ಬಾಗಲಕೋಟೆ::
ಜಿಲ್ಲೆಯಾದ್ಯಂತ ಜನವರಿ 7 ರಂದು ಜರುಗಲಿರುವ ನ್ಯಾಷನಲ್ ಮೀನ್ಸ್ ಕಮ್ ಮೆರಿಟ್ ವಿದ್ಯಾರ್ಥಿ ವೇತನಕ್ಕಾಗಿ 26 ಪರೀಕ್ಷಾ ಕೇಂದ್ರಗಳಲ್ಲಿ ಎನ್ಎಂಎಂಎಸ್ ಪರೀಕ್ಷೆಗಳು ಜರುಗಲಿದ್ದು, ಸದರಿ ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷ ರಹಿತವಾಗಿ ನಡೆಸಲು ಪರೀಕ್ಷಾ ಕೇಂದ್ರಗಳ ಸುತ್ತಲೂ ಸುರಕ್ಷಿತ ದೃಷ್ಟಿಯಿಂದ ಪರೀಕ್ಷಾ ಕೇಂದ್ರಗಳ ಸುತ್ತಲೂ 100 ಮೀಟರ್ ವರೆಗೆ ನಿಷೇಧಿತ ಪ್ರದೇಶವೆಂದು ಘೋಷಿಸಿ, 100 ಮೀಟರ್ ವ್ಯಾಪ್ತಿಯಲ್ಲಿ ಬರುವ ಎಲ್ಲ ಝರಾಕ್ಸ ಅಂಗಡಿ ಮತ್ತು ಸೈಬರ್ ಸೆಂಟರಗಳನ್ನು ಪರೀಕ್ಷಾ ಅವಧಿಯಲ್ಲಿ ಮುಚ್ಚತಕ್ಕದೆಂದು ಜಿಲ್ಲಾಧಿಕಾರಿಗಳು ಆಗಿರುವ ಜಿಲ್ಲಾ ದಂಡಾಧಿಕಾರಿ ಜಾನಕಿ ಕೆ.ಎಂ ಆದೇಶ ಹೊರಡಿಸಿದ್ದಾರೆ.