This is the title of the web page
This is the title of the web page

Live Stream

October 2024
S M T W T F S
 12345
6789101112
13141516171819
20212223242526
2728293031  

| Latest Version 9.4.1 |

Politics NewsState News

ರಾಹುಲ್ ಗಾಂಧಿ ಸೇರಿ ಹಲವರಿಗೆ ಕೋರ್ಟ್​ ಬಿಸಿ ಮುಟ್ಟಿಸಿದೆ: ಆರ‍್ ಅಶೋಕ್​

ರಾಹುಲ್ ಗಾಂಧಿ ಸೇರಿ ಹಲವರಿಗೆ ಕೋರ್ಟ್​ ಬಿಸಿ ಮುಟ್ಟಿಸಿದೆ: ಆರ‍್ ಅಶೋಕ್​

ಬೆಂಗಳೂರು: ಪ್ರಧಾನಿ ಮೋದಿಯವರ ಬಗ್ಗೆ ಕಾಂಗ್ರೆಸ್​ ನಾಯಕರು ಅವಹೇಳನಕಾರಿಯಾಗಿ ಮಾತನಾಡಿದ್ದು, ವಿಧಾನಸಭೆ ಚುನಾವಣೆ ಬಳಿಕ ಕಾಂಗ್ರೆಸ್ ಪಕ್ಷದ ನಾಯಕರಿಗೆ ಬುದ್ಧಿ ಭ್ರಮಣೆಯಾಗಿದೆ ಎಂದು ರಾಜ್ಯ ಕಾಂಗ್ರೆಸ್​ ವಿರುದ್ಧ ವಿಪಕ್ಷ ನಾಯಕ ಆರ್​. ಅಶೋಕ್ ವಾಗ್ದಾಳಿ ನಡೆಸಿದರು.

ಮಾಧ್ಯಮ ಕೇಂದ್ರ ಹೋಟೆಲ್ ಜಿ.ಎಂ. ರಿಜಾಯ್ಸ್​​ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್​ನ ಎಲ್ಲ ನಾಯಕರಿಗೆ ಕೋರ್ಟ್ ತಪರಾಕಿ ಹಾಕಿದೆ. ರಾಹುಲ್ ಗಾಂಧಿ ಸೇರಿ ಹಲವರಿಗೆ ಕೋರ್ಟ್​ ಬಿಸಿ ಮುಟ್ಟಿಸಿದೆ. ಶಿವರಾಜ್ ತಂಗಡಗಿ ಕೂಡ ನಾಲಗೆ ಹರಿಬಿಟ್ಟಿದ್ದಾರೆ. ಸೋಲಿನ ಭಯದಿಂದ ಈ ರೀತಿ ಮಾತಾಡುತ್ತಿದ್ದಾರೆ. ಸಂಸ್ಕೃತಿ ಇಲ್ಲದ ಸಚಿವರು ಮಾತನಾಡುತ್ತಿದ್ದಾರೆ ಎಂದು ಹೇಳಿದರು.

ಬೆಂಗಳೂರಿನಲ್ಲಿ ನೀರಿನ ಕೊರತೆ ಇದ್ದು, ಜನರು ಪರದಾಡುತ್ತಿದ್ದು, ಇಷ್ಟು ದಿನ ಕೆರೆಗಳನ್ನ ತುಂಬಿಸಿಲ್ಲ, ಮಣ್ಣು ತಿಂತಿದ್ರಾ? ನೀರು ಕೋಡಲು ಆಗದವರು ನೀರಾವರಿ ಸಚಿವರು. ಬ್ರ್ಯಾಂಡ್ ಬೆಂಗಳೂರು ಬೈಬೈ ಬೆಂಗಳೂರು ಆಗಿದೆ. ಕಲುಷಿತ ನೀರು ಕುಡಿದು ಅನಾರೋಗ್ಯಕ್ಕಿಡಾಗಿದ್ದಾರೆ. ರಾಜ್ಯ ಸರ್ಕಾರ ಏನು ಮಾಡುತ್ತಿದ್ದೆ ಎಂದು ಪ್ರಶ್ನಿಸಿದರು.

ಚಾಯ್ ವಾಲಾ, ಚೌಕಿದಾರ್ ಚೋರ್, ಮೋದಿಗೆ ಪರಿವಾರ ಇಲ್ಲ ಅಂದರು. ನಾವು ಕೂಡ ಅದನ್ನು ಅಸ್ತ್ರ ಮಾಡಿಕೊಂಡಿದ್ದೇವೆ. ಶಿವರಾಜ್​ ತಂಗಡಗಿ ಈ ಹಿಂದೆ ಬಿಜೆಪಿಯಲ್ಲಿದ್ದಾಗ ಸೋನಿಯಾ ಗಾಂಧಿ ಅವರಿಗೆ ಬೈಯ್ಯುತ್ತಿದ್ದು, ಮೋದಿ ಅವರಿಗೆ ಅನ್ನುತ್ತಿದ್ದಾರೆ. ಕರ್ನಾಟಕ ಜನತೆಗೆ ಸಂಸ್ಕೃತ ಹೇಳಬೇಕಾದವರೂ, ಈ ರೀತಿ ಮಾತನಾಡುತ್ತಿದ್ದಾರೆ. ಇಡೀ ಸರ್ಕಾರವೇ ಸಂಸ್ಕಾರ ಇಲ್ಲದ, ಹೊಲಸು ಪದ ಉಪಯೋಗ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾನೂನು ಬಾಹಿರವಾಗಿ ಅಂಜಲಿ ನಿಂಬಾಳ್ಕರ್ ಉತ್ತರ ಕನ್ನಡ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿಯಾಗಿದ್ದಾರೆ. ಅಂಜಲಿ ನಿಂಬಾಳ್ಕರ್​ ಪತಿ ಹೇಮಂತ್ ನಿಂಬಾಳ್ಕರ್ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿದ್ದಾರೆ. ಇದರಿಂದ ಪಾರದರ್ಶಕವಾಗಿ ಚುನಾವಣೆ ನಡೆಸಲು ಆಗಲ್ಲ. ಪತ್ನಿ ಅಭ್ಯರ್ಥಿ, ಪತಿ ಆಯುಕ್ತರು ಆಗಿರುವುದು ಪಕ್ಷಪಾತದ ಧೋರಣೆ ಆಗಲಿದೆ. ಇದರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡುತ್ತೇವೆ ಎಂದು ತಿಳಿಸಿದರು. ರಮೇಶ್ ಕುಮಾರ್-ಮುನಿಯಪ್ಪ ಬಣಗಳು ಗುದ್ದಾಡಿಕೊಳ್ಳುತ್ತಿವೆ ಎಂದು ವಿವರಿಸಿದರು.

 

";