This is the title of the web page
This is the title of the web page

Live Stream

December 2024
S M T W T F S
1234567
891011121314
15161718192021
22232425262728
293031  

| Latest Version 9.4.1 |

Politics NewsState News

ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ ಜನತೆಗೆ ಅನ್ಯಾಯ ಮಾಡಿದ್ದಾರೆ: ಪ್ರಿಯಾಂಕಾ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ ಜನತೆಗೆ ಅನ್ಯಾಯ ಮಾಡಿದ್ದಾರೆ: ಪ್ರಿಯಾಂಕಾ ಗಾಂಧಿ

ಚಿತ್ರದುರ್ಗ: ದೇಶದ ಸಮಗ್ರ ಅಭಿವೃದ್ಧಿಗಾಗಿ ಹಗಲು, ರಾತ್ರಿ ದುಡಿಯುತ್ತೇನೆ ಎಂದು ಹೇಳಿಕೊಳ್ಳುವ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ ಜನತೆಗೆ ಅನ್ಯಾಯ ಮಾಡಿದ್ದಾರೆ. ರಾಜ್ಯದ ಜನರು ಕಟ್ಟುವ ತೆರಿಗೆ ಹಣವನ್ನು ಮರಳಿ ನೀಡದೆ ರಾಜ್ಯಕ್ಕೆ ನಷ್ಟ ಮಾಡಿದ್ದಾರೆ. ಮೋದಿ ಅವರಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯವಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಟೀಕಾಪ್ರಹಾರ ನಡೆಸಿದರು.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಂಗಳವಾರ ಚಿತ್ರದುರ್ಗದಲ್ಲಿ ಆಯೋಜಿಸಲಾದ ಪ್ರಚಾರ ಸಭೆಯಲ್ಲಿ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ಪರ ಮತಯಾಚಿಸಿ ಅವರು ಮಾತನಾಡಿದರು. ನಿಯತ್ತು ಹಾಗೂ ಶುದ್ಧ ಹೃದಯದಿಂದ ಮೋದಿ ಕಾರ್ಯ ನಿರ್ವಹಿಸುತ್ತಿಲ್ಲ. ಅವರಿಗೆ ಎಲ್ಲಿ ರಾಜಕೀಯವಾಗಿ ಲಾಭ ಆಗಿದೆಯೋ ಅಲ್ಲಿಗೆ ಅನುದಾನ ಕೊಡುತ್ತಾರೆ ಎಂದು ದೂರಿದರು.

ಯಾರು ಜನಪರವಾಗಿ ಮಾತಾಡುತ್ತಾರೋ ಅವರ ಬಾಯಿ‌ ಮುಚ್ಚಿಸುವ ಕೆಲಸ ನಿರಂತರವಾಗಿ ನಡೆಯುತ್ತಿದ್ದು, ಇಬ್ಬರು ಸಿಎಂಗಳನ್ನು ಬಂಧಿಸಿ ಜೈಲಲ್ಲಿ ಇಡಲಾಗಿದೆ. ವಿಪಕ್ಷ ನಾಯಕರ ಮೇಲೆ ದಾಳಿ‌ ಮಾಡಿಸಿ ಅವರ ಧ್ವನಿ ಅಡಗಿಸುವ ಕೆಲಸ ಮಾಡಲಾಗುತ್ತಿದೆ. ಎಲೆಕ್ಟೋರಲ್ ಬಾಂಡ್ ಮೂಲಕ ಮೋದಿ ಹಣ ಲೂಟಿ ಮಾಡಿದ್ದಾರೆ. ದಾನ ಮಾಡಿದವರ ಹೆಸರನ್ನು ಯಾರಿಗೂ ತಿಳಿಯದಂತೆ ಮುಚ್ಚಿಡಲಾಗಿತ್ತು. ಆದರೆ, ಸುಪ್ರೀಂಕೋರ್ಟ್ ಸೂಚನೆ ಮೇರೆಗೆ ದುಡ್ಡು ಕೊಟ್ಟವರ ಹೆಸರು ಬಹಿರಂಗವಾಗಿದೆ. ಯಾವ ಕಂಪನಿಗಳ ಮೇಲೆ ಕೇಸು ಮಾಡಲಾಗಿತ್ತೋ ಅವೆಲ್ಲ ಕಂಪನಿಗಳು ಚಂದಾ ನೀಡಿವೆ. ಭ್ರಷ್ಟ ಕಂಪನಿಗಳಿಂದ ಹಣ ಪಡೆದು ಪ್ರಕರಣವನ್ನು ಮುಚ್ಚಿ ಹಾಕುವ ಕೆಲಸ ನಡೆದಿದೆ. ವಿಪಕ್ಷ ನಾಯಕರಿಗೆ ಭ್ರಷ್ಟರು ಎಂದು ದೂರುವ ಮೋದಿಯೇ ಖುದ್ದು ತಾವೇ ಭ್ರಷ್ಟರಾಗಿದ್ದಾರೆ ಎಂದು ಪ್ರಿಯಾಂಕಾ ಕಿಡಿಕಾರಿದರು.

ಬರ ಹಿನ್ನೆಲೆಯಲ್ಲಿ ಅನುದಾನ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನೇಕ ಬಾರಿ ಕೇಂದ್ರದ ಮುಂದೆ ಪ್ರಸ್ತಾವ ಸಲ್ಲಿಸಿ ಅನುದಾನ ಕೋರಿದರು. ಈವರೆಗೂ ಒಂದು ಪೈಸೆ ನೀಡಲಿಲ್ಲ. ಭದ್ರಾ ಮೇಲ್ದಂಡೆಗೆ ಬಜೆಟ್ ನಲ್ಲಿ ಹಣ ಕಾಯ್ದಿರಿಸಿದರೂ ಅನುದಾನ ಬಿಡುಗಡೆ ಮಾಡಲಿಲ್ಲ. ಮೋದಿ ದೇಶದ ಕೆಲ ಬಂಡವಾಳಶಾಹಿಗಳಿಗೆ ಅನುಕೂಲಕರ ವಾತಾವರಣ ಸೃಷ್ಟಿಸಿದ್ದಾರೆ. ಬಂಡವಾಳಶಾಹಿಗಳ 16 ಲಕ್ಷ ಕೋಟಿ ರು. ಸಾಲ ಮನ್ನಾ ಮಾಡಿದ್ದಾರೆ. ದೇಶದ ಆಸ್ತಿಗಳನ್ನು ತಮ್ಮ ಸ್ನೇಹಿತರಿಗೆ ಮಾರಾಟ ಮಾಡುತ್ತಿದ್ದಾರೆ. ರೈತರು ಸಾಲದಲ್ಲಿ ಮುಳುಗಿದ್ದರೆ ಅವರತ್ತ ಕಣ್ಣೆತ್ತಿಯೂ ನೋಡುತ್ತಿಲ್ಲ, ಆದರೆ, ಉದ್ಯೋಗಪತಿಗಳ ಸಾಲ‌‌‌ ಮಾತ್ರ ಮನ್ನಾ ಆಗುತ್ತಿದೆ ಎಂದು ಪ್ರಿಯಾಂಕಾ ಆರೋಪಗಳ ಸುರಿಮಳೆಗೈದರು.

Nimma Suddi
";