ನಿಮ್ಮ ಸುದ್ದಿ ಬಾಗಲಕೋಟೆ
ಹಿಂದಿ ದಿವಸ್ ಹಾಗೂ ಭಾರತ ಒಕ್ಕೂಟ ಸರ್ಕಾರದ ಹಿಂದಿ ಹೇರಿಕೆ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆಯಿಂದ ಪ್ರತಿಭಟನೆ ನಡೆಯಲಿದೆ.
ಬುಧವಾರ ಬಾಗಲಕೋಟೆ ಜಿಲ್ಲಾಡಳಿತ ಭವನದ ಎದುರು ಬೆಳಗ್ಗೆ 11.30ಕ್ಕೆ ಪ್ರತಿಭಟನೆ ನಡೆಸಿ ಡಿಸಿಗೆ ಮನವಿ ಸಲ್ಲಿಸಲಾಗುವುದು ಎಂದು ಕರವೇ ಜಿಲ್ಲಾಧ್ಯಕ್ಷ ಬಸವರಾಜ ಧರ್ಮಂತಿ ತಿಳಿಸಿದ್ದಾರೆ.