This is the title of the web page
This is the title of the web page

Live Stream

December 2024
S M T W T F S
1234567
891011121314
15161718192021
22232425262728
293031  

| Latest Version 9.4.1 |

State News

ಹುನಗುಂದದಲ್ಲಿ ಪತ್ರಿಕಾ ದಿನಾಚರಣೆ

ನಿಮ್ಮ ಸುದ್ದಿ ಬಾಗಲಕೋಟೆ

ಜಿಲ್ಲೆಯ ಹುನಗುಂದ ತಾಲೂಕಿನ ಕಾರ್ಯನಿರತ ಪತ್ರಕರ್ತರ ಸಂಘದಿಂದ ಜು.೨೯ರಂದು ಪತ್ರಿಕಾ ದಿನಾಚರಣೆ, ಸನ್ಮಾನ ಹಾಗೂ ನೂತನ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರ ಸಮಾರಂಭ ಜರುಗಲಿದೆ.

ಪಟ್ಟಣದ ಸರಕಾರಿ ಪದವಿ ಹಾಗೂ ಪದವಿ ಪೂರ್ವ ಕಾಲೇಜ್‌ನಲ್ಲಿ ಬೆಳಗ್ಗೆ ೧೦ಕ್ಕೆ ನಡೆಯುವ ಕಾರ್ಯಕ್ರಮವನ್ನು ಹುನಗುಂದ ಶಾಸಕ ದೊಡ್ಡನಗೌಡ ಪಾಟೀಲ, ಬಾಗಲಕೋಟೆ ಶಾಸಕ ವೀರಣ್ಣ ಚರಂತಿಮಠ, ತಾಲೂಕು ಕಾನಿಪ ನಿಕಟಪೂರ್ವ ಅಧ್ಯಕ್ಷ ಅಶೋಕ ಹಂದ್ರಾಳ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಆಗಮಿಸಲಿದ್ದಾರೆ.

ಅತಿಥಿಗಳಾಗಿ ಹುನಗುಂದ ಪುರಸಭೆ ಅಧ್ಯಕ್ಷ ಶರಣು ಬೆಲ್ಲದ, ಅಮೀನಗಡ ಪಪಂ ಅಧ್ಯಕ್ಷ ಸಂಗಪ್ಪ ತಳವಾರ, ಕಾನಿಪ ಜಿಲ್ಲಾಧ್ಯಕ್ಷ ಸುಭಾಷ ಹೊದ್ಲೂರ, ಕಾನಿಪ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ, ಹಿರಿಯ ಪತ್ರಕರ್ತ ಈಶ್ವರ ಶೆಟ್ಟರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಎನ್.ಶಾಲಗಾರ, ಉಪಾಧ್ಯಕ್ಷ ಮೆಹಬೂಬ ಸರಕಾವಸ್ ಆಗಮಿಸಲಿದ್ದು, ಬಾಗಲಕೋಟೆಯ ಸಾಹಿತಿ ಆರ್.ನಾಗರಾಜ ಉಪನ್ಯಾಸ ನೀಡಲಿದ್ದಾರೆ.

ವಿಶೇಷ ಆಹ್ವಾನಿತರಾಗಿ ಹುನಗುಂದ ತಹಸೀಲ್ದಾರ್ ಬಸಲಿಂಗಪ್ಪ ನಾಯ್ಕೋಡಿ, ತಾಪಂ ಇಒ ಸಿ.ಬಿ.ಮ್ಯಾಗೇರಿ, ಪಿಎಸ್‌ಐ ಶರಣಬಸಪ್ಪ ಸಂಗಳದ, ಪುರಸಭೆ ಮುಖ್ಯಾಧಿಕಾರಿ ಅಶೋಕ ಪಾಟೀಲ ಆಗಮಿಸಲಿದ್ದು, ಪತ್ರಕರ್ತರ ಸಂಘದಿAದ ನೀಡುವ ವರ್ಷದ ಸನ್ಮಾನಕ್ಕೆ ಉಪನ್ಯಾಸಕ ಡಾ.ನಾಗರಾಜ ನಾಡಗೌಡರ, ಪತ್ರಕರ್ತ ರವಿ ಕೆಲೂರ (ದೇಶಪಾಂಡೆ), ಪತ್ರಿಕಾ ವಿತರಕ ಮುತ್ತು ಮೇಳಿ ಭಾಜನರಾಗಿದ್ದಾರೆ.

ಇದೇ ಸಂದರ್ಭದಲ್ಲಿ ತಾಲೂಕು ಕಾನಿಪ ಸಂಘಕ್ಕೆ ೨೦೨೧-೨೨ನೇ ಸಾಲಿಗೆ ನೂತನ ಅಧ್ಯಕ್ಷರಾಗಿ ಆಯ್ಕೆ ಆದ ಮಲ್ಲಿಕಾರ್ಜುನ ಬಂಡರಗಲ್, ಪ್ರಧಾನ ಕಾರ್ಯದರ್ಶಿ ಚಂದ್ರು ಗಂಗೂರ ಹಾಗೂ ಇತರೆ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರ ಕಾರ್ಯಕ್ರಮ ಜರುಗಲಿದೆ ಎಂದು ಕಾನಿಪ ತಾಲೂಕು ಘಟಕ ಪ್ರಕಟಣೆಯಲ್ಲಿ ತಿಳಿಸಿದೆ.

 

Nimma Suddi
";