This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

Education NewsState News

ಕೋವಿಡ್ 3ನೇ ಅಲೆ ನಿಯಂತ್ರಕ್ಕೆ ಸಜ್ಜಾಗಿ : ಕಳಸದ

ನಿಮ್ಮ ಸುದ್ದಿ ಬಾಗಲಕೋಟೆ

ಮುಂದಿನ ಮೂರು ತಿಂಗಳಲ್ಲಿ ಕೋವಿಡ್ 3ನೇ ಅಲೆ ಪ್ರಾರಂಭವಾಗುವ ಸಾಧ್ಯತೆ ಇದ್ದು, ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಶಿವಯೋಗಿ ಕಳಸದ ಹೇಳಿದರು.

ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಕೋವಿಡ್ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಕುರಿತು ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು 3ನೇ ಅಲೆಯಲ್ಲಿ ಹೆಚ್ಚಾಗಿ ಮಕ್ಕಳಲ್ಲಿ ಕಂಡು ಬರುವ ಸಾದ್ಯತೆ ಇದೆ. ಚಿಕಿತ್ಸೆಗೆ ಬೇಕಾದ ಮೆಡಿಷಿನ್, ವೆಂಟಿಲೇಟರ್, ಐ.ಸಿ.ಓಗಳ ಸಿದ್ದತೆಗೆ ಕ್ರಮಕೈಗೊಳ್ಳಲು ಸೂಚಿಸಿದರು.

ಮೊದಲ ಅಲೆಗೆ ಹೋಲಿಸಿದರೆ ಎರಡನೇ ಅಲೆಯಲ್ಲಿ ಕೋವಿಡ್ ರೂಪಾಂತgವು ಮಕ್ಕಳ ಮೇಲೆ ಪರಿಣಾಮ ಭೀರಿರುವುದನ್ನು ನೋಡುತ್ತಿದ್ದೇವೆ. ಮುನ್ನಚ್ಚರಿಕೆ ಕ್ರಮಗಳ ಬಗ್ಗೆ ಪಾಲಕರಲ್ಲಿ ಜಾಗೃತಿ ಮೂಡಿಸಲು ಮುಂದಾಗಬೇಕು ಎಂದು ತಿಳಿಸಿದರು.

ಗ್ರಾಮಗಳಲ್ಲಿಯೂ ಸಹ ಕೋವಿಡ್ ಸೋಂಕು ಹರಡುತ್ತಿದ್ದು, ಹೆಚ್ಚಿನ ನಿಗಾವಹಿಸಿ ಮನೆ ಮನೆ ಸರ್ವೆ ಕಾರ್ಯ ಚುರುಕುಗೊಳಿಸಬೇಕು. ಕೋವಿಡ್ ಲಕ್ಷಣಗಳು ಕಂಡುಬಂದವರಿಗೆ ತಪಾಸಣೆ ಮಾಡಿ ಸೂಕ್ತ ಚಿಕಿತ್ಸೆಗೆ ಕೊಡಿಸುವ ಕೆಲಸವಾಗಬೇಕು. ಕೋವಿಡ್ ಬಗ್ಗೆ ಗ್ರಾಮದ ಜನರಲ್ಲಿ ಜಾಗೃತಿ ಮೂಡಿಸಿ ಅವರಲ್ಲಿ ಮನೋಸ್ಥೈರ್ಯವನ್ನು ತುಂಬಿಸಿ ಲಾಕ್‍ಡೌನ್ ಅವಧಿಯಲ್ಲಿ ಮನೆಯಿಂದ ಹೊರಬರದಂತೆ ಜಾಗೃತಗೊಳಿಸುವ ಕಾರ್ಯವಾಗಬೇಕು. ಅಂದಾಗ ಮಾತ್ರ ಕೋವಿಡ್ ನಿಯಂತ್ರಣ ಸಾಧ್ಯವಾಗುತ್ತದೆ. ಜಿಲ್ಲೆಯಲ್ಲಿ ಕೋವಿಡ್ ಪ್ರಕರಣ ದೃಡಪಟ್ಟ ಗ್ರಾಮಗಳು ಹಾಗೂ ಕೋವಿಡ್ ಮುಕ್ತವಾದ ಗ್ರಾಮಗಳ ಮಾಹಿತಿ ನೀಡಲು ತಿಳಿಸಿದರು.

ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಮಾತನಾಡಿ ಜಿಲ್ಲೆಯಲ್ಲಿ ದಾಖಲಾಗಿರುವ ಕೋವಿಡ್ ಸೋಂಕಿತರಿಗೆ ಪ್ರತಿದಿನ 18 ರಿಂದ 19 ಕೆಎಲ್ ಆಕ್ಸಿಜನ್ ಅವಶ್ಯವಿದ್ದು, 17 ರಿಂದ 18 ಕೆ.ಎಲ್ ಆಕ್ಸಿಜನ್ ಸದ್ಯ ಸಿಗಿಕೇರಿ ಕ್ರಾಸ್‍ನಲ್ಲಿರುವ ಎಚ್.ಎಸ್.ಕಂಠಿ ಇಂಡಸ್ಟ್ರೀಜ್ ಪ್ರಾವೈಟ್ ಲಿಮಿಟೆಡ್‍ನಿಂದ ಪೂರೈಕೆಯಾಗುತ್ತಿದೆ. ಆಕ್ಸಿಜನ್ ಕೊರತೆಯಾಗದಂತೆ ಆಕ್ಸಿಜನ್ ಸಿಲಿಂಡರ್‍ಗಳನ್ನು ಬಳಸಾಗುತ್ತಿದೆ. ಅಲ್ಲದೇ ಪ್ರತಿದಿನ 150 ರಿಂದ 200 ವರೆಗೆ ರೆಮಿಡಿಸಿವರ್ ಚುಚ್ಚುಮದ್ದು ಅವಶ್ಯಕತೆಯಿದ್ದು, ಇಲ್ಲಿವರೆಗೆ 7128 ರೆಮಿಡಿಸಿವರ್ ಚುಚುಮದ್ದು ಸ್ವೀಕೃತವಾಗಿದ್ದು, ಆಯವುದೇ ರೀತಿಯ ತೊಂದರೆ ಇರುವದಿಲ್ಲ ಎಂದು ತಿಳಿಸಿದರು.

ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ 6 ಸರಕಾರಿ ಹಾಗೂ 33 ಖಾಸಗಿ ಆಸ್ಪತ್ರೆಗಳಲ್ಲಿನ ಲಭ್ಯವಿರುವ ಬೆಡ್‍ಗಳ ಮಾಹಿತಿಯನ್ನು ಎನ್‍ಐಸಿ ಪೋರ್ಟಲ್‍ನಲ್ಲಿ ಪ್ರತಿದಿನ ಮಾಹಿತಿ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ 1859 ವಿವಿಧ ಬೆಡ್‍ಗಳ ಪೈಕಿ 1442 ಬೆಡ್ ಬಳಕೆಯಾಗುತ್ತಿದ್ದು, ಇನ್ನು 417 ಬೆಡ್‍ಗಳು ಚಿಕಿತ್ಸೆಗೆ ಲಭ್ಯವಿರುತ್ತವೆ. ವಿವಿಧ ಬೆಡ್‍ಗಳ ಲಭ್ಯತೆಗಾಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ದಿನ 24 ಗಂಟೆಗಳ ಕಾಲ ಕೋವಿಡ್ ವಾರ್‍ರೂಮ್ ಸಹಾಯವಾಣಿ ತೆರೆಯಲಾಗಿದೆ. ಜಿಲ್ಲೆಯ ಎಲ್ಲ ತಾಲೂಕು ಸೇರಿ ಒಟ್ಟು 10 ಸಿಸಿಸಿ ಕೇಂದ್ರಗಳನ್ನು ತೆರೆಯಲಾಗಿದ್ದು, 853 ಬೆಡ್‍ಗಳ ಪೈಕಿ 534 ಬೆಡ್‍ಗಳು ಖಾಲಿ ಇರುವುದಾಗಿ ತಿಳಿಸಿದರು.

