ನಿಮ್ಮ ಸುದ್ದಿ ಬೆಂಗಳೂರು
ಮಹತ್ವದ ನಿರ್ಧಾರವೊಂದರಲ್ಲಿ ಶಿಕ್ಷಣ ಇಲಾಖೆ ಪಿಯುಸಿ ದ್ವಿತೀಯ ಪರೀಕ್ಷೆಯನ್ನು ರದ್ದುಗೊಳಿಸುವ ನಿರ್ಧಾರ ಕೈಗೊಂಡರೆ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ.
ಪರೀಕ್ಷೆ ಕುರಿತ ನಿರ್ಧಾರವನ್ನು ಶಿಕ್ಷಣ ಸಚಿವ ಸುರೇಶಕುಮಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಪಿಯುಸಿ ದ್ವಿತೀಯ ವಾರ್ಷಿಕ ಪರೀಕ್ಷೆಯನ್ನು ಸಂಪೂರ್ಣ ರದ್ದುಗೊಳಿಸಿದ್ದು ಪ್ರಥಮ ಪಿಯುಸಿಯಲ್ಲಿ ಗಳಿಸಿದ ಅಂಕಗಳ ಆಧಾರದಲ್ಲಿ ಗ್ರೇಡ್ ನೀಡುವುದಾಗಿ ನಿರ್ಧರಿಸಲಾಗಿದೆ ಎಂದರು.
ಗ್ರೇಡ್ ನೀಡಿಕೆ ಪದ್ಧತಿ ವಿದ್ಯಾರ್ಥಿಗಳಿಗೆ ಸಮಾಧಾನ ತರದಿದ್ದರೆ ಕೋವಿಡ್ ನಂತರ ಅಂತಹ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು ಎಂದು ಹೇಳಿದರು.
ಎಸ್.ಎಸ್.ಎಲ್.ಸಿ ಗೆ ಒಂದೇ ಪರೀಕ್ಷೆ
ಇನ್ನು ಎಸ್.ಎಸ್.ಎಲ್.ಸಿ ಪರೀಕ್ಷೆ ಕುರಿತು ಮಾತನಾಡಿದ ಸಚಿವರು ಈ ಬಾರಿ ಎರಡು ಪರೀಕ್ಷೆ ನಡೆಸಲಾಗುತ್ತದೆ.
ಕೋರ್ ವಿಷಯಗಳಾದ ವಿಜ್ಞಾನ, ಗಣಿತ ಹಾಗೂ ಸಮಾಜ ವಿಜ್ಞಾನ ಸೇರಿ ಒಂದೇ ಪರೀಕ್ಷೆ ಬರೆಯಬೇಕಾಗುತ್ತದೆ. 3 ಗಂಟೆಗಳ ಅವಧಿಯ ಈ ಪರೀಕ್ಷೆಯಲ್ಲಿ ಎಲ್ಲ ಪ್ರಶ್ನೆಗಳು ಬಹು ಆಯ್ಕೆ ಹೊಂದಿರುತ್ತವೆ. ಪ್ರತಿ ವಿಷಯಕ್ಕೂ 40 ಅಂಕಗಳನ್ನು ನೀಡಲಾಗಿದ್ದು 120 ಅಂಕದ ಪರೀಕ್ಷೆ ಇದಾಗಿದೆ ಎಂದು ಹೇಳಿದರು.
ಭಾಷಾ ವಿಷಯಗಳಾದ ಕನ್ನಡ, ಇಂಗ್ಲೀಷ್ ಹಾಗೂ ಹಿಂದಿ ವಿಷಯ ಸೇರಿ ಒಂದು ಪರೀಕ್ಷೆ ನಡೆಸಲಾಗುವುದು. ಪರೀಕ್ಷೆ ಜುಲೈ 3 ನೇ ವಾರದಲ್ಲಿ ನಡೆಸಲು ನಿರ್ಧರಿಸಲಾಗಿದೆ. ಮೇಲ್ವಿಚಾರಕರು ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಂಡಿರಬೇಕು. ಒಂದು ಕೋಣೆಯಲ್ಲಿ 10-12 ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು. ಎಲ್ಲ ವಿದ್ಯಾರ್ಥಿಗಳಿಗೆ ಎನ್-95 ಮಾಸ್ಕ್ ನೀಡಲಾಗುವುದು. 3 ಗಂಟೆಯ ಕಾಲದ ಪರೀಕ್ಷೆ ಆಗಿದ್ದು ಪ್ರಶ್ನೆಗಳು ನೇರ ಹಾಗೂ ಸರಳವಾಗಿರುತ್ತವೆ ಎಂದು ಹೇಳಿದರು.