This is the title of the web page
This is the title of the web page

Live Stream

December 2024
S M T W T F S
1234567
891011121314
15161718192021
22232425262728
293031  

| Latest Version 9.4.1 |

National NewsPolitics News

ಪ್ರಧಾನಿ ನರೇಂದ್ರ ಮೋದಿ ಅವರು ರಾಜೀನಾಮೆ

ಪ್ರಧಾನಿ ನರೇಂದ್ರ ಮೋದಿ ಅವರು ರಾಜೀನಾಮೆ

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು 17ನೇ ಲೋಕಸಭೆ ವಿಸರ್ಜನೆಗೆ ಶಿಫಾರಸು ಮಾಡಲು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿದ್ದಾರೆ. ಇದೀಗ ಮೋದಿ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆದರೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮುಂದಿನ ಹೊಸ ಸರ್ಕಾರ ರಚನೆ ಆಗುವವರೆಗೆ ನೀವು ಮತ್ತು ನಿಮ್ಮ ಸಚಿವ ಸಂಪುಟ ಮುಂದುವರಿಯುವಂತೆ ಮನವಿ ಮಾಡಿದ್ದಾರೆ. ಬಿಜೆಪಿಗೆ ಬಹುಮತವಿಲ್ಲದ ಕಾರಣ ತನ್ನ ಸ್ಥಾನಕ್ಕೆ ಮೋದಿ ಅವರು ರಾಜೀನಾಮೆ ನೀಡಬೇಕು.

ಮೂಲಗಳ ಪ್ರಕಾರ, ತೆಲುಗು ದೇಶಂ ಪಕ್ಷ (ಟಿಡಿಪಿ) ಮತ್ತು ಜನತಾ ದಳ-ಯುನೈಟೆಡ್ (ಜೆಡಿಯು) ಇದೀಗ ಕಿಂಗ್​​ಮೇಕರ್‌ ಆಗಿದ್ದು, ಸರ್ಕಾರ ರಚನೆ ಮಾಡಲು ಅವರ ಬೆಂಬಲ ಅಗತ್ಯವಾಗಿದೆ. ಇದೀಗ ಮೋದಿ ಅವರು ಸರ್ಕಾರ ರಚನೆ ಮಾಡಲು ಅವರ ಬೆಂಬಲ ಸಿಕ್ಕಿದೆ. ಇನ್ನು 3ನೇ ಬಾರಿ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಜೂ.8ಕ್ಕೆ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

2024ರ ಚುನಾವಣೆಯೂ 2014 ರಿಂದ 2019 ರವರೆಗೆ ನಡೆದ 17 ನೇ ಲೋಕಸಭೆಯ ವಿಸರ್ಜನೆಗೆ ದಾರಿ ಮಾಡಿಕೊಡಲಿದೆ. ರಾಷ್ಟ್ರ ರಾಜಧಾನಿಯಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆಯ ನಂತರ ಈ ಬೆಳವಣಿಗೆ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯು ಜೂನ್ 16 ಕ್ಕೆ ಅಂತ್ಯಗೊಳ್ಳುವ ಸಂಪುಟವನ್ನು ವಿಸರ್ಜಿಸಲು ಶಿಫಾರಸು ಮಾಡಿದೆ. ಇದರ ಜತೆಗೆ ಗೃಹ ಸಚಿವ ಅಮಿತ್​​​​​ ಇಂದು ಎಲ್ಲರೂ ಎನ್​​ಡಿಎ ಸಭೆಗೆ ಬರುವಂತೆ ಆಹ್ವಾನ ನೀಡಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.

Nimma Suddi
";