ಕಲಬುರಗಿ: ಹಾಸನದ ಮೂರು ಸಾವಿರ ನೊಂದ ಮಹಿಳೆಯರ ಮನೆಗೆ ಅಮಿತ್ ಶಾ ಹಾಗೂ ನಡ್ಡಾ ಯಾವಾಗ ಹೋಗುತ್ತಾರೆ? ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದರು.
ಕಲಬುರಗಿಯಲ್ಲಿ ಮಾತನಾಡಿದ ಅವರು, ಸೋಲಿನ ಭೀತಿಯಿಂದಾಗಿ ಖರ್ಗೆ ಕಲಬುರಗಿಗೆ ಪದೇ ಪದೇ ಬರುತ್ತಿದ್ದಾರೆ ಎನ್ನುವ ಸಂಸದ ಉಮೇಶ್ ಜಾಧವ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಮಲ್ಲಿಕಾರ್ಜುನ ಖರ್ಗೆ ಅವರು ಎರಡು ಸಲ ಕಲಬುರಗಿ ಯಿಂದ ಲೋಕಸಭೆ ಸದಸ್ಯರಾಗಿದ್ದವರು. ಈಗ ರಾಜ್ಯಸಭೆ ವಿರೋಧ ಪಕ್ಷದ ನಾಯಕರು. ಅವರು ಕಲಬುರಗಿಗೆ ಬರಲು ಚಿಂಚೋಳಿ ಎಂಪಿ ಅವರ ಅನುಮತಿ ಬೇಕಿಲ್ಲ ಎಂದು ತಿರುಗೇಟು ನೀಡಿದರು.
ಹುಬ್ಬಳ್ಳಿ ಘಟನೆ ಬಗ್ಗೆ ಹೋರಾಟ ನಡೆಸಿ ಈಗ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಹಗರಣದಲ್ಲಿ ಸುಮ್ಮನಿರುವ ಬಿಜೆಪಿ ನಾಯಕರ ಧೋರಣೆಯನ್ನು ಖಂಡಿಸಿದ್ದು, ಪ್ರಜ್ವಲ್ ಗೆ ಹಾಕುವ ಒಂದೊಂದು ಓಟು ನನ್ನ ಕೈಬಲ ಪಡಿಸಿದಂತೆ ಎಂದ ಮೋದಿ ಅವರಿಗೆ ಪ್ರಜ್ವಲ್ ಮಹಿಳೆರಿಗೆ ಕಿರುಕುಳ ನೀಡಿದ್ದಾರೆ ಅವರಿಗೆ ಟಿಕೇಟ್ ನೀಡಬೇಡಿ ಎಂದು ಅವರ ವಿರುದ್ದ ಪತ್ರ ಬರೆದಿದ್ದು ಗೊತ್ತಿರಲಿಲ್ಲವಾ? ಬಿಜೆಪಿಯವರೇ, ನಿಮ್ಮ ನಾಯಕರಾದ ನಿರ್ಮಲಾ ಸೀತಾರಾಮನ್, ಸ್ಮೃತಿ ಇರಾನಿ ಹಾಗೂ ಶೋಭಕ್ಕ ಅವರಿಂದ ಬಿಸಿಲಲ್ಲಿ ಪ್ರತಿಭಟನೆ ಮಾಡಿಸಿ ಆಮೇಲೆ ನಮ್ಮೊಂದಿಗೆ ಚರ್ಚೆಗೆ ಬನ್ನಿ ಎಂದು ಅಹ್ವಾನಿಸಿದರು.