ಜಿ.ಪಂ ಸಿಇಓ ಟಿ.ಭೂಬಾಲನ ಮಾತನಾಡಿ ಕಪ್ರ್ಯೂ ಮತ್ತು ಲಾಕ್‍ಡೌನ್ ಅವಧಿಯಲ್ಲಿ 6129 ಜನ ವಲಸಿಗರು ಜಿಲ್ಲೆಗೆ ಆಗಮಿಸಿದ್ದು, ಅವರೆಲ್ಲರ ಆರೋಗ್ಯ ತಪಾಸಣೆ ಮಾಡಲಾಗಿದೆ. ಅದರಲ್ಲಿ 619 ಜನರಿಗೆ ಸೋಂಕು ತಗುಲಿರುವುದ ಕಂಡುಬಂದಿದೆ. ಅವರನ್ನು ಹೋಮ್ ಐಸೋಲೇಷನ್‍ದಲ್ಲಿ ಇಟ್ಟು ನಿಗಾ ವಹಿಸಲಾಗುತ್ತಿದೆ. ಪ್ರತಿಯೊಂದು ಗ್ರಾಮಗಳಲ್ಲಿ ವೈದ್ಯರ ಜೊತೆ ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಗ್ರಾ.ಪಂ ಸಿಬ್ಬಂದಿಗಳನ್ನೊಳಗೊಂಡ ತಂಡ ರಚಿಸಿ ಮನೆ ಮನೆ ಕೋವಿಡ್ ಸರ್ವೆ ಕಾರ್ಯ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಉಪವಿಭಾಗಾಧಿಕಾರಿ ಎಂ.ಗಂಗಪ್ಪ, ತಹಶೀಲ್ದಾರ ಗುರುಸಿದ್ದಯ್ಯ ಹಿರೇಮಠ ಸೇರಿದಂತೆ ಕೋವಿಡ್ ಕರ್ತವ್ಯಕ್ಕೆ ನೇಮಿಸಲಾದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

*628 ಜನ ಗುಣಮುಖ, 285 ಹೊಸ ಪ್ರಕರಣ ದೃಡ*
————————————

ಜಿಲ್ಲೆಯಲ್ಲಿ ಕೋವಿಡ್‍ನಿಂದ 628 ಜನ ಗುಣಮುಖರಾಗಿದ್ದು, ವಿವಿಧ ಆಸ್ಪತ್ರೆಗಳಿಂದ ಬಿಡುಗಡೆ ಮಾಡಲಾಗಿದೆ. ಹೊಸದಾಗಿ 285 ಕೊರೊನಾ ಪ್ರಕರಣಗಳು ಹಾಗೂ 5 ಮೃತ ಪ್ರಕರಣಗಳು ಶನಿವಾರ ದೃಡಪಟ್ಟಿವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 3988 ಕೋವಿಡ್ ಪ್ರಕರಣಗಳು ದೃಡಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 25849 ಜನ ಕೋವಿಡ್‍ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ಬಾಗಲಕೋಟೆ 62, ಬಾದಾಮಿ 26, ಜಮಖಂಡಿ 59, ಹುನಗುಂದ 54, ಮುಧೋಳ 58, ಬೀಳಗಿ 26 ಜನರಲ್ಲಿ ಸೋಂಕು ದೃಡಪಟ್ಟಿವೆ.

ಕೋವಿಡ್ ಲ್ಯಾಬ್‍ನಲ್ಲಿ ಪರೀಕ್ಷಿಸಲಾಗುತ್ತಿದ್ದ 1962 ಸ್ಯಾಂಪಲ್‍ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 606590 ಸ್ಯಾಂಪಲ್‍ಗಳನ್ನು ಪರೀಕ್ಷೀಸಲಾಗಿದ್ದು, ಈ ಪೈಕಿ 573040 ನೆಗಟಿವ್ ಪ್ರಕರಣ, ಹಾಗೂ 253 ಮೃತ ಪ್ರಕರಣಗಳು ವರದಿಯಾಗಿರುತ್ತದೆ. ಇನ್ನು 4886 ಮಾತ್ರ ಸಕ್ರಿಯ ಪ್ರಕರಣಗಳು ಇವೆ. ಇಲ್ಲಿವರೆಗೆ ಒಟ್ಟು 498 ಸ್ಯಾಂಪಲ್‍ಗಳು ಮಾತ್ರ ರಿಜೆಕ್ಟ ಆಗಿರುತ್ತವೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

";