯವನ್ನು ಉದಾಹರಿಸುತ್ತದೆ. ಅವರ ಸಂಸದೀಯ ಅವಧಿ ಫಲಪ್ರದವಾಗಲಿ ಎಂದು ಮೋದಿ ಹಾರೈಸಿದರು.