ನಿಮ್ಮ ಸುದ್ದಿ ಬಾಗಲಕೋಟೆ
ನಾಳೆ ನಡೆಯಬೇಕಿದ್ದ ಕೆಪಿಎಸ್ ಸಿ ಎಫ್.ಡಿ.ಎ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಪ್ರಶ್ನೆಪತ್ರಿಕೆಗಳು ದುಷ್ಕರ್ಮಿಗಳ ಕೈ ಸೇರಿವೆ. ಆದ್ದರಿಂದ ಆಯೋಗ ಈ ತೀರ್ಮಾನಕ್ಕೆ ಬರಲಾಗಿದೆ ಎಂದು ತಿಳಿಸಲಾಗಿದೆ.
ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2019ನೇ ಸಾಲಿನ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಜ.23ರಂದು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ಮತ್ತು 24ರಂದು ಎರಡು ಅಧಿವೇಶನಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲು ನಿಗದಿಪಡಿಸಲಾಗಿತ್ತು.
ಏತನ್ಮಧ್ಯೆ, ಜ.23ರಂದು ಬಲ್ಲ ಮೂಲಗಳಿಂದ ಸ್ವೀಕೃತಗೊಂಡ ಮಾಹಿತಿಯ ಪ್ರಕಾರ ಜ.24ರಂದು ಎರಡು ಅಧಿವೇಶನಗಳಲ್ಲಿ ನಡೆಯಬೇಕಾಗಿದ್ದ, ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆಪತ್ರಿಕೆಗಳು ಕೆಲವೊಂದು ದುಷ್ಕರ್ಮಿಗಳ ಕೈ ಸೇರಿರುವುದು ತಿಳಿದು ಬಂದಿರುವ ಹಿನ್ನೆಲೆಯಲ್ಲಿ, ಜ.24ರಂದು ನಡೆಯಬೇಕಾಗಿದ್ದ 2019ನೇ ಸಾಲಿನ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ ಎಂದು ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಜಿ.ಸತ್ಯವತಿ ತಿಳಿಸಿದ್ದಾರೆ.
ಸದರಿ ಪರೀಕ್ಷಾ ದಿನಾಂಕವನ್ನು ಮರು ನಿಗದಿಪಡಿಸಿ ಮುಂದುವರೆದು, ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಕಟಿಸಲಾಗುವುದೆಂದು ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿಗಳು ತಿಳಿಸಿದ್ದಾರೆ.
ಲೋಕಸೇವಾ ಆಯೋಗದ ನಿರ್ಧಾರದಂತೆ ಬಾಗಲಕೋಟೆ ಜಿಲ್ಲೆಯಲ್ಲಿಯೂ ಸದರಿ ಪರೀಕ್ಷೆ ಮುಂದೂಡಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಕ್ಯಾ.ಕೆ.ರಾಜೇಂದ್ರ ತಿಳಿಸಿದ್ದಾರೆ.