This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

State News

20 ರಿಂದ ಸರಕಾರಿ ನೌಕರರ ಪ್ರತಿಭಟನೆ

ನಿಮ್ಮ ಸುದ್ದಿ  ಚಿಕ್ಕಮಗಳೂರು

ರಾಜ್ಯ ಸರಕಾರಿ ನೌಕರರ ನಾಲ್ಕು, ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಸದ್ಯದಲ್ಲೇ ಸಾಂಕೇತಿಕ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಹೇಳಿದರು.

ಅವರು ಸೋಮವಾರ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಎಲ್ಲ ತಾಲೂಕು ಕಚೇರಿ ಮತ್ತು ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಜ.20ರಿಂದ ಪ್ರತಿಭಟನೆ ನಡೆಯಲಿದೆ. ಮಧ್ಯಾಹ್ನ ಊಟದ ಸಮಯ 1.30ರಿಂದ 2.30ರವರೆಗೆ ನಡೆಯಲಿದೆ. ಇದು ಸರಕಾರದ ವಿರುದ್ಧ ಅಲ್ಲ, ನೌಕರರ ನ್ಯಾಯಯುತ ಬೇಡಿಕೆಗಳ ಬಗ್ಗೆ ಗಮನ ಸೆಳೆಯಲು ಎಂದು ಸ್ಪಷ್ಟಪಡಿಸಿದರು.

”ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2.60 ಲಕ್ಷ ಹುದ್ದೆ ಭರ್ತಿ ಮಾಡಬೇಕು. ಕೇಂದ್ರ ಸರಕಾರದ ಇಲಾಖೆಯಂತೆ ಸಮಾನ ವೇತನ ನೀಡಬೇಕು. 7ನೇ ವೇತನ ಆಯೋಗ ಜಾರಿಗೊಳಿಸಬೇಕು. ಎನ್‌ಪಿಎಸ್ ನೌಕರರನ್ನು ಓಪಿಎಸ್ ನೌಕರರೆಂದು ಪರಿಗಣಿಸಬೇಕು ಎಂಬುದು ನಮ್ಮ ಬೇಡಿಕೆ,” ಎಂದು ತಿಳಿಸಿದ್ದಾರೆ.

";