ಚುನಾವಣೆಯಲ್ಲಿ ಹಿಂಸೆಗೆ ಅವಕಾಶ ನೀಡಲ್ಲ: ರಾಜೀವ್ ಕುಮಾರ್
ಚುನಾವಣೆಯಲ್ಲಿ ಹಿಂಸೆಗೆ ಅವಕಾಶ ನೀಡಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತಿಳಿಸಿದರು.
ರೌಡಿಶೀಟರ್ಗಳ ಮೇಲೂ ತೀವ್ರ ನಿಗಾ ಇಡಲಾಗುವುದು. ಅಂತರಾಷ್ಟ್ರೀಯ ಗಡಿಯಲ್ಲೂ ಡ್ರೋಣ್ ಮೂಲಕ ಕಣ್ಗಾವಲು ಇರಿಸಲಾಗುವುದು ಎಂದರು.
ಎಲ್ಲಾ ಕಡೆ ಚೆಕ್ಪೋಸ್ಟ್ ಇರಲಿವೆ, ಡ್ರೋನ್ ಮೂಲಕ ಕಣ್ಗಾವಲು ಇರಿಸಲಾಗುವುದು. 24 ಗಂಟೆಗಳ ಕಂಟ್ರೋಲ್ ರೂಂಗಳು ಕರ್ತವ್ಯ ನಿರ್ವಹಿಸಲಿವೆ. ಸಿಆರ್ಪಿಎಫ್ ತುಕಡಿಗಳನ್ನು ನಿಯೋಜನೆ ಮಾಡಲಾಗುವುದು ಎಂದು ಸೂಚಿಸಿದರು.