This is the title of the web page
This is the title of the web page

Live Stream

December 2024
S M T W T F S
1234567
891011121314
15161718192021
22232425262728
293031  

| Latest Version 9.4.1 |

National News

ಭಾರತದ ಆತ್ಮದ ಪ್ರತಿ ಕಣ ಕಣದಲ್ಲೂ ಶ್ರೀರಾಮ ಇದ್ದಾನೆ: ಪ್ರಧಾನಿ ನರೇಂದ್ರ ಮೋದಿ

ಭಾರತದ ಆತ್ಮದ ಪ್ರತಿ ಕಣ ಕಣದಲ್ಲೂ ಶ್ರೀರಾಮ ಇದ್ದಾನೆ: ಪ್ರಧಾನಿ ನರೇಂದ್ರ ಮೋದಿ

ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮ ಲಲ್ಲಾ ಮೂರ್ತಿ ಪ್ರತಿಷ್ಠಾಪನೆ ಸೋಮವಾರ ನೆರವೇರಿತು. ಸುಮಾರು 5 ಶತಕಗಳ ನಂತರ ಅಯೋಧ್ಯೆಯ ರಾಮ ಜನ್ಮಭೂಮಿಯಲ್ಲಿ ರಾಮ ಮಂದಿರ ಲೋಕಾರ್ಪಣೆಯಾಯಿತು.

ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ನೂರಾರು ಗಣ್ಯರು ಸಮಾರಂಭದಲ್ಲಿ ಭಾಗವಹಿಸಿದ್ದು, ದೇಶದಾದ್ಯಂತ ಸಂಭ್ರಮಾಚರಣೆ ನಡೆದಿದೆ. .ಭಾರತದ ಆತ್ಮದ ಪ್ರತಿ ಕಣ ಕಣದಲ್ಲೂ ಶ್ರೀರಾಮ ಇದ್ದಾನೆ. ಪ್ರತಿ ಯುಗದ ಜನರು ರಾಮನನ್ನು ಗೆಲ್ಲಿಸಿದ್ದಾರೆ.

ರಾಮರಸ ನಮ್ಮ ಜೀವನದ ರೀತಿ, ಅದು ನಿರಂತರವಾದದ್ದು. ರಾಮಮಂದಿರ ನಿರ್ಮಾಣ ಕೇವಲ ವಿಜಯ ಅಲ್ಲ, ವಿನಯದಿಂದ ಕೂಡಿದೆ. ಶ್ರೀರಾಮ ಬೆಂಕಿಯಲ್ಲ, ಶ್ರೀರಾಮ ಶಕ್ತಿ. ಶ್ರೀರಾಮ ವಿವಾದ ಅಲ್ಲ, ರಾಮ ಸಮಾಧಾನ. ಶ್ರೀರಾಮ ವರ್ತಮಾನ ಅಲ್ಲ, ಅನಂತಕಾಲ. ಅಯೋಧ್ಯೆಯಲ್ಲಿ ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಶ್ರೀರಾಮ ಪ್ರತಿಷ್ಠಾಪನೆಯಾಗಿದೆ.

ಇಂದು ಇಡೀ ದೇಶ ಇಂದು ರಾಮ ದೀಪಾವಳಿ ಆಚರಿಸುತ್ತಿದೆ. ದೇಶದ ಪ್ರತಿ ಮನೆಯಲ್ಲೂ ಇಂದು ಸಂಜೆ ಶ್ರೀರಾಮನ ಜ್ಯೋತಿ ಬೆಳಗಲಿದೆ. ಕಾಲಚಕ್ರ ಮತ್ತೆ ಬದಲಾವಣೆಯಾಗಿದೆ. ನನ್ನ 11 ದಿನಗಳ ಉಪವಾಸ ವ್ರತ ಶ್ರೀರಾಮನ ಮಂದಿರದಲ್ಲಿ ಅಂತ್ಯಗೊಳಿಸಿದ್ದೇನೆ. ಸಮುದ್ರದಿಂದ ಸರಯೂವರೆಗೆ ಯಾತ್ರೆಯ ಅವಕಾಶ ಸಿಕ್ಕಿದೆ. ಭಾರತದ ಆತ್ಮದ ಪ್ರತಿ ಕಣ ಕಣದಲ್ಲೂ ಶ್ರೀರಾಮ ಇದ್ದಾನೆ. ಪ್ರತಿ ಯುಗದ ಜನರು ರಾಮನನ್ನು ಗೆಲ್ಲಿಸಿದ್ದಾರೆ. ರಾಮರಸ ನಮ್ಮ ಜೀವನದ ರೀತಿ, ಅದು ನಿರಂತರವಾದದ್ದು. ರಾಮಮಂದಿರ ನಿರ್ಮಾಣ ಕೇವಲ ವಿಜಯ ಅಲ್ಲ, ವಿನಯದಿಂದ ಕೂಡಿದೆ ಎಂದು ಮೋದಿ ಹೇಳಿದರು.

ಶ್ರೀರಾಮ ಭಾರತದ ಚೇತನ ಅಷ್ಟೇ ಅಲ್ಲ ಚಿಂತನ ಕೂಡ. ರಾಮ ವ್ಯಾಪಕ, ವಿಶ್ವ, ವಿಶ್ವಾತ್ಮ, ಪ್ರವಾಹ, ಪ್ರಭಾವ ಕೂಡ ಆಗಿದ್ದಾನೆ. ಶ್ರೀರಾಮನ ಭವ್ಯ ಮಂದಿರ ನಿರ್ಮಾಣ ಆಗಿದೆ, ಈಗ ಮುಂದೆ ಏನು? ಕಾಲಚಕ್ರ ಬದಲಾಗುತ್ತಿದ್ದು, ಮುಂದಿನ ಪೀಳಿಗೆ ನಮ್ಮ ಕಾರ್ಯವನ್ನು ಸಾವಿರ ವರ್ಷ ಕಾಲ ನೆನಪು ಇಡುತ್ತವೆ. ದೇವನಿಂದ ದೇಶ, ರಾಮನಿಂದ ರಾಷ್ಟ್ರದ ಚೇತನ ವಿಸ್ತಾರಗೊಳ್ಳಬೇಕಿದೆ. ಭವ್ಯ ಭಾರತದ ಆಧಾರ ಪ್ರಭು ಶ್ರೀರಾಮ ಆಗುತ್ತಾನೆ ಎಂದು ಮೋದಿ ಹೇಳಿದರು.ಪ್ರಭು ಶ್ರೀರಾಮನ ಅಸ್ತಿತ್ವಕ್ಕಾಗಿ ನಮ್ಮ ದೇಶದಲ್ಲಿ ಕಾನೂನು ಸಂಘರ್ಷ ಕೂಡ ನಡೆದಿದೆ.

Nimma Suddi
";