ಬೆಂಗಳೂರು: ಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠಾಪನೆಯ ಸಂದರ್ಭದಲ್ಲಿ ಗೋದ್ರಾ ಮಾದರಿಯಲ್ಲಿ ಘಟನೆಗಳು ನಡೆಯಬಹುದು ಎಂದು ಎಚ್ಚರಿಕೆ ನೀಡಿದ್ದ ಹಿರಿಯ ಕಾಂಗ್ರೆಸ್ ಮುಖಂಡ ಬಿ.ಕೆ ಹರಿಪ್ರಸಾದ್ ವಿರುದ್ಧ ಪೊಲೀಸ್ ವಿಚಾರಣೆಗೆ ರಾಜ್ಯಪಾಲರ ಒತ್ತಡ ಕಾರಣ ಎಂದು ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದರು.
ಬೆಂಗಳೂರಿನಲ್ಲಿ ಶನಿವಾರ ಮಾತನಾಡಿದ ಅವರು, ರಾಜ್ಯಪಾಲರು ಬಿ.ಕೆ ಹರಿಪ್ರಸಾದ್ ಹೇಳಿಕೆಯ ಬಗ್ಗೆ ತನಿಖೆ ಆಗುತ್ತಿದೆಯಾ? ಎಲ್ಲವೇ ? ಎಂದು ಪದೇ ಪದೇ ಕೇಳಿದ್ದಾರೆ. ರಾಜ್ಯಪಾಲರ ಮಾತಿಗೆ ಗೌರವ ಕೊಟ್ಟು ಗೃಹ ಇಲಾಖೆಯಿಂದ ಬಿ.ಕೆ ಹರಿಪ್ರಸಾದ್ ವಿಚಾರಣೆಗೆ ಪೊಲೀಸರು ತೆರಳಿದ್ದರು ಎಂದು ಸಮರ್ಥಿಸಿಕೊಂಡರು.ಸರ್ಕಾರವೇ ಪೊಲೀಸರನ್ನು ಕಳಿಸಿ ಮುಜುಗರ ಉಂಟು ಮಾಡಿದೆ ಎಂದು ಹೇಳಲು ಆಗುವುದಿಲ್ಲ. ಎಂದು ಪ್ರಶ್ನಿಸಿದರು.
ಸರ್ಕಾರಕ್ಕೆ ಬಿಕೆ ಹರಿಪ್ರಸಾದ್ ಅವರಿಗೆ ಮುಜುಗರ ಮಾಡಬೇಕು ಎಂದಿಲ್ಲ. ಎಲ್ಲೆಲ್ಲಿ ಬಿಜೆಪಿ ಇಲ್ಲ, ಅಲ್ಲಲ್ಲಿ ರಾಜ್ಯಪಾಲರ ಮೂಲಕ ಬಿಜೆಪಿಗರು ಆಳ್ವಿಕೆ ಮಾಡಲು ಹೊರಟಿದ್ದಾರೆ. ನಾವು ಏನೇ ಇದ್ದರೂ ಕಾನೂನು ಚೌಕಟ್ಟಿನಲ್ಲಿ ಮಾಡುತ್ತೇವೆ ಎಂದರು.ಆದರೆ ರಾಜ್ಯದ ಕಾನೂನು ಸುವ್ಯವಸ್ಥೆಗೂ ರಾಜ್ಯಪಾಲರಿಗೂ ಏನು ಸಂಬಂಧ? ಹಿಂದಿನ ಸರ್ಕಾರ ಇದ್ದಾಗ ಯಾವತ್ತೂ ಈ ರೀತಿ ಆಗಿಲ್ಲ. ಈ ಬಾರಿ ಏಕೆ ಆಗುತ್ತಿದೆ? ಜನರು ಇದರ ಬಗ್ಗೆ ವಿಚಾರ ಮಾಡಬೇಕು ಎಂದು ಹೇಳಿದರು.
ಉತ್ತರ ಪ್ರದೇಶದ ಆಡಳಿತ ನಡೆಯುವುದಿಲ್ಲ. ಇವರೆಲ್ಲರೂ ಇಂದಲ್ಲ, ನಾಳೆ ಒಳಗಡೆ ಹೋಗುತ್ತಾರೆ. ಅದರಲ್ಲಿ ಯಾವುದೇ ಅನುಮಾನ ಇಟ್ಟುಕೊಳ್ಳಬೇಡಿಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಠಾಪನೆಯ ಸಂದರ್ಭದಲ್ಲಿ ಗೋದ್ರಾ ಮಾದರಿಯ ಗಲಭೆ ನಡೆಯುವ ಸಾಧ್ಯತೆ ಇದೆ ಎಂದು ಬಿ.ಕೆ ಹರಿಪ್ರಸಾದ್ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ವಿಚಾರಣೆಗಾಗಿ ಪೊಲೀಸರು ಬಂದಿದ್ದರು. ಆದರೆ ಸರ್ಕಾರದ ಈ ನಡೆಗೆ ಬಿಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.