This is the title of the web page
This is the title of the web page

Live Stream

July 2025
S M T W T F S
 12345
6789101112
13141516171819
20212223242526
2728293031  

| Latest Version 9.4.1 |

State News

ಪೊಲೀಸ್ ಧ್ವಜ ದಿನಾಚರಣೆ

ಪೊಲೀಸರ ಕಾರ್ಯ ಶ್ಲಾಘನೀಯ : ಗಡದಿನ್ನಿ
ನಿಮ್ಮ ಸುದ್ದಿ ಬಾಗಲಕೋಟೆ

ಸಮಾಜದ ರಕ್ಷಣೆಯಲ್ಲಿ ತೊಡಗಿರುವ ಪೊಲೀಸರ ಕಾರ್ಯ ಶ್ಲಾಘನೀಯವಾದುದು ಎಂದು ನಿವೃತ್ತ ಆರ್.ಎಸ್.ಐ ಎಂ.ಎಚ್.ಗಡದಿನ್ನಿ ತಿಳಿಸಿದರು.

ನವನಗರದ ಪೊಲೀಸ್ ಕವಾಯತ ಮೈದಾನದಲ್ಲಿ ಹಮ್ಮಿಕೊಂಡ ಪೊಲೀಸ್ ಧ್ವಜಾ ದಿನಾಚರಣೆ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿ, ವಂದನೆ ಸ್ವೀಕಾರ ಮತ್ತು ಸಾಂಪ್ರದಾಯಕ ಕವಾಯತ್ ವೀಕ್ಷಿಸಿ ಮಾತನಾಡಿದ ಅವರು ಸಮಾಜ ಸುರಕ್ಷತೆಯ ಹೊಣೆ ಹೊತ್ತು ಕಾರ್ಯನಿರ್ವಹಿಸುತ್ತಿರುವ ಪೊಲೀಸ್‍ರು ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸುವ ಮೂಲಕ ಇಲಾಖೆಗೆ ಗೌರವ ತರುವ ಕೆಲಸವಾಗಬೇಕು ಎಂದರು.

ರಕ್ಷಣೆಯಲ್ಲಿ ಪೊಲೀಸ್ ವೃತ್ತಿ ಮಹತ್ವವಾಗಿದ್ದು, ಸೇವೆಯಿಂದ ನಿವೃತ್ತಿಗೊಂಡ ನಂತರ ನೆನಪಿಸಿಕೊಳ್ಳುವ ದಿನ ಇದಾಗಿದೆ. ಪೊಲೀಸರು ವೃತ್ತಿಯಿಂದ ನಿವೃತ್ತರಾಗಬೇಕು ವಿನಃ ಕರ್ತವ್ಯ ಪ್ರಜ್ಞೆಯಿಂದಲ್ಲ. ತುರ್ತು ಸಂದರ್ಭದಲ್ಲಿಯೂ ನಿವೃತ್ತರಾದವು ಕರ್ತವ್ಯಕ್ಕೆ ಸಿದ್ದರಾಗಿರಬೇಕು ಎಂದ ಅವರು ತಮ್ಮ 40 ವರ್ಷಗಳ ಸುದೀರ್ಘ ವೃತ್ತಿ ಜೀವನದಲ್ಲಿ ನಿರ್ವಹಿಸಿದ ಕಾರ್ಯವನ್ನು ಬಗ್ಗೆ ತಿಳಿಸಿದರು. ತಮ್ಮ ಸೇವೆಯನ್ನು ಗುರುತಿಸಿ ಕಾರ್ಯಕ್ರಮಕ್ಕೆ ಆಹ್ವಾನಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಇದೇ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ ಮಾತನಾಡಿ ಪ್ರಾಣದ ಹಂಗು ತೊರೆದು ಸಾರ್ವಜನಿಕರ ಸೇವೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿಗಳ ರಕ್ಷಣೆಗೆ ಇಲಾಖೆ ಬದ್ದವಾಗಿದೆ. ಈ ವಿಶೇಷ ದಿನದಂದು ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಅಧಿಕಾರಿ ಹಾಗೂ ಸಿಬ್ಬಂದಿಯವರನ್ನು ನೆನಪಿಸಿ ಅವರ ಸೇವೆಯನ್ನು ಸ್ವರಿಸುವುದಾಗಿದೆ. ಕಳೆದ ಸಾಲಿನಲ್ಲಿ ನಿವೃತ್ತ ಪೊಲೀಸ್ ಕಲ್ಯಾಣ ನಿಧಿಯಿಂದ ವೈದ್ಯಕೀಯ ವೆಚ್ಚಕ್ಕಾಗಿ 6,76,988 ರೂ.ಗಳ ಸಹಾಯಧನ ಹಾಗೂ 19 ಜನ ನಿವೃತ್ತ ಪೊಲೀಸರಿಗೆ ಚಿಕಿತ್ಸೆ ಒದಗಿಸಲಾಗಿದೆ ಎಂದರು.

ಆರೋಗ್ಯ ಭಾಗ್ಯ ಯೋಜನೆಯಡಿ ಪೊಲೀಸ್ ಸಿಬ್ಬಂದಿ ಹಾಗೂ ಅವರ ಅವಲಂಬಿತ ಕುಟುಂಬ ಒಟ್ಟು 280 ಸದಸ್ಯರಿಗೆ ವೈದ್ಯಕೀಯ ಚಿಕಿತ್ಸೆ, 3.09 ಲಕ್ಷ ರೂ.ಗಳ ಶೈಕ್ಷಣಿಕ ಸಹಾಯಧನ, 11.50 ಸಾವಿರ ರೂ.ಗಳ ಸಹಾಯಧನ ನೀಡಲಾಗಿದೆ. ಕರ್ತವ್ಯದಲ್ಲಿದ್ದಾಗ ಮರಣ ಹೊಂದಿದ 6 ಜನರ ಅಂತ್ಯ ಸಂಸ್ಕಾರಕ್ಕೆ 60 ಸಾವಿರ ರೂ.ಗಳನ್ನು ನೀಡಲಾಗಿದೆ. ಮುಧೋಳದಲ್ಲಿ ಆಧುನಿಕ ಸುಸಜ್ಜಿತ ಪೊಲೀಸ್ ಸಮುದಾಯ ಭವನ ಸೇರಿದಂತೆ ಅನೇಕ ಕಲ್ಯಾಣ ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಪೊಲೀಸ್ ಸಿಬ್ಬಂದಿಗಳಿಗೆ ಪ್ರಶಂಸನಾ ಪತ್ರ ವಿತರಿಸಲಾಯಿತು. ಕಳೆದ ವರ್ಷದಲ್ಲಿ ನಿವೃತ್ತಿ ಹೊಂದಿರುವ 14 ಜನ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಸನ್ಮಾನಿಸಲಾಯಿತು. ಪ್ರಾರಂಭದಲ್ಲಿ ವಿವಿಧ ತಂಡಗಳಿಂದ ಪಥ ಸಂಚಲನ ನಡೆಯಿತು. ಕಾರ್ಯಕ್ರಮದಲ್ಲಿ ಡಿಎಸ್‍ಪಿಗಳಾದ ಪಾಂಡುರಂಗಯ್ಯ, ಭರತ ತಳವಾರ, ಪ್ರಭುಗೌಡರ ಸೇರಿದಂತೆ ಇತರರು ಉಪಸ್ಥಿತರಿದ್ದರು.

Nimma Suddi
";