ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೊ ಪ್ರಕರಣ ಜಗತ್ತಿನ ಅತಿದೊಡ್ಡ ಲೈಂಗಿಕ ಹಗರಣ ಆಗಿದೆ. ಹೆಣ್ಣು ಮಕ್ಕಳು ದಾರಿ ತಪ್ಪಿದ್ದಾರೆ ಎಂದು ಹೇಳಿದ್ದ ಕುಮಾರಸ್ವಾಮಿ, ಈಗ ಯಾರು ತಪ್ಪಿದ್ದಾರೆ ಎಂಬುದನ್ನು ಹೇಳಲಿ ಎಂದು ಸಚಿವ ಕೃಷ್ಣ ಬೈರೇಗೌಡ ಪ್ರಶ್ನೆ ಮಾಡಿದ್ದಾರೆ.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ” ಹಲವು ಮಹಿಳೆಯರ ಮೇಲೆ ಪ್ರಜ್ವಲ್ ಅತ್ಯಾಚ್ಯಾರ ಎಸಗಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಈ ಬಗ್ಗೆ ದೇವೇಗೌಡರ ಕುಟುಂಬದವರು ಉತ್ತರ ಕೊಡಬೇಕು. ಎಸ್‌ಐಟಿ ತನಿಖೆಯಿಂದ ಸತ್ಯಾಂಶ ಹೊರಗೆ ಬಂದು, ತಪ್ಪು ಮಾಡಿದವರಿಗೆ ಶಿಕ್ಷೆ ಆಗಬೇಕು,” ಎಂದರು.
ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಆರೋಪ ಪ್ರಕರಣದಲ್ಲಿಕಾನೂನು ಹೋರಾಟಕ್ಕೆ ಸಿದ್ಧವಾಗಿದ್ದು, ಪ್ರಜ್ವಲ್ ಎಲ್ಲೇ ಇದ್ದರೂ ಎಸ್‌ಐಟಿ ಅಧಿಕಾರಿಗಳು ಕರೆದಾಗ ವಿಚಾರಣೆಗೆ ಬರುತ್ತಾನೆ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಹೇಳಿದರು.
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರನ್ನು ನಗರದಲ್ಲಿಸೋಮವಾರ ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ಪ್ರಜ್ವಲ್‌ಗೆ ತನ್ನ ವಿರುದ್ಧ ಎಫ್‌ಐಆರ್ ದಾಖಲಾಗುವ ವಿಚಾರ ತಿಳಿದಿರಲಿಲ್ಲ. ಹಾಗಾಗಿ ಹೊರಗೆ ಹೋಗಿದ್ದಾನೆ. ಎಲ್ಲೇ ಇದ್ದರೂ ವಿಚಾರಣೆಗೆ ಕರೆದಾಗ ಬರುತ್ತಾನೆ,” ಎಂದರು.
”ವಿಶ್ವಗುರು ಎಂದು ಹೇಳಿಕೊಳ್ಳುವ ಪ್ರಧಾನಿ ಮೋದಿ ಅವರು ಪ್ರಜ್ವಲ್ ರೇವಣ್ಣ ಯಾವ ದೇಶದಲ್ಲಿದ್ದರೂ ಪತ್ತೆ ಮಾಡಲಿ. ಸಿಬಿಐ, ಇಡಿ, ಐಟಿ ಇವೆಲ್ಲಾಇರುವುದು ಮಾಂಗಲ್ಯ ಕಿತ್ತವರನ್ನು ರಕ್ಷಣೆ ಮಾಡಲು ಅಲ್ಲ. ಈ ಬಗ್ಗೆ ಈವರೆಗೆ ತುಟಿಬಿಚ್ಚದ ಬಿಜೆಪಿ ನಾಯಕರಿಗೆ ನಾಚಿಕೆಯಾಗಬೇಕು” ಎಂದು ಕಿಡಿಕಾರಿದರು.