This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

State News

ರಾಹುಲ್ ಗಾಂಧಿ ಸಂಸದ ಸ್ಥಾನದಿಂದ ಅನರ್ಹ

ರಾಹುಲ್ ಗಾಂಧಿಯವರ ಲೋಕಸಭಾ ಸದಸ್ಯತ್ವ ಸ್ಥಾನ ಅನರ್ಹಗೊಳಿಸಿದ ಲೋಕಸಭಾ ಸೆಕ್ರೆಟರಿಯೇಟ್‌

ನವದೆಹಲಿ

ಮೋದಿ ಸರ್‌ನೇಮ್‌‌’ ಬಳಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರತ್ ಕೋರ್ಟ್‌ 2 ವರ್ಷಗಳ ಜೈಲು ಶಿಕ್ಷೆ ವಿಧಿಸಿದ ನಂತರ ಕಾಂಗ್ರೆಸ್ ನಾಯಕ, ವಯನಾಡ್ ಸಂಸದ ರಾಹುಲ್ ಗಾಂಧಿಯವರ ಲೋಕಸಭಾ ಸದಸ್ಯತ್ವ ಸ್ಥಾನದಿಂದ ಸಂಪೂರ್ಣ ಅನರ್ಹಗೊಳಿಸಲಾಗಿದೆ.

ಲೋಕಸಭಾ ಸೆಕ್ರೆಟರಿಯೇಟ್‌ರವರು ಈ ಕುರಿತು ಪ್ರಕಟಣೆ ಹೊರಡಿಸಿದ್ದು, “ಕೇರಳದ ವಯನಾಡ್ ಸಂಸದೀಯ ಕ್ಷೇತ್ರವನ್ನು ಪ್ರತಿನಿಧಿಸುವ ಲೋಕಸಭಾ ಸದಸ್ಯರಾದ ಶ್ರೀ ರಾಹುಲ್ ಗಾಂಧಿಯವರನ್ನು ಸೂರತ್‌ನ ಮುಖ್ಯ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಅಪರಾಧಿ ಎಂದು ಘೋಷಿಸಿದ ನಂತರ, 1951ರ ಪ್ರಜಾಪ್ರತಿನಿಧಿ ಕಾಯ್ದೆಯ 8ನೇ ಪರಿಚ್ಛೇದದೊಂದಿಗೆ, ಭಾರತದ ಸಂವಿಧಾನದ 102(1)(ಇ) ವಿಧಿಯ ನಿಬಂಧನೆಗಳ ಪ್ರಕಾರ,7 ಮಾರ್ಚ್ 23, 2023 ರಿಂದ (ಶಿಕ್ಷೆಯಾದ ದಿನಾಂಕದಿಂದ) ಅವರು ಲೋಕಸಭೆಯ ಸದಸ್ಯತ್ವದಿಂದ ಅನರ್ಹಗೊಂಡಿದ್ದಾರೆ” ಎಂದು ಆದೇಶಿಸಲಾಗಿದೆ.

ಇದಕ್ಕೂ ಮುನ್ನ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಕಚೇರಿಯಲ್ಲಿ ಪ್ರತಿಪಕ್ಷಗಳ ಸಂಸದರು ಸಂಕ್ಷಿಪ್ತ ಸಭೆ ನಡೆಸಿದ್ದರು. ಆನಂತರ ರಾಷ್ಟ್ರಪತಿ ಭವನದತ್ತ “ಪ್ರಜಾಪ್ರಭುತ್ವ ಅಪಾಯದಲ್ಲಿದೆ” ಎಂದು ಭಿತ್ತಿಪತ್ರಗಳನ್ನು ಹಿಡಿದು ಮೆರವಣಿಗೆ ನಡೆಸಿದರು. ಪ್ರತಿಭಟನೆಯ ಹಿನ್ನೆಲೆಯಲ್ಲಿ ವಿಜಯ್ ಚೌಕ್ ಪ್ರದೇಶದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿತ್ತು. ಕೆಲವು ಸಂಸದರನ್ನು ವಿಜಯ್ ಚೌಕ್‌ನಿಂದ ವಶಕ್ಕೆ ಪಡೆಯಲಾಯಿತು.

