ಹುಬ್ಬಳ್ಳಿ: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಆದ ಬಾಂಬ್ ಸ್ಫೋಟ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದರು.
ನಿನ್ನೆ ನಡೆದ ಘಟನೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ. ರಾಜ್ಯದಲ್ಲಿ ಇಸ್ಲಾಮಿಕ್ ಮೂಲಭೂತವಾದ ನಡೆಯುತ್ತಿದೆ. ಎಸ್ಡಿಪಿ ಮತ್ತು ಪಿಎಫ್ಐ ಮೇಲಿನ ಕೇಸ್ ವಾಪಸ್ಸು ಪಡೆದು ಕಾಂಗ್ರೆಸ್ ಸರ್ಕಾರ ಅವರ ಪರವಾಗಿ ಇದೆ ಅಂತ ತೋರಿಸಿದ್ದರು ಎಂದು ಪ್ರಹ್ಲಾದ್ ಜೋಶಿ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದವರ ಮೇಲೆ ಯಾವುದೇ ಕ್ರಮ ಇಲ್ಲ. ರಾಜ್ಯದ ಸಾಮಾನ್ಯ ಜನರ ಬದುಕು ಅಸುರಕ್ಷಿತವಾಗಿದೆ. ಕಟರ್ ಇಸ್ಲಾಮಿಕ್ ಮೂಲಭೂತವಾದಿಗಳಿಗೆ ರಾಜ್ಯ ಸರ್ಕಾರ ಸಹಕಾರ ನೀಡುತ್ತಿದೆ. ಇದಕ್ಕೆ ನೇರವಾಗಿ ಸಿಎಂ ಸಿದ್ದರಾಮಯ್ಯ ಅವರೇ ಕಾರಣ. ಎಲ್ಲಾ ಗಾಯಳುಗಳ ಆರೋಗ್ಯ ಬೇಗ ಸುಧಾರಿಸಲಿ. ಉಗ್ರರಿಗೆ ಕರ್ನಾಟಕ ಸ್ವರ್ಗವಾಗಿದೆ ಎಂದರು.