ಅಸ್ಸಾಂ: ಪ್ರಧಾನಿ ನರೇಂದ್ರ ಮೋದಿ ಇಂದು ಗುವಾಹಟಿಯಲ್ಲಿ ರೋಡ್ ಶೋ ನಡೆಸಿದ್ದು, 11,600 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.
ಗುವಾಹಟಿಯ ಖಾನಪಾರದಲ್ಲಿರುವ ಪಶುವೈದ್ಯಕೀಯ ಕಾಲೇಜು ಮೈದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸಲು ಬಿಜೆಪಿ ಕಾರ್ಯಕರ್ತರು ಒಂದು ಲಕ್ಷ ಮಣ್ಣಿನ ದೀಪಗಳನ್ನು ಬೆಳಗಿಸಿದ್ದು, ಪ್ರಧಾನಿ ಶನಿವಾರ ಸಂಜೆ 6.30 ರ ಸುಮಾರಿಗೆ ಒಡಿಶಾದಿಂದ ಗುವಾಹಟಿಯ ಪ್ರಸಿದ್ಧ ಗೋಪಿನಾಥ್ ಬೊರ್ಡೊಲೋಯ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ತಲುಪಿದರು.
ಇಲ್ಲಿ ರಾಜ್ಯಪಾಲ ಗುಲಾಬ್ ಚಂದ್ ಕಟಾರಿಯಾ, ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ರಾಜ್ಯ ಸಚಿವರು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಮೋದಿ ಅವರನ್ನು ಸ್ವಾಗತಿಸಿದ್ದು, ಕೊಯಿನಾಧೋರಾ ರಾಜ್ಯ ಅತಿಥಿ ಗೃಹಕ್ಕೆ ತೆರಳಿ, ಅಲ್ಲಿ ಬಿಜೆಪಿ ರಾಜ್ಯ ಕೋರ್ ಕಮಿಟಿಯನ್ನು ಭೇಟಿಯಾದ ಮೋದಿ ಪಕ್ಷದ ವಿಷಯಗಳ ಬಗ್ಗೆ ಚರ್ಚಿಸಿದರು.11 ಸಾವಿರ ಕೋಟಿ ರೂ. ಯೋಜನೆಗಳ ಉದ್ಘಾಟನೆ ಬಳಿಕ ಮಾತನಾಡಿದ ಪ್ರಧಾನಿ ಮೋದಿ, ಅಸ್ಸಾಂ ಹಾಗೂ ಈಶಾನ್ಯ ದಕ್ಷಿಣ ಏಷ್ಯಾದ ಇತರೆ ದೇಶಗಳೊಂದಿಗೆ ಸಂಪರ್ಕವನ್ನು ಬಲಪಡಿಸುತ್ತದೆ ಎಂದು ಹೇಳಿದರು.