ಇಂದು ಬೆಳಿಗ್ಗೆ ಲೋಕಸಭೆಗೆ ಆಗಮಿಸಿದ ರಾಹುಲ್ ಗಾಂಧಿಯವರು ಮಾತನಾಡಲು ಅವಕಾಶ ಕೋರಿದರು. ಕಾಂಗ್ರೆಸ್ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ್ದರಿಂದ ಕಲಾಪವನ್ನು ಮುಂದೂಡಲಾಗಿತ್ತು.

ಕೋರ್ಟ್ ತೀರ್ಪಿನ ಕುರಿತು ಕಾಂಗ್ರೆಸ್ ಸಂಸದರು ರಾಷ್ಟ್ರಪತಿ ದ್ರೌಪದಿ ಮುರ್ಮುರವರನ್ನು ಭೇಟಿ ಮಾಡಿ ಚರ್ಚಿಸಲು ಸಿದ್ಧತೆ ನಡೆಸಿದ್ದಾರೆ. ಕಾಂಗ್ರೆಸ್ ಪಕ್ಷವು ದೇಶಾದ್ಯಂತ ಪ್ರತಿಭಟನೆ ನಡೆಸಲು ಉದ್ದೇಶಿಸಿದೆ.

ಹಲವು ರಾಜ್ಯಗಳಲ್ಲಿ ಕಾಂಗ್ರೆಸ್ ಘಟಕಗಳು ಏಕಕಾಲದಲ್ಲಿ ಪ್ರತಿಭಟನೆಗಳನ್ನು ಆರಂಭಿಸಿವೆ. ಕೇಂದ್ರವು ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ಆರೋಪ ಮಾಡಿದ್ದಾರೆ. ಗಾಂಧಿ ವಿರುದ್ಧದ ಸೂರತ್ ಕೋರ್ಟ್ ತೀರ್ಪಿನ ವಿರುದ್ಧ ಕರ್ನಾಟಕದಲ್ಲೂ ಪ್ರತಿಭಟನೆ ನಡೆಸುತ್ತಿದ್ದರು.

ಈ ವೇಳೆ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಪಕ್ಷದ ಇತರ ಮುಖಂಡರು ಮತ್ತು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

ತಮ್ಮ ವಿವಾದಾತ್ಮಕ ಲಂಡನ್ ಹೇಳಿಕೆಗಳ ಬಗ್ಗೆ ತಮ್ಮ ವಿರುದ್ಧದ ಆರೋಪಗಳಿಗೆ ಪ್ರತಿಕ್ರಿಯಿಸಲು ರಾಹುಲ್ ಗಾಂಧಿ ಅವರು ಸಮಯ ಕೋರಿ ಲೋಕಸಭೆ ಸ್ಪೀಕರ್‌ಗೆ ಪತ್ರ ಬರೆದಿದ್ದಾರೆ. ಆದರೆ ಅವರ ಧ್ವನಿ ಅಡಗಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಹೇಳಿದೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, ”ಕೇಂದ್ರ ತನಿಖಾ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಳ್ಳುವ ಮೂಲಕ ಕೇಂದ್ರ ಸರ್ಕಾರವು ಪ್ರತಿಪಕ್ಷಗಳ ನಾಯಕರನ್ನು ಬೇಟೆಯಾಡುತ್ತಿದೆ. ದೇಶದಲ್ಲಿ ಸಂವಿಧಾನ ಮತ್ತು ಪ್ರಜಾಪ್ರಭುತ್ವ ಉಳಿಸುವ ನಿಟ್ಟಿನಲ್ಲಿ ಈ ಪಾದಯಾತ್ರೆ ನಡೆಸಲಾಗುತ್ತಿದೆ” ಎಂದು ಹೇಳಿದ್ದಾರೆ.

";