ಪ್ರಧಾನಿ ನರೇಂದ್ರ ಮೋದಿ 2024ರ ಲೋಕಸಭಾ ಚುನಾವಣೆಗೆ ಉತ್ತರ ಪ್ರದೇಶದ ವಾರಾಣಸಿಯಿಂದ ನಾಮಪತ್ರ ಸಲ್ಲಿಸಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.
ಇಂದು ಬೆಳಗ್ಗೆ ಕಾಲಭೈರವನ ದರ್ಶನ ಪಡೆದು ಬಳಿಕ ನಾಮಪತ್ರ ಸಲ್ಲಿಕೆ ಮಾಡಿದ್ದು, 2014 ಮತ್ತು 2019ರಲ್ಲಿ ಪ್ರಧಾನಿ ಮೋದಿ ಇಲ್ಲಿಂದ ಗೆದ್ದಿದ್ದಾರೆ. ಇದಕ್ಕೂ ಮುನ್ನ ಮೇ 13ರಂದು ಆ ಪ್ರದೇಶದಲ್ಲಿ ರೋಡ್ ಶೋ ನಡೆಸಿದ್ದರು.
ನಟಿ-ರಾಜಕಾರಣಿ ಕಂಗನಾ ರಣಾವತ್ ಕೂಡ ಉತ್ತರಾಖಂಡದ ಮಂಡಿಯಿಂದ ನಾಮಪತ್ರ ಸಲ್ಲಿಸಲಿದ್ದಾರೆ. ಇದು ಅವರ ಮೊದಲ ರಾಜಕೀಯ ಇನ್ನಿಂಗ್ಸ್ ಎಂದೇ ಹೇಳಬಹುದು.
ನಾಮಪತ್ರ ಸಲ್ಲಿಸುವ ಮುನ್ನ ಪ್ರಧಾನಿ ಮೋದಿ ಸೋಮವಾರ ಸುಮಾರು 4 ಗಂಟೆಗಳ ರೋಡ್ ಶೋ ನಡೆಸಿದರು. ಶ್ರೀ ಕಾಶಿ ವಿಶ್ವನಾಥ ದೇವಸ್ಥಾನ ತಲುಪಿ ಪ್ರಾರ್ಥನೆ ಸಲ್ಲಿಸಿದರು.
2014ರ ಲೋಕಸಭೆ ಚುನಾವಣೆಯಲ್ಲಿ ಗುಜರಾತ್ ಮುಖ್ಯಮಂತ್ರಿಯಾಗಿ ಮೊಟ್ಟಮೊದಲ ಬಾರಿಗೆ ನರೇಂದ್ರ ಮೋದಿ ನಾಮಪತ್ರ ಸಲ್ಲಿಸಲು ಬಂದಿದ್ದರು. ಬಿಜೆಪಿ ಭಾರಿ ಬಹುಮತ ಪಡೆದ ನಂತರ ದೇಶದ ಪ್ರಧಾನಿಯಾದರು.
2019ರಲ್ಲಿಯೂ ಪ್ರಧಾನಿ ನರೇಂದ್ರ ಮೋದಿ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ತಮ್ಮ ಉಮೇದುವಾರಿಕೆಯನ್ನು ಮಂಡಿಸಿ ಗೆಲುವು ದಾಖಲಿಸುವಲ್ಲಿ ಯಶಸ್ವಿಯಾದರು.