ಬಾಗಲಕೋಟೆ
ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಮೇ 15 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30 ವರೆಗೆ ಮುಧೋಳ ತಾಲೂಕಾ ಪಂಚಾಯತ ಕಾರ್ಯಾಲಯದಲ್ಲಿ ಜನಸಂಪರ್ಕ ಸಭೆ ಹಮ್ಮಿಕೊಂಡಿದ್ದಾರೆ. ಸರಕಾರಿ ಕಚೇರಿಯಲ್ಲಿ ಅಧಿಕೃತ ಕೆಲಸಗಳನ್ನು ಮಾಡಿಕೊಡುವಲ್ಲಿ ವಿನಾಕಾರಣ ವಿಳಂಬ ಹಾಗೂ ಇನ್ನೀತರೆ ತೊಂದರೆ ಆಗಿದ್ದರೆ ಅಂತಹ ಅಧಿಕಾರಿ ಮತ್ತು ನೌಕರರ ವಿರುದ್ದ ಸಾರ್ವಜನಿಕರು ಸದರಿ ಜನಸಂಪರ್ಕ ಸಭೆಗೆ ಹಾಜರಾಗಿ ಲಿಖಿತ ದೂರುಗಳನ್ನು ಸಲ್ಲಿಸಬಹುದಾಗಿದೆ ಎಂದು ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂಸಂ.08354-236200, 295170ಗೆ ಸಂಪರ್ಕಿಸಬಹುದಾಗಿದೆ.