ಬಾಗಲಕೋಟೆ
ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ *ಶ್ರೀಮತಿ ಸಂಯುಕ್ತ ಪಾಟೀಲ್* ಅವರು ಇದೇ ದಿನಾಂಕ *19/04/2024* ರಂದು ನಾಮಪತ್ರ ಸಲ್ಲಿಸಲಿದ್ದಾರೆ.
ಈ ಹಿನ್ನೆಯಲ್ಲಿ ಮತಕ್ಷೇತ್ರದ ಅಮೀನಗಡ ಪಟ್ಟಣದಲ್ಲಿ ಪೂರ್ವಭಾವಿ ಸಭೆ ನಡೆಯಿತು.
ಅಮಿನಗಡದಲ್ಲಿ ಎಲ್ಲಾ ವಾರ್ಡಿನ ಪಟ್ಟಣ ಪಂಚಾಯತ್ ಹಾಲಿ ಮತ್ತು ಮಾಜಿ ಸದಸ್ಯರು, ಕಾಂಗ್ರೆಸ್ ಪಕ್ಷದ ಸದಸ್ಯರು, ಪಿಕೆಪಿಎಸ್ ನಿರ್ದೇಶಕರು,* * ಮಹಿಳಾ ಕಾಂಗ್ರೆಸ್, ಯುವ ಕಾಂಗ್ರೆಸ್, ವಿಧ್ಯಾರ್ಥಿ ಕಾಂಗ್ರೆಸ್, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗ ಸೇರಿದಂತೆ ಎಲ್ಲಾ ಮುಂಚೂಣಿಯ ಘಟಕಗಳ ಅಧ್ಯಕ್ಷರು ಮತ್ತು ಸರ್ವ ಸದಸ್ಯರು, *ಬೂತ್ ಮಟ್ಟದ ಅಧ್ಯಕ್ಷರು* ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಪಕ್ಷದ ಅಭಿಮಾನಿಗಳು ಸಮ್ಮುಖದಲ್ಲಿ ಪೂರ್ವಭಾವಿ ಸಭೆಯನ್ನು ಮಾಡಲಾಯಿತು.
ನಾಮಪತ್ರ ಸಲ್ಲಿಕೆ ದಿನದಂದು ಪಟ್ಟಣದ ಕಾಂಗ್ರೆಸ್ ಕಾರ್ಯಕರ್ತರು ಅಭಿಮಾನಿಗಳು ಭಾಗವಹಿಸಲು ಸೂಚಿಸಲಾಯಿತು.