This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

State News

ಸಂಬಳ ಸಿಗದೆ ಬಿಎಂಟಿಸಿ ಎಲೆಕ್ಟ್ರಿಕ್​ ಬಸ್​ ಚಾಲಕರ ಪರದಾಟ, ಡಿಪೋ ಎದುರು ಪ್ರತಿಭಟನೆ

ಸಂಬಳ ಸಿಗದೆ ಬಿಎಂಟಿಸಿ ಎಲೆಕ್ಟ್ರಿಕ್​ ಬಸ್​ ಚಾಲಕರ ಪರದಾಟ, ಡಿಪೋ ಎದುರು ಪ್ರತಿಭಟನೆ

ಬೆಂಗಳೂರು: ಬೆಂಗಳೂರಿನ ವಾಯು ಮಾಲಿನ್ಯ ಕಡಿಮೆ ಮಾಡುತ್ತೇವೆ ಎಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಎಲೆಕ್ಟ್ರಿಕ್​ ಬಸ್​ಗಳುಸರಿಯಾಗಿ ಸೇವೆ ಒದಗಿಸುತ್ತಿಲ್ಲ ಎಂಬ ಆರೋಪ ಕೇಳಿಬಂದ ಬೆನ್ನಲೇ ಇದೀಗ, ಈ ಬಸ್​​ಗಳ ಚಾಲಕರಿಗೆ ಸರಿಯಾಗಿ ವೇತನ ನೀಡುತ್ತಿಲ್ಲ ಅಂತ ಕೂಗು ಕೇಳಿಬರುತ್ತಿದೆ ಎಂದು ಮಾಹಿತಿ ತಿಳಿದು ಬಂದಿದೆ.

ಕೆಲಸಕ್ಕೆ ಸೇರಿಸಿಕೊಳ್ಳುವಾಗ 26 ರೂ. ನೀಡುತ್ತೇವೆ ಎಂದು ಹೇಳಿದ್ದರು. ಆದರೆ ಈಗ ಕೇವಲ 18 ಸಾವಿರ ರೂ. ಕೊಡುತ್ತಿದ್ದಾರೆ. ಕಡಿತ​ ಮಾಡುತ್ತಿರುವ ಹಣ ಪಿಎಫ್​ ಖಾತೆಗೂ ಜಮೆ ಆಗಿಲ್ಲ. ಟಾಟಾ ಕಂಪನಿಯಲ್ಲಿ ಕೆಲಸ ಎಂದು ನಮಗೆ ಹೇಳಿದ್ದರು, ಈಗ ಯಾವುದೋ ಆರ್ಯ ಕಂಪನಿಯಲ್ಲಿ ಕೆಲಸ ನೀಡಿದ್ದಾರೆ. ವಸತಿ ಸೌಲಭ್ಯ ನೀಡುತ್ತೇವೆ ಎಂದು ಹೇಳಿದ್ದರು. ಆದರೆ ಇಲ್ಲಿ ಯಾವುದೇ ರೀತಿಯ ಸೌಲಭ್ಯ ನೀಡಿಲ್ಲ ಎಂದು ಚಾಲಕರು ಆಕ್ರೋಶ ವ್ಯಕ್ತಪಡಿಸಿದರು.

ಬಿಎಂಟಿಸಿಯಲ್ಲಿ ಒಟ್ಟು 6842 ಬಸ್​​ಗಳಿವೆ. ಅದರಲ್ಲಿ ಸಾಮಾನ್ಯ 5642 ಬಸ್​​ಗಳಿದ್ದರೆ, 600 ಎಸಿ ಬಸ್​​ಗಳಿವೆ. 600 ಕ್ಕೂ ಹೆಚ್ಚು ಎಲೆಕ್ಟ್ರಿಕ್ ಬಸ್​​ಗಳಿವೆ. ಡಿಪೋ-3 ಒಂದರಲ್ಲೇ 113 ಎಲೆಕ್ಟ್ರಿಕ್​ ಬಸ್​ಗಳು ಸಂಚರಿಸುತ್ತೇವೆ. ಇಲ್ಲಿ ಚಾಲಕರು ಮೂರು ಶಿಫ್ಟ್​​​ಗಳಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದಾರೆ.

ಎಲೆಕ್ಟ್ರಿಕ್​ ಬಸ್​ಗಳ ಚಾಲಕರು ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದು, ಇವರಿಗೆ ಸರಿಯಾಗಿ ವೇತನ ನೀಡುತ್ತಿಲ್ಲ ಎಂಬ ಆರೋಪವಿದೆ.​ ಈ ಸಂಬಂಧ ಚಾಲಕರು ಶಾಂತಿನಗರ ಡಿಪೋ 3ರ ಮುಂದೆ ಧರಣಿ ಮಾಡುತ್ತಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.

";