This is the title of the web page
This is the title of the web page

Live Stream

July 2024
S M T W T F S
 123456
78910111213
14151617181920
21222324252627
28293031  

| Latest Version 9.4.1 |

State News

ಕೆರೆಗಳ ಸಮಗ್ರ ಅಭಿವೃದ್ದಿಗೆ ಕ್ರಮ:ಡಿಸಿ ರಾಜೇಂದ್ರ

ಜಲಶಕ್ತಿ ಅಭಿಯಾನ

ನಿಮ್ಮ ಸುದ್ದಿ ಬಾಗಲಕೋಟೆ

ಜಿಲ್ಲೆಯಲ್ಲಿರುವ ಕೆರೆಗಳನ್ನು ಸಮಗ್ರವಾಗಿ ಅಭಿವೃದ್ದಿಪಡಿಸುವ ನಿಟ್ಟಿನಲ್ಲಿ ಅವುಗಳ ಪುನಶ್ಚೇತನಕ್ಕೆ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಾದ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಅಧಿಕಾರಿಗಳು ಸೂಚಿಸಿದರು.

ಜಿಲ್ಲಾ ಪಂಚಾಯತ ನೂತನ ಸಭಾಭವನದಲ್ಲಿಂದು ಜರುಗಿದ ಜಲಶಕ್ತಿ ಅಭಿಯಾನ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕೆರೆ, ಕಲ್ಯಾಣಿ, ನಾಲಾ ಮುಂತಾದ ಸಾಂಪ್ರದಾಯಿಕ ಜಲಮೂಲಗಳ ಒತ್ತುವರಿ ತೆರವುಗೊಳಿಸಿ ಪುನಶ್ಚೇತನಗೊಳಿಸುವ ಮೂಲಕ ಜಲಸಂರಕ್ಷಣೆಗೆ ಕೇಂದ್ರ ಸರಕಾರ ಜಲಶಕ್ತಿ ಅಭಿಯಾನ ಕಾರ್ಯಕ್ರಮ ಹಮ್ಮಿಕೊಂಡಿದೆ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿರುವ ಕೆರೆಗಳ ಸದ್ಯವಿರುವ ಸ್ಥಿತಿಗತಿ ಪರಿಶೀಲಿಸಿ ಒತ್ತುವರಿಯಾಗಿದ್ದರೆ ತೆರವು ಕಾರ್ಯಾಚರಣೆಗೆ ಉಪವಿಭಾಗಾಧಿಕಾರಿಗಳು, ತಹಶೀಲ್ದಾರರು ಹಾಗೂ ತಾ.ಪಂ ಇಓಗಳು ಕ್ರಮವಹಿಸಲು ಸೂಚಿಸಿದರು.

ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿ ೧೨, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ೧೨, ಸಣ್ಣ ನೀರಾವರಿ ವ್ಯಾಪ್ತಿಯಲ್ಲಿ ೬೨, ಪಂಚಾಯತ ರಾಜ್ ವ್ಯಾಪ್ತಿಯಲ್ಲಿ ೧೬೭ ಕೆರಗಳು ಬರುತ್ತಿದ್ದು, ಕೆರಗಳನ್ನು ತುಂಬಿಸಲು ಕ್ರಮಕೈಗೊಳ್ಳಬೇಕು. ಕೆರೆಗಳಿಗೆ ನೀರು ಹರಿದು ಬರುವ ಕಾಲುವೆಗಳ ಒತ್ತುವರಿಯಾದಲ್ಲಿ ತೆರವುಗೊಳಿಸಿ ಅವುಗಳ ಹೂಳು ತೆಗೆಯಲು ಕ್ರೀಯಾ ಯೋಜನೆ ರೂಪಿಸಲು ತಿಳಿಸಿದರು. ಇದರ ಜೊತೆ ರೈತರ ಹೊಲದಲ್ಲಿ ಬದು ಮತ್ತು ಕೃಷಿ ಹೊಂಡ ನಿರ್ಮಾಣಕ್ಕೆ ಕೃಷಿ ಇಲಾಖೆಯವರು ಕ್ರಮವಹಿಸಲು ತಿಳಿಸಿದರು.

ಜಿಲ್ಲಾ ಪಂಚಾಯತ ಸಿಇಓ ಟಿ.ಭೂಬಾಲನ್ ಮಾತನಾಡಿ ಜಲಶಕ್ತಿ ಅಭಿಯಾನ ಸಮರ್ಪಕ ಅನುಷ್ಠಾನಕ್ಕೆ ವಿವಿಧ ಇಲಾಖೆಗಳ ಸಹಕಾರ ಅಗತ್ಯವಾಗಿದೆ. ಏಪ್ರೀಲ್ ೧ ರಿಂದ ೧೦೦ ದಿನಗಳ ಕಾಲ ಮಳೆ ನೀರು ಸಂರಕ್ಷಣೆ ಅಭಿಯಾನವನ್ನು ಹಮ್ಮಿಕೊಳ್ಳಲಾಗುತ್ತಿದೆ. ನರೇಗಾ ಯೋಜನೆಯಡಿ ಕೈಗೊಳ್ಳಲಾಗುತ್ತಿರುವ ೨೬೨ ಕಾಮಗಾರಿಗಳಲ್ಲಿ ನೈಸರ್ಗಿಕ ಸಂಪನ್ಮೂಲ ನಿರ್ವಹಣೆ ಸಂಬಂಧಿಸಿದ ೧೬೨ ಮತ್ತು ಜಲ ಸಂರಕ್ಷಣೆ ಸಂಬಂಧಿಸಿದ ೮೫ ಕಾಮಗಾರಿಗಳಿವೆ. ಪ್ರತಿಯೊಂದು ಗ್ರಾಮ ಪಂಚಾಯತಿಗಳಲ್ಲಿ ಜಲ ಸಂರಕ್ಷಣೆಗೆ ಸಂಬಂಧಿಸಿದ ಯೋಜನೆಗಳನ್ನು ರೂಪಿಸಿ ಅನುಷ್ಠಾನಕ್ಕೆ ಕ್ರಮವಹಿಸಲು ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ತಿಳಿಸಿದರು.

ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಅಮರೇಶ ನಾಯಕ ಮಾತನಾಡಿ ಜಲ ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ ಪ್ರಧಾನ ಮಂತ್ರಿಗಳು ಮಾರ್ಚ ೨೨ ರಂದು ಜಲಶಕ್ತಿ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಈ ಯೋಜನೆ ನವೆಂಬರ ೩೦ರವರೆಗೆ ನಡೆಯಲಿದ್ದು, ೫ ಪ್ರಮುಖ ಚಟುವಟಿಕೆಗಳ ಒಳಗೊಂಡಿದೆ. ಜಲ ಸಂರಕ್ಷಣೆ ಮತ್ತು ಮಳೆ ನೀರು ಕೊಯ್ಲು, ಸಾಂಪ್ರದಾಯಿಕ ಮತ್ತು ಇತರೆ ಜಲಮೂಲಗಳು, ಕೆರೆಗಳ ನವೀಕರಣ, ಬೋರವೆಲ್‌ಗಳ ಮರುಪೂರಣ ಮತ್ತು ಮರುಬಳಕೆ, ಜಲಾಯನ ಅಭಿವೃದ್ದಿ, ವ್ಯಾಪಕರ ಅರಣ್ಯೀಕರಣಗೊಳಿಸುವುದಾಗಿದೆ. ಈ ಕಾರ್ಯಕ್ರಮಕ್ಕೆ ವಿವಿಧ ಇಲಾಖೆಯ ಪಾತ್ರ ಬಹುಮುಖ್ಯವಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಉಪವಿಭಾಗಾಧಿಕಾರಿಗಳಾದ ಎಂ.ಗAಗಪ್ಪ, ಸಿದ್ದು ಹುಳ್ಳೊಳ್ಳಿ, ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು, ಆಯಾ ತಾಲೂಕಿನ ತಹಶೀಲ್ದಾರರು, ತಾಲೂಕಾ ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿಗಳು ಉಪಸ್ಥಿತರಿದ್ದರು.

೪೫ ವರ್ಷ ಮತ್ತು ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ
ಕೋವಿಡ್ ಲಸಿಕೆ ನೀಡುವ ನಾಲ್ಕನೇ ಹಂತ ಏಪ್ರೀಲ್ ೧ ರಿಂದ ಪ್ರಾರಂಭವಾಗಿದ್ದು, ೪೫ ವರ್ಷ ಹಾಗೂ ೪೫ ವರ್ಷ ಮೇಲ್ಪಟ್ಟ ಎಲ್ಲರಿಗೂ ಕೋವಿಡ್ ಲಸಿಕೆ ನೀಡಲಾಗುತ್ತಿದೆ. ಲಸಿಕೆ ನೀಡುವ ಸಲುವಾಗಿ ಹೆಚ್ಚಿನ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಈಗಾಗಲೇ ಪ್ರತಿದಿನ ೧೦ ಸಾವಿರ ಜನರಿಗೆ ಲಸಿಕೆ ನೀಡಲಾಗುತ್ತಿದ್ದು, ಇನ್ನು ಮುಂದೆ ೧೫ ರಿಂದ ೨೦ ಸಾವಿರವರೆಗೆ ನೀಡುವ ಗುರಿ ಹೊಂದಲಾಗಿದೆ. ಗ್ರಾಮ ಮಟ್ಟದಲ್ಲಿ ಈ ಬಗ್ಗೆ ಡಂಗುರ ಸಾರಿ ಜಾಗೃತಿ ಮೂಡಿಸಲು ಕ್ರಮವಹಿಸಲಾಗುತ್ತಿದೆ. ಕೋವಿಡ್ ನಿಯಂತ್ರಿಸುವ ನಿಟ್ಟಿನಲ್ಲಿ ಮಾಸ್ಕ ಕಡ್ಡಾಯಗೊಳಿಸಲಾಗಿದ್ದು, ನಗರ ಮತ್ತು ಗ್ರಾಮೀಣ ಮಟ್ಟದಲ್ಲಿ ಮಾಸ್ಕಧರಿಸದಿದ್ದರೆ ದಂಡ ಹಾಕಲಾಗುತ್ತಿದೆ.
ಕ್ಯಾಪ್ಟನ್ ಡಾ.ಕೆ.ರಾಜೇಂದ್ರ, ಜಿಲ್ಲಾಧಿಕಾರಿ