This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

National NewsPolitics News

ಹಿರಿಯ ನಟಿ ವೈಜಯಂತಿಮಾಲಾ ಅವರನ್ನು ಭೇಟಿ ಮಾಡಿದ ಪಿಎಂ ನರೇಂದ್ರ ಮೋದಿ

ಹಿರಿಯ ನಟಿ ವೈಜಯಂತಿಮಾಲಾ ಅವರನ್ನು ಭೇಟಿ ಮಾಡಿದ ಪಿಎಂ ನರೇಂದ್ರ ಮೋದಿ

ಪದ್ಮ ವಿಭೂಷಣ ಪ್ರಶಸ್ತಿ ಪಡೆದ ಹಿರಿಯ ನಟಿ ವೈಜಯಂತಿ ಮಾಲಾ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಭೇಟಿ ಮಾಡಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.

ತಮಿಳುನಾಡಿನ ಚೆನ್ನೈನಲ್ಲಿ ಈ ಭೇಟಿ ನಡೆದಿದ್ದು, ಈ ವಿಚಾರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿದ್ದಾರೆ. ಭಾರತೀಯ ಚಿತ್ರರಂಗಕ್ಕೆ ವೈಜಯಂತಿಮಾಲಾ ಅವರು ನೀಡಿದ ಕೊಡುಗೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸ್ಮರಿಸಿದ್ದಾರೆ.

ನರೇಂದ್ರ ಮೋದಿ ಹಂಚಿಕೊಂಡ ಮೊದಲ ಫೋಟೋದಲ್ಲಿ ಅವರು ವೈಜಯಂತಿ ಅವರಿಗೆ ಕೈಮುಗಿದು ನಮಿಸುತ್ತಿದ್ದಾರೆ. ಮತ್ತೊಂದು ಫೋಟೋದಲ್ಲಿ ಅವರ ಎದುರು ಕುಳಿತು ಚರ್ಚೆ ಮಾಡುತ್ತಿದ್ದಾರೆ. ಸಿನಿಮಾ ರಂಗಕ್ಕೆ ಅವರು ನೀಡಿದ ಕೊಡುಗೆಯನ್ನು ಸ್ಮರಿಸಿದ್ದಾರೆ ಮೋದಿ. ‘ಚೆನ್ನೈನಲ್ಲಿ ವೈಜಯಂತಿ ಮಾಲಾ ಅವರನ್ನು ಭೇಟಿ ಮಾಡಿದ್ದು ಖುಷಿ ನೀಡಿದೆ.

ಅವರು ಪದ್ಮ ವಿಭೂಷಣ ಪ್ರಶಸ್ತಿ ಪಡೆದಿದ್ದಾರೆ ಮತ್ತು ಭಾರತೀಯ ಸಿನಿಮಾ ಜಗತ್ತಿಗೆ ನೀಡಿದ ಕೊಡುಗೆಗಾಗಿ ಭಾರತದಾದ್ಯಂತ ಮೆಚ್ಚುಗೆ ಪಡೆದಿದ್ದಾರೆ’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.